ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಗೆಲುವು ಖಚಿತ

KannadaprabhaNewsNetwork |  
Published : Oct 19, 2026, 02:00 AM IST
ಚಿತ್ರ 2 | Kannada Prabha

ಸಾರಾಂಶ

ತಾಲೂಕಿನ ಹೊಸಯಳನಾಡು ಗ್ರಾಮದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಎಂ ಚಂದ್ರಪ್ಪ ಮತ ಪ್ರಚಾರ ನಡೆಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಹಿರಿಯೂರು

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಗೆಲುವು ಖಚಿತ ಎಂದು ಹೊಳಲ್ಕೆರೆ ಶಾಸಕ ಎಂ ಚಂದ್ರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ಹೊಸಯಳನಾಡು ಗ್ರಾಮದಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಮತ ಪ್ರಚಾರ ನಡೆಸಿ ಅವರು ಮಾತನಾಡಿದರು.

ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಅವರ ಆಶೋತ್ತರಗಳಿಗೆ ಧ್ವನಿಯಾಗುವ ನಮ್ಮ ಅಭ್ಯರ್ಥಿಯನ್ನು ಬೆಂಬಲಿಸಿ, ಚುನಾವಣೆಯಲ್ಲಿ ಮತದಾರರ ಬೆಂಬಲ ನಮ್ಮ ಪರವಾಗಿದ್ದು, ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಗೆಲುವು ನಮ್ಮದೇ ಎಂ ವಿಶ್ವಾಸವಿದೆ. ಜನರು ಸರ್ಕಾರದ ಆಡಳಿತದ ಬಗ್ಗೆ ಅಸಮಾಧಾನ ಹೊಂದಿದ್ದು, ಮುಂಬರುವ ಹಿರಿಯೂರು ಉಪಚುನಾವಣೆಯಲ್ಲಿಯೂ ಸರ್ಕಾರಕ್ಕೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ.

ಹಿರಿಯೂರಿನಲ್ಲಿ ಬಿಜೆಪಿ ಅಧ್ಯಕ್ಷ ಅಭಿನಂದನ್ ಅವರು ಉತ್ತಮ ಸಂಘಟನೆ ಮಾಡುವ ಜೊತೆಗೆ ಮತದಾರರ ಒಲವು ನಮ್ಮ ಪರವಾಗಿದ್ದು ಜನರ ಬೆಂಬಲದೊಂದಿಗೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ದೊರೆಯಲಿದೆ ಎಂಬ ನಿರೀಕ್ಷೆ ಇದೆ ಎಂದರು.

ಜೆಡಿಎಸ್ ಮುಖಂಡ ಎಂ ರವೀಂದ್ರಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬರೀ ಸುಳ್ಳು ಭರವಸೆ ನೀಡುತ್ತಾ, ಜನರನ್ನು ದಾರಿ ತಪ್ಪಿಸುತ್ತಿದೆ. ಐದು ಗ್ಯಾರಂಟಿ ನೀಡಿದ್ದೇವೆ ಎಂದು ಪ್ರಚಾರ ಪಡೆಯುತ್ತಿರುವ ಕಾಂಗ್ರೆಸ್ ಸರ್ಕಾರ ಎಷ್ಟು ಜನ ಪದವೀಧರರಿಗೆ ಗ್ಯಾರಂಟಿ ಯೋಜನೆಯಲ್ಲಿ ಹಣ ನೀಡಿದೆ ಎಂಬುದನ್ನು ಸಾರ್ವಜನಿಕರಿಗೆ ತಿಳಿಸಬೇಕು.

ಶಿಕ್ಷಕರಿಗೆ, ರೈತರಿಗೆ, ಪದವೀಧರರಿಗೆ ಸುಳ್ಳು ಹೇಳುತ್ತಲೇ ಬರುತ್ತಿರುವ ಕಾಂಗ್ರೆಸ್ ಸರ್ಕಾರ ಅವರನ್ನು ವಂಚಿಸುತ್ತಿದೆ.

ಆದ್ದರಿಂದ, ಎನ್ ಡಿಎ ಅಭ್ಯರ್ಥಿಯಾದ ಸುರೇಶ್ ಅವರಿಗೆ ತಮ್ಮ ಮೊದಲ ಪ್ರಾಶಸ್ತ್ಯದ ಮತ ನೀಡಿ ಜಯಶೀಲರನ್ನಾಗಿ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಭಿನಂದನ್, ಜೆಡಿಎಸ್ ಅಧ್ಯಕ್ಷ ಶಂಕರ ಮೂರ್ತಿ ಬಿಜೆಪಿ ಜಿಲ್ಲಾಧ್ಯಕ್ಷ ಕೆಟಿ. ಕುಮಾರಸ್ವಾಮಿ, ಜೆಡಿಎಸ್ ಜಿಲ್ಲಾಧ್ಯಕ್ಷ ಕೆ ಮಂಜುನಾಥ್,ಬಿಜೆಪಿ ವಿಭಾಗ ಸಹ ಪ್ರಭಾರಿ ಎ ಮುರಳಿ, ಬಿಜೆಪಿ ಮತ್ತು ಜೆಡಿಎಸ್ ಮುಖಂಡರುಗಳಾದ ಡಿ.ಯಶೋಧರ್, ಎಂ ಜಯಣ್ಣ, ಮಾಧುರಿ ಗಿರೀಶ್, ವೆಂಕಟೇಶ್ ಯಾದವ್, ಜೆಬಿ. ರಾಜು, ನಾಗರಾಜ್,ತಮ್ಮಣ್ಣ, ದಿವಾಕರ್, ರಮೇಶ್, ಹನುಮಂತರಾಯಪ್ಪ, ನಿತಿನ್ ಗೌಡ, ದೇವರಾಜ್, ಯಶವಂತ್, ಪರಮೇಶ್, ಮಹೇಶ್, ಬಸವರಾಜ್, ಮುರಳೀಧರ್, ಸಿಕೆಟಿ. ಹನುಮಂತ, ಪ್ರಜ್ವಲ್, ತಿಪ್ಪೇಸ್ವಾಮಿ, ಲೋಕಣ್ಣ, ಸೋಮಣ್ಣ, ರಂಗಸ್ವಾಮಿ, ಪದಾಧಿಕಾರಿಗಳು, ಪದವೀಧರ ಮತದಾರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾರ್ಕೆಟ್‌ಗಳಲ್ಲಿ ದಸರಾ ಖರೀದಿ ಭರಾಟೆ ಜೋರು
ಮನೆಯ ಸಮೀಪ ಹೈಟೆನ್ಷನ್‌ ವೈಯರ್‌ ತಗುಲಿ ಅಕ್ಕ-ತಮ್ಮನಿಗೆ ಗಂಭೀರ ಗಾಯ