ಕನ್ನಡಪ್ರಭ ವಾರ್ತೆ ಹನೂರು
ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರನ್ನು ಭೇಟಿಯಾದ ವಿಷ ಪ್ರಸಾದ ದುರಂತದ ಸಂತ್ರಸ್ಥರು, ಹನೂರು ತಾಲೂಕಿನ ಶ್ರೀ ಕ್ಷೇತ್ರ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದಲ್ಲಿ ಏಳು ವರ್ಷಗಳ ಹಿಂದೆ ವಿಷಪ್ರಸಾದ ತಿಂದಂತ ವಿವಿಧ ಗ್ರಾಮದ 17 ಮಂದಿ ಸಾವನ್ನಪ್ಪಿದ್ದಾರೆ. 150ಕ್ಕೂ ಹೆಚ್ಚು ಮಂದಿ ಸಂಪೂರ್ಣವಾಗಿ ಗುಣಮುಖರಾಗದೆ ಬಾಧಿತರಾಗಿ ಬಳಲುತ್ತಿದ್ದಾರೆ. ಇದಕ್ಕೆ ಕಾರಣಕರ್ತನಾದ ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ನೀಡಿರುವುದು ಸಂತ್ರಸ್ತರಿಗೆ ಭಯದ ವಾತಾವರಣ ಉಂಟಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಮಂಜೂರಾದ ಜಾಮೀನನ್ನು ರದ್ದುಗೊಳಿಸಲು ಸರ್ಕಾರಕ್ಕೆ ಮತ್ತು ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿ ಜಾಮೀನು ರದ್ಧತಿ ಮಾಡುವಂತೆ ಸಂತ್ರಸ್ತರು ಡಿಸಿಗೆ ಮನವಿ ಸಲ್ಲಿಸಿದರು.ಸವಲತ್ತು ನೀಡಲು ಕ್ರಮ ಕೈಗೊಳ್ಳಿ:ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಸರ್ವೇ ನಂಬರ್ 42 ರ ಪೈಕಿ 2 ಎಕರೆ ಸರ್ಕಾರಿ ಜಮೀನನ್ನು 2019 ರಲ್ಲಿ ಸುಳ್ವಾಡಿ ವಿಷಪ್ರಸಾದದ ಸಂತ್ರಸ್ತರಿಗೆ ನೀಡಲು ಮಂಜೂರು ಮಾಡಲಾಗಿದೆ. ಆದರೆ ಏಳು ವರ್ಷ ಕಳೆದರೂ ವಿಷ ಪ್ರಸಾದ ಸಂತ್ರಸ್ತರಿಗೆ ಇನ್ನೂ ವಿತರಣೆಯಾಗಿಲ್ಲ. ಕೂಡಲೇ ಇದರ ಸೌಲಭ್ಯ ಒದಗಿಸಬೇಕು ಹಾಗೂ ಬಾಧಿತರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡಬೇಕಾಗಿ ಮನವಿ ಮಾಡಿದರು.
----------
ಹನೂರು ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ಬೇಡ ಜಿಲ್ಲಾಧಿಕಾರಿಗೆ ಸಂತ್ರಸ್ತರಿಂದ ಮನವಿ ಸಲ್ಲಿಸಲಾಯಿತು.