ಕನ್ನಡಪ್ರಭ ವಾರ್ತೆ ಆನಂದಪುರ
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರತ್ನಾಕರ ಹೊನಗೊಡು ಕಾಂಗ್ರೆಸ್ ಭ್ರಷ್ಟ ಆಡಳಿತಕ್ಕೆ ಪ್ರಜ್ಞಾವಂತ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದರು. ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಡಾ.ಧನಂಜಯ್ ಸರ್ಜಿ, ಶಿಕ್ಷಕರ ಕ್ಷೇತ್ರದಿಂದ ಭೋಜೇಗೌಡ ಸ್ಪರ್ಧಿಸಿ ಇಬ್ಬರೂ ಪ್ರಥಮ ಪ್ರಾಶಾಸ್ತ್ಯ ಮತದಲ್ಲಿ ಭಾರಿ ಅಂತರದಿಂದ ಜಯಗಳಿಸಿದ್ದು ಕಾಂಗ್ರೆಸ್‌ಗೆ ಮುಖಭಂಗವಾಗಿದೆ. ರಾಜ್ಯ ಕಾಂಗ್ರೆಸ್ ಭ್ರಷ್ಟ ಆಡಳಿತ ಒಂದೇ ವರ್ಷದಲ್ಲಿ ಮತದಾರರಿಗೆ ಬೇಸರ ಉಂಟಾಗಿದೆ. ಶಿಕ್ಷಕರ ಕೊರತೆ, ಶಿಕ್ಷಕರ ಸಮಸ್ಯೆ ಹಾಗೂ ಪದವೀಧರ ಸಮಸ್ಯೆಗೆ ಸ್ಪಂದಿಸದಿರುವ ಸರ್ಕಾರ ಮತದಾರರ ತಿರಸ್ಕರಿಸಿದ್ದಾರೆ ಎಂದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಭರ್ಮಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್ ಕುಮಾರ್, ಸದಸ್ಯ ಶಂಕರ್, ಶಕ್ತಿ ಕೇಂದ್ರದ ಅಧ್ಯಕ್ಷ ಶಾಂತಕುಮಾರ್, ಮಹೇಶ್ ಗೌಡ ,ಗಜೇಂದ್ರ ಗೌಡ, ರೇವಪ್ಪ, ಪ್ರವೀಣ್, ದೇವು, ಶ್ರೀಧರ , ನಾರಾಯಣಪ್ಪ, ಗಿರೀಶ, ಜಗ್ಗ, ರೇವಪ್ಪ, ಸೀನು, ಗುಡವಿ, ಇತರರಿದ್ದರು.-------
ಕನ್ನಡಪ್ರಭ ವಾರ್ತೆ ಸಾಗರ ಲೋಕಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿಧರ್ಮ ಕಟ್ಟುನಿಟ್ಟಾಗಿ ಪಾಲಿಸಿದ್ದರಿಂದ ಅರ್ಹ ಗೆಲುವು ದೊರೆತಿದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಕನ್ನಪ್ಪ ಬೆಳಲಮಕ್ಕಿ ಅಭಿಪ್ರಾಯಪಟ್ಟಿದ್ದಾರೆ. ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಡಾ.ಧನಂಜಯ ಸರ್ಜಿ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಭೋಜೇಗೌಡ ಅತಿಹೆಚ್ಚು ಮತ ಪಡೆದು ಆಯ್ಕೆಯಾಗಿರುವುದೇ ಇದಕ್ಕೆ ಸಾಕ್ಷಿ ಎಂದರು.
ಸಾಗರ ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರರಿಗೆ ಮುನ್ನಡೆ ದೊರಕಿರುವುದು ಶಾಸಕ ಗೋಪಾಲಕೃಷ್ಣ ಬೇಳೂರು ಜನಪ್ರಿಯತೆ ಕಡಿಮೆಯಾಗಿದೆ ಎನ್ನುವುದು ತೋರಿಸುತ್ತದೆ. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ದುರಂಹಕಾರಿ ನಡೆಯ ಜನರು ತಿರಸ್ಕಾರ ಮಾಡಿದ್ದಾರೆ. ಹಿಂದೆ ಚುನಾವಣೆಯಲ್ಲಿ ಸೋತು ೧೩ ವರ್ಷ ನಂತರ ಜಿಲ್ಲೆಗೆ ಬಂದು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಗೀತಾರಿಗೆ ಮತದಾರರು ತಕ್ಕಪಾಠ ಕಲಿಸಿದ್ದಾರೆ. ಬಿ.ವೈ.ರಾಘವೇಂದ್ರ, ಡಾ. ಧನಂಜಯ ಸರ್ಜಿ, ಭೋಜೇಗೌಡರಿಗೆ ಮತ ನೀಡಿದ ಎಲ್ಲರಿಗೂ ಪಕ್ಷವು ಕೃತಜ್ಞತೆ ಸಲ್ಲಿಸುತ್ತದೆ ಎಂದರು.