ಕನ್ನಡಪ್ರಭ ವಾರ್ತೆ ಮಡಿಕೇರಿ
ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 11 ಅಭ್ಯರ್ಥಿಗಳು, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ 8 ಅಭ್ಯರ್ಥಿಗಳು ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ನೋಟಾ ಆಯ್ಕೆ ಇಲ್ಲ:ಭಾರತ ಚುನಾವಣಾ ಆಯೋಗ ಸೂಚಿಸಿರುವಂತೆ ಮತದಾರನ ಬೆರಳಿಗೆ ಅಳಿಸಲಾಗದ ಶಾಯಿಯನ್ನು ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಬಲಗೈ ತೋರುಬೆರಳು, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಬಲಗೈ ಮಧ್ಯದ ಬೆರಳು ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಲಗೈ ತೋರುಬೆರಳಿಗೆ ಹಾಕಲಾಗುವುದು. ಈ ಚುನಾವಣೆಯಲ್ಲಿ ನೋಟಾ ಆಯ್ಕೆ ಇರುವುದಿಲ್ಲ.
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 21,549 ಮತದಾರರು ಇದ್ದಾರೆ. ಅದರಲ್ಲಿ 11998 ಪುರುಷ ಮತದಾರರು, 9550 ಮಹಿಳಾ ಮತದಾರರು ಮತ್ತು ಒಬ್ಬರು ಇತರೆ ಮತದಾರರು ಇದ್ದಾರೆ. ಒಟ್ಟು 44 ಮತಗಟ್ಟೆಗಳಿವೆ.
ಹಾಸನ ಜಿಲ್ಲೆಯಲ್ಲಿ ಒಟ್ಟು ಮತಗಟ್ಟೆ 10, ಒಟ್ಟು ಮತದಾರರು 3526 ಅದರಲ್ಲಿ 2085 ಪುರುಷರು ಮತ್ತು 1441 ಮಹಿಳಾ ಮತದಾರರು ಇದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಒಟ್ಟು 20 ಮತಗಟ್ಟೆಗಳಿದ್ದು, ಒಟ್ಟು 10439 ಮತದಾರರು ಇದ್ದಾರೆ. ಅದರಲ್ಲಿ 5338 ಪುರುಷರು ಮತ್ತು 5100 ಮಹಿಳಾ ಮತದಾರರು, 1 ಇತರೆ ಮತದಾರರು ಇದ್ದಾರೆ.
ಕೊಡಗು ಜಿಲ್ಲೆಯಲ್ಲಿ 5 ಮತಗಟ್ಟೆಗಳಿದ್ದು, 1578 ಮತದಾರರು ಇದ್ದಾರೆ. ಅದರಲ್ಲಿ 543 ಪುರುಷರು ಮತ್ತು 1035 ಮಹಿಳಾ ಮತದಾರು ಇದ್ದಾರೆ.
ಕೊಡಗಿನಲ್ಲಿ 6 ಮತಗಟ್ಟೆ
ನೀತಿ ಸಂಹಿತೆ:
ಮತದಾರರಿಗೆ ಯಾವುದೇ ವಿಧವಾದ ಆಮಿಷ ಒಡ್ಡುವುದು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಲಿದ್ದು, ಆಮಿಷ ಒಡ್ಡುತ್ತಿರುವ ಬಗ್ಗೆ ದೂರನ್ನು ಸಂಬಂಧಿಸಿದ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಮತ್ತು ಚುನಾವಣಾ ವೀಕ್ಷಕರಿಗೆ ಸಲ್ಲಿಸಬಹುದು. ಮೂರು ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರು(ಅಬ್ಸರ್ವರ್ಸ್) ನೇಮಕಗೊಂಡಿರುತ್ತಾರೆ.ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಚುನಾವಣಾ ವೀಕ್ಷಕರಾಗಿ ಅನಿಲ್ ಕುಮಾರ್ ಟಿ.ಕೆ. (ದೂ.ಸಂ. 7204064565), ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಹರ್ಷ್ ಗುಪ್ತ (ದೂ.ಸಂ. 7204294565) ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಡಾ.ರವಿಶಂಕರ್ (ದೂ. ಸಂ. 7204214565) ಅವರನ್ನು ಚುನಾವಣಾ ವೀಕ್ಷಕರಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರರ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ವೆಬ್‌ಸೈಟ್ https://rcmysore.karnataka.gov.in ನಲ್ಲಿ ಪ್ರಚಾರ ಪಡಿಸಲಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಪದವೀಧರರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ತಿಳಿಸಿದ್ದಾರೆ.