ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಐಕ್ಯೂಎಸಿ ಘಟಕದಿಂದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಡಿವಿಎಸ್ ಸಾರಂಗ್ 2024ರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಸಣ್ಣ ಸಣ್ಣ ಹುದ್ದೆ ಅಲಂಕರಿಸಿದರೂ ಸಂಪೂರ್ಣ ಮನಸ್ಸಿನಿಂದ ಕೆಲಸ ಮಾಡಿದಾಗ ಜೀವನದಲ್ಲಿ ಉನ್ನತ ಹಂತಕ್ಕೇರಲು ಸಾಧ್ಯವಿದೆ ಎಂದು ತಿಳಿಸಿದರು.
ದಾವಣಗೆರೆ ಯುಬಿಡಿಟಿಸಿಇ ಕಾಲೇಜಿನ ಡೀನ್ ಡಾ.ಎಸ್.ಮಂಜಪ್ಪ ಮಾತನಾಡಿ, ಇತ್ತೀಚೆಗೆ ವಿದ್ಯಾರ್ಥಿಗಳು ಅಧ್ಯಯನ ಹೊರತುಪಡಿಸಿ ಬೇರೆ ವಿಷಯಗಳ ಕಡೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದು, ಮೊಬೈಲ್‌ನಲ್ಲಿ ಹೆಚ್ಚು ಸಮಯ ವ್ಯರ್ಥ ಮಾಡ ಬಾರದು. ಶಿಕ್ಷಣದಲ್ಲಿ ಪರಿಶ್ರಮಪಟ್ಟರೆ ಜೀವನದಲ್ಲಿ ಫಲ ಸಿಗುತ್ತದೆ ಎಂದು ತಿಳಿಸಿದರು.ದೇಶೀಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ಸಾಂಸ್ಕೃತಿಕ ವೇದಿಕೆಗಳು ವಿದ್ಯಾರ್ಥಿ ಗಳಲ್ಲಿನ ಪ್ರತಿಭೆ ಅನಾವರಣಗೊಳಿಸಲು ಸಹಕಾರಿಯಾಗುತ್ತದೆ. ತಮ್ಮಲ್ಲಿರುವ ವಿಶೇಷ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.