ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯಿಂದ ವಿಶೇಷ ಪೂಜೆ ಸಲ್ಲಿಕೆ

KannadaprabhaNewsNetwork |  
Published : Dec 30, 2024, 01:00 AM IST
29ಕೆಎಂಎನ್ ಡಿ31 | Kannada Prabha

ಸಾರಾಂಶ

ನಾಗಮಂಗಲ ತಾಲೂಕಿನ ಜವರನಹಳ್ಳಿಯಲ್ಲಿ ನೂತನವಾಗಿ ಪ್ರತಿಷ್ಠಾಪಿಸಿರುವ ಶ್ರೀ ಅರಸಮ್ಮದೇವಿ 24ನೇ ದಿನದ ನಿತ್ಯ ಪೂಜಾ ಮಹೋತ್ಸವದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಕೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ತಾಲೂಕಿನ ಜವರನಹಳ್ಳಿಯಲ್ಲಿ ನೂತನವಾಗಿ ಪ್ರತಿಷ್ಠಾಪಿಸಿರುವ ಶ್ರೀಅರಸಮ್ಮದೇವಿಯ 24ನೇ ದಿನದ ನಿತ್ಯ ಪೂಜಾ ಮಹೋತ್ಸವದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಭಾನುವಾರ ಬೆಳಗ್ಗೆ ಗ್ರಾಮದ ನೂತನ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಎಲ್.ಆರ್.ಶಿವರಾಮೇಗೌಡ ಅವರನ್ನು ಮಂಗಳವಾದ್ಯ ಹಾಗೂ ಮಹಿಳಾ ತಂಡದ ಚಂಡೆ ವಾದ್ಯದೊಂದಿಗೆ ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು.

ಬಳಿಕ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ದೇವಿಗೆ ನಮಸ್ಕರಿಸಿ ತೀರ್ಥಪ್ರಸಾದ ಸ್ವೀಕರಿಸಿ ಆಶೀರ್ವಾದ ಪಡೆದುಕೊಂಡ ಹೊರಟ್ಟಿ ಅವರಿಗೆ ಶಾಲು ಹಾರ ಹಾಕಿ ನೆನಪಿನ ಕಾಣಿಕೆ ಕೊಟ್ಟು ಆದಿಚುಂಚನಗಿರಿಯ ಹೇಮಗಿರಿ ಶಾಖಾಮಠದ ಕಾರ್ಯದರ್ಶಿ ಜೆ.ಎನ್.ರಾಮಕೃಷ್ಣೇಗೌಡ ಗೌರವಿಸಿದರು.

ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ, ಚಿತ್ರ ನಿರ್ಮಾಪಕ ನರಸಿಂಹಯ್ಯ, ರಾಜ್ಯ ಸಾವಯವ ಕೃಷಿ ಉನ್ನತ ಸಮಿತಿ ಮಾಜಿ ಉಪಾಧ್ಯಕ್ಷ ಎಚ್.ಟಿ.ಕೃಷ್ಣೇಗೌಡ, ಮುಖಂಡರಾದ ಬಿದರಕೆರೆ ಮಂಜೇಗೌಡ ಪಾಳ್ಯ ರಘು ಸೇರಿದಂತೆ ಹಲವರು ಇದ್ದರು.

ದಿನದರ್ಶಿಕೆಗಳು ಮಾಹಿತಿ ನೀಡುವ ಭಂಡಾರ: ಜಗದೀಶ್

ಮದ್ದೂರು:

ದಿನ ದರ್ಶಿಕೆಗಳು ದೈನಂದಿನ ಮಾಹಿತಿಗಳನ್ನು ನೀಡುವ ಭಂಡಾರವಾಗಿವೆ ಎಂದು ಮಾನಸ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ವಿ.ಕೆ.ಜಗದೀಶ್ ತಿಳಿಸಿದರು.

ತಾಲೂಕಿನ ಬೆಸಗರಹಳ್ಳಿ ಮಾನಸ ಎಜುಕೇಷನ್ ಟ್ರಸ್ಟ್‌ನಲ್ಲಿ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ದಿನದರ್ಶಿಕೆಗಳು ವಿಶೇಷ ದಿನಗಳು, ಹಬ್ಬಗಳು, ಗಣ್ಯರ ಜಯಂತಿ ಸೇರಿದಂತೆ ಹಲವು ಉಪಯುಕ್ತ ಮಾಹಿತಿಗಳನ್ನು ಒಳಗೊಂಡಿದೆ. ಪ್ರತಿಯೊಬ್ಬರು ದಿನಚರಿಗಳನ್ನು ಪ್ರತಿನಿತ್ಯ ನೋಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದರು.

ಈ ವೇಳೆ ಗಣ್ಯರಿಗೆ, ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಕ್ಯಾಲೆಂಡರ್‌ಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು. ಮಾನಸ ಎಜುಕೇಷನ್ ಟ್ರಸ್ಟ್ ನಿರ್ದೇಶಕ ಕೃಷ್ಣಪ್ಪ, ಕಾರ್ಯದರ್ಶಿ ಎಚ್.ಪಿ.ನಾಗರಾಜು, ಖಜಾಂಚಿ ಸನತ್ ಕುಮಾರ್, ಟ್ರಸ್ಟಿ ಶ್ರೀನಿವಾಸ್, ಸದಸ್ಯರಾದ ನಿವೃತ್ತ ಉಪನ್ಯಾಸಕ ಶಿವಬೋರಯ್ಯ, ಪ್ರಾಂಶುಪಾಲ ಪ್ರವೀಣ್, ಮುಖಂಡ ಲಿಂಗರಾಜು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!