ವಿದ್ಯಾರ್ಥಿಗಳು ಉತ್ತಮ ಸಮಾಜ ಕಟ್ಟಬೇಕು: ಡಾ.ಕೆ.ಪ್ರಕಾಶ್ ಶೆಟ್ಟಿ

KannadaprabhaNewsNetwork |  
Published : Sep 20, 2026, 04:00 AM IST
ರಾಮಕೃಷ್ಣ ಮಠದಲ್ಲಿ ಪ್ರಜ್ಞಾ - ೨೦೨೬ ಶೈಕ್ಷಣಿಕ ವಿಚಾರ ಸಂಕಿರಣ ನಡೆಯಿತು  | Kannada Prabha

ಸಾರಾಂಶ

ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸನ್ನು ಸಾಧಿಸುವುದರ ಜೊತೆಗೆ ಉತ್ತಮ ಸಮಾಜ ಕಟ್ಟುವಲ್ಲಿ ತಮ್ಮ ಪಾತ್ರ ನಿರ್ವಹಿಸಬೇಕು ಎಂದು ಮಂಗಳೂರಿನ ಎಂ.ಆರ್.ಜಿ. ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ಪ್ರಕಾಶ್ ಶೆಟ್ಟಿ ಹೇಳಿದರು.

ಮಂಗಳೂರು : ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸನ್ನು ಸಾಧಿಸುವುದರ ಜೊತೆಗೆ ಉತ್ತಮ ಸಮಾಜ ಕಟ್ಟುವಲ್ಲಿ ತಮ್ಮ ಪಾತ್ರ ನಿರ್ವಹಿಸಬೇಕು ಎಂದು ಮಂಗಳೂರಿನ ಎಂ.ಆರ್.ಜಿ. ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ಪ್ರಕಾಶ್ ಶೆಟ್ಟಿ ಹೇಳಿದರು.ಮಂಗಳೂರಿನ ರಾಮಕೃಷ್ಣ ಮಿಷನ್‌ನಲ್ಲಿ ನಡೆದ ಪ್ರಜ್ಞಾ - ವೃತ್ತಿಪರ ವಿದ್ಯಾರ್ಥಿಗಳ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಶಾಸಕ ಡಿ.ವೇದವ್ಯಾಸ ಕಾಮತ್ ಮಾತನಾಡಿ, ನಮ್ಮ ಹಿರಿಯರ ಬಳಿ ಅಕ್ಷರಜ್ಞಾನ ಇಲ್ಲದಿದ್ದರೂ, ಸಾಕ್ಷರತೆ ಮತ್ತುಜೀವನಾನುಭವದ ಜ್ಞಾನವಿತ್ತು. ಅದರಿಂದ ಅವರು ಜೀವನದಲ್ಲಿ ಹಲವು ಸಾಧನೆಗಳನ್ನು ಮಾಡಲು ಸಾಧ್ಯವಾಯಿತು. ಆದರೆ ಇಂದಿನ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಅಗತ್ಯ ಸೌಲಭ್ಯಗಳು ಹಾಗೂ ಅನೇಕ ಅವಕಾಶಗಳಿವೆ. ಅವುಗಳ ಸದುಪಯೋಗ ಪಡೆದುಕೊಂಡು ಜೀವನದಲ್ಲಿ ಯಶಸ್ಸು ಸಾಧಿಸುವ ಗುಣ ಬೆಳೆಸಿಕೊಳ್ಳಬೇಕು ಎಂದರು.

ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಇದ್ದರು.

ಉದ್ಘಾಟನಾ ಸಮಾರಂಭದ ನಂತರ ಸಂಪನ್ಮೂಲ ವ್ಯಕ್ತಿಗಳಿಂದ ಭಾಷಣ ಹಾಗೂ ಸಂವಾದ ನಡೆಯಿತು. ಮೈಸೂರು ರಾಮಕೃಷ್ಣ ಆಶ್ರಮದ ಸ್ವಾಮಿ ಯುಕ್ತೇಶಾನಂದಜಿ ಮೊದಲ ಅವಧಿ ನಡೆಸಿಕೊಟ್ಟರು. ಎರಡನೇ ಅವಧಿಯಲ್ಲಿ ಮುಕುಂದ್ ರಿಯಾಲಿಟಿ ಹಾಗೂ ವರ್ಟೆಕ್ಸ್ ಮ್ಯಾನೇಜ್ಡ್ ವ್ಯವಸ್ಥಾಪಕ ಪಾಲುದಾರ ಗುರುದತ್ತ ಶೆಣೈ, ಮಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸ್ಕಿಲ್ ಡೆವಲಪ್‌ಮೆಂಟ್ ಅಂಡ್ ರಿಸರ್ಚ್‌ನ ಕಾರ್ಯನಿರ್ವಾಹಕನಿರ್ದೇಶಕ ಡಾ.ರೋನಾಲ್ಡ್ ಸಿಕ್ವೇರಾ, ಮಂಗಳೂರಿನ ಕ್ಲಿನಿಕಲ್ ಸೈಕಾಲಜಿಸ್ಟ್ ಡಾ.ಕೆ.ಟಿ.ಶ್ವೇತಾ, ಬೆಂಗಳೂರಿನ ಅಮೆಜಾನ್ ಡೆವಲಪ್‌ಮೆಂಟ್ ಸೆಂಟರ್‌ನ ರಿಸ್ಕ್ ಇನ್ವೆಸ್ಟಿಗೇಷನ್ಸ್ ವಿಭಾಗದ ಪ್ರಬಂಧಕ ದೀಪಕ್ ರಾಜ್ ಭಾಗವಹಿಸಿದ್ದರು. ಇನ್ಫಿನುಯಿ ನಾಲೆಡ್ಜ್ ಹಬ್ ನಿರ್ದೇಶಕ ಹಾಗೂ ಸಹ ಸಂಸ್ಥಾಪಕ ವೈಶಾಖ್ ಕೆ.ಪಿ. ಸಂವಾದ ಕಾರ್ಯಕ್ರಮ ನಿರ್ವಹಿಸಿದರು.

ಭಾರತೀಯ ಸೇನೆಯ ನಿವೃತ್ತ ಯೋಧ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸ್ವಾಗತಿಸಿದರು. ಭಾರತೀಯ ಸೇನೆಯ ನಿವೃತ್ತ ಯೋಧ ಬೆಳ್ಳಾಲಗೋ ಪಿನಾಥ್ ರಾವ್ ವಂದಿಸಿದರು. ರೆಜಿನಾ ದಿನೇಶ್ ಕಾರ್ಯಕ್ರಮ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಜಾ ಸೇವಾ ಆಂದೋಲನದಲ್ಲಿ ಅವ್ಯವಸ್ಥೆ
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಅಂಗನವಾಡಿಗಳ ಕೊಡುಗೆ ಅಪಾರ: ಯಶವಂತರಾಯಗೌಡ