ಮತದಾರರ ಪ್ರೀತಿ ವಿಶ್ವಾಸದಿಂದ ಗೆಲುವು ನಿಶ್ಚಿತ

KannadaprabhaNewsNetwork |  
Published : May 08, 2024, 01:01 AM IST
ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದ್ದೇವರಮಠ ಅವರು ಪತ್ನಿ ಹಾಗೂ ಮಗಳೊಂದಿಗೆ ಮತದಾನ ಮಾಡಿರುವುದು. | Kannada Prabha

ಸಾರಾಂಶ

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಜನರು ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿವೆ

ಲಕ್ಷ್ಮೇಶ್ವರ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಜನರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿವೆ. ಮತದಾರರು ಕಾಂಗ್ರೆಸ್ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸದಿಂದ ನಾನು ಗೆಲುವು ಸಾಧಿಸುತ್ತೇನೆ ಎನ್ನುವ ವಿಶ್ವಾಸವಿದೆ ಎಂದು ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದ್ದೇವರಮಠ ಹೇಳಿದರು.

ಮಂಗಳವಾರ ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿರುವ ಮತಗಟ್ಟೆ ಸಂಖ್ಯೆ 109 ರಲ್ಲಿ ಕುಟುಂಬ ಸಮೇತರಾಗಿ ಮತದಾನ ಮಾಡಿ ಮಾತನಾಡಿದರು.

ಜನರು ಕಾಂಗ್ರೆಸ್ ಮೇಲೆ ತೋರುತ್ತಿರುವ ಪ್ರೀತಿ, ವಿಶ್ವಾಸ ಹಾಗೂ ಬೆಂಬಲ ಕಂಡು ನನಗೆ ಗೆಲುವಿನ ವಿಶ್ವಾಸ ಮೂಡಿದೆ.ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಜನರು ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿವೆ. ಮಹಿಳೆಯರು ಕಾಂಗ್ರೆಸ್ ಪಕ್ಷವು ಕೊಡ ಮಾಡಿರುವ ಗ್ಯಾರಂಟಿಗಳಿಂದ ಕುಟುಂಬದ ಸಮಸ್ಯೆ ಬಗೆಹರಿಸಲು ಸಾಧ್ಯವಾದ ಬಗ್ಗೆ ಮಾಹಿತಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಈ ಬಾರಿ ಉತ್ತಮ ಮಳೆ, ಕೆರೆ ಭರ್ತಿ: ಮುಳ್ಳುಗದ್ದುಗೆ ಕಾರ್ಣಿಕ
ಡಬ್ಬಿ ಮೆಣಸಿನಕಾಯಿ ಕ್ವಿಂಟಾಲ್‌ಗೆ 90 ಸಾವಿರ ರು. ದಾಖಲೆಯ ದರ!