ಮಜೂರು ಗ್ರಾಮ ಪಂಚಾಯಿತಿ ಕಚೇರಿಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ ನೀಡಿ ವಿವಿಧ ವಿಷಯಗಳ ಪ್ರಗತಿ ಪರಿಶೀಲನೆ ನಡೆಸಿದರು.
ಕಾಪು: ಇಲ್ಲಿನ ಮಜೂರು ಗ್ರಾಮ ಪಂಚಾಯಿತಿ ಕಚೇರಿಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ ನೀಡಿ ವಿವಿಧ ವಿಷಯಗಳ ಪ್ರಗತಿ ಪರಿಶೀಲನೆ ನಡೆಸಿದರು.
ಮಹಾತ್ಮಾಗಾಂಧಿ ನರೇಗಾ ಯೋಜನೆ, 15ನೇ ಹಣಕಾಸು ಅನುದಾನ, ಅಂಬೇಡ್ಕರ್ - ಬಸವ ವಸತಿ ಯೋಜನೆ, ಪ್ರಧಾನ್ ಮಂತ್ರಿ ಆವಾಸ್ ಯೋಜನೆ, ನಿವೇಶನ ಯೋಜನೆ, ಸ್ವಚ್ಛ ಬಾರತ್ ಮಿಷನ್, ಶೌಚಾಲಯ ನಿರ್ಮಾಣ, ತ್ಯಾಜ್ಯ ಸಂಗ್ರಹಣೆ, ಜಲಜೀವನ್ ಮಿಷನ್, ತೆರಿಗೆ ವಸೂಲಾತಿ ಮತ್ತಿತರ ವಿಷಯಗಳ ಪ್ರಗತಿ ಪರಿಶೀಲನೆ ಮಾಡಿ ಚರ್ಚಿಸಿದರು. ನಂತರ ಗ್ರಾ.ಪಂ.ನಲ್ಲಿ ಅನುಷ್ಠಾನಗೊಳಿಸಿರುವ ವೆಬ್ ಸೈಟ್ ಪರಿಶೀಲಿಸಿ ದತ್ತಾಂಶ ಸಂಗ್ರಹ, ಸಾರ್ವಜನಿಕರಿಗೆ ಸರಕಾರಿ ಸೌಲಭ್ಯ ಇನ್ನಿತರ ವಿಚಾರಗಳನ್ನು ಎಸ್.ಎಂ.ಎಸ್. ಮೂಲಕ ತಿಳಿಸುವ ವ್ಯವಸ್ಥೆ ವಿನೂತನವಾಗಿದ್ದು, ಈ ಪ್ರಯೋಗ ರಾಜ್ಯದಲ್ಲಿಯೇ ಪ್ರಥಮವಾಗಿರಬಹುದು ಎಂದವರು ಹೇಳಿದರು.
ಐಎಸ್‌ಓ ಪ್ರಮಾಣೀಕರಣಕ್ಕೆ ಮಜೂರು ಗ್ರಾ.ಪಂ. ಆಯ್ಕೆಯಾಗಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಲದೂರು, ಉಪಾಧ್ಯಕ್ಷೆ ಮಂಜುಳಾ ಆಚಾರ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಲಾಸಿನಿ, ಗ್ರಾಮ ಕರಣಿಕರಾದ ಕ್ಲಾರೆನ್ಸ್ ಲೆಸ್ಟರ್ನ್ ಕರ್ನೆಲಿಯೋ, ಅಂಗನವಾಡಿ ಮೇಲ್ವಿಚಾರಕಿ ಪೂರ್ಣಿಮಾ, ಪ್ರಾ.ಆ. ಅಧಿಕಾರಿ ಯಶೋದ, ಸ.ಆ. ಅಧಿಕಾರಿಗಳಾದ ಪೂಜಾ ಮತ್ತು ರಮ್ಯಾ, ಗ್ರಾಪಂ ಸದಸ್ಯರು, ಅಂಗನವಾಡಿ ಕಾರ್ಯಕರ್ತಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಸಹಾಯಕರು, ಪಂಚಾಯತ್ ಸಿಬ್ಬಂದಿ ಇದದ್ದರು. ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಸ್ವಚ್ಚತೆಯ ಬಗ್ಗೆ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಪಂಚಾಯಿತಿ ಕಾರ್ಯದರ್ಶಿ ಪ್ರಸಾದ್ ಭಂಡಾರಿ ಸ್ವಾಗತಿಸಿ, ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.