ಬೆಳ್ತಂಗಡಿ: ದ.ಕ. ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕ್ಷೇತ್ರ. ನಮ್ಮಲ್ಲಿ ಅನೇಕರು ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅದರಲ್ಲೂ ವಿದ್ವತ್ ಶಿಕ್ಷಣ ಸಂಸ್ಥೆ ಸಮಾಜ ಮುಖಿಯಾಗಿ ಚಿಂತಿಸಿ, ಸಮಾಜದ ವಿದ್ಯಾರ್ಥಿಗಳಿಗಾಗಿ 54 ಕ್ಕೂ ಅಧಿಕ ಸ್ಪರ್ಧಾತ್ಮಕ ಪರೀಕ್ಷೆಗಳಿವೆ, ಅದಕ್ಕೆ ಹೇಗೆ ತಯಾರಿ ನಡೆಸಬೇಕೆಂಬ ನೆಲೆಯಲ್ಲಿ ಜಿಲ್ಲೆಯಲ್ಲೇ ಮೊದಲ ಬಾರಿಗೆ ಉಚಿತವಾಗಿ ಮಾರ್ಗದರ್ಶನ ನೀಡಲು ಮುಂದಾಗಿರುವ ಏಕೈಕ ಕಾಲೇಜೆಂದರೆ ಅದು ವಿದ್ವತ್ ಕಾಲೇಜು ಎಂದು ಹೇಳಲು ಹೆಮ್ಮೆಯಾಗುತ್ತಿದೆ ಎಂದು ಹಿರಿಯ ಪತ್ರಕರ್ತ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಹೇಳಿದರು.ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಿಂದ ಸೆ. 8ರಂದು ಕಾಲೇಜಿನ ಆವರಣದಲ್ಲಿ ನಡೆದ ‘ವಾಕ್ ಇಂಟು ವಿದ್ವತ್ , ಎ ಸ್ಟೆಪ್ ಇಂಟು ಸಕ್ಸೆಸ್’ ಎಂಬ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಸನ್ಮಾನ:ವಿಶೇಷ ಆಹ್ವಾನಿತರಾದ ಪದ್ಮಶ್ರೀ, ಶಿಕ್ಷಣ ಸಂತ ಹರೇಕಳ ಹಾಜಬ್ಬ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಪಿ.ಬಿ. ಹರೀಶ್ ರೈ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಉಚಿತ ಶೈಕ್ಷಣಿಕ ಸಮಾಲೋಚನೆಯಲ್ಲಿ ನೋಂದಾಯಿಸಿದ ವಿದ್ಯಾರ್ಥಿಗಳಿಗೆ ಬಹುಮಾನವಾಗಿ ನೀಡುವ ಟಿ. ಶರ್ಟ್ ನ್ನು ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅನಾವರಣ ಮಾಡಿದರು.ಕಾರ್ಯಕ್ರಮದಲ್ಲಿ ವಿದ್ವತ್ ಕಾಲೇಜು ಕಾರ್ಯದರ್ಶಿ ಪ್ರಜ್ವಲ್ ರೈ, ಟ್ರಸ್ಟಿಗಳಾದ ಎಂ.ಕೆ. ಕಾಶಿನಾಥ್, ಸುಚಿತ್ರಾ ಶೆಟ್ಟಿ, ರೇಶ್ಮಾ ಸುಭಾಶ್ಚಂದ್ರ ಶೆಟ್ಟಿ, ಆಡಳಿತಾಧಿಕಾರಿ ಅಶೋಕ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.ಶೈಕ್ಷಣಿಕ ನಿರ್ದೇಶಕ ಗಂಗಾಧರ ಮಂಡಗಳಲೆ ಸ್ವಾಗತಿಸಿದರು. ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರತಾಪ್ ಬಾಬು ಡಿ.ಎಂ. ಪ್ರಾಸ್ತಾವಿಸಿ ಮಾತನಾಡಿದರು. ಕಾಲೇಜು ಪ್ರಾಂಶುಪಾಲ ಹರೀಶ್ ಕೆ.ಆರ್. ವಂದಿಸಿದರು. ಬಾಲಕೃಷ್ಣ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು. ಅತಿಥಿಗಳ ಸಂದೇಶ ಪತ್ರವನ್ನು ಪಿಆರ್ ಒ ಚೈತ್ರೇಶ್ ಸಿ. ವಾಚಿಸಿದರು.ಪ್ರತಿಭಾ ಪುರಸ್ಕಾರವಾಗಿ ಲ್ಯಾಪ್ ಟಾಪ್, ಟ್ಯಾಬ್:ವಿದ್ವತ್ ಪ್ರತಿಭಾನ್ವೇಷಣೆ ಎಂಬ ಕಾರ್ಯಕ್ರಮದಡಿ ಕರ್ನಾಟಕ ರಾಜ್ಯದ ಎಲ್ಲೆಡೆಯಿಂದ ಆಗಮಿಸುವ 10ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪರೀಕ್ಷೆ’ ಬರೆಯುವ ಅವಕಾಶವನ್ನು ವಿದ್ವತ್ ಎಜುಕೇಶನ್ ಫೌಂಡೇಶನ್ ನೀಡಲಿದೆ. ಈ ಪರೀಕ್ಷೆಯಲ್ಲಿ ಅಗ್ರ ಕ್ರಮಾಂಕದಲ್ಲಿ ಗುರುತಿಸಿರುವ ವಿದ್ಯಾರ್ಥಿಗೆ ಲ್ಯಾಪ್ಟಾಪ್ ಮತ್ತು ಇತರ ಪ್ರತಿಭಾನ್ವಿತ 10 ವಿದ್ಯಾರ್ಥಿಗಳಿಗೆ ಟ್ಯಾಬ್ ನ್ನು ವಿಶೇಷ ಬಹುಮಾನವಾಗಿ ನೀಡಲಿದೆ ಹಾಗೂ ಟ್ಯಾಲೆಂಟ್ ಟೆಸ್ಟ್ ಅಥವಾ ಪ್ರತಿಭಾ ಪರೀಕ್ಷೆಯಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳಿಗೂ ಅವರ ಅಂಕ ಗಳಿಕೆಗನುಗುಣವಾಗಿ ಕಾಲೇಜು ಶುಲ್ಕದಲ್ಲಿ ವಿಶೇಷ ರಿಯಾಯಿತಿಯನ್ನು ಒದಗಿಸಲಾಗುತ್ತದೆ ಎಂದು ಸಂಸ್ಥೆ ಅಧ್ಯಕ್ಷ ಶುಭಾಶ್ಚಂದ್ರ ಶೆಟ್ಟಿ ತಿಳಿಸಿದರು.ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಿಂದ ಸೆ. 8ರಂದು ಕಾಲೇಜಿನ ಆವರಣದಲ್ಲಿ ನಡೆದ ‘ವಾಕ್ ಇಂಟು ವಿದ್ವತ್ , ಎ ಸ್ಟೆಪ್ ಇಂಟು ಸಕ್ಸೆಸ್’ ಎಂಬ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಸನ್ಮಾನ:ವಿಶೇಷ ಆಹ್ವಾನಿತರಾದ ಪದ್ಮಶ್ರೀ, ಶಿಕ್ಷಣ ಸಂತ ಹರೇಕಳ ಹಾಜಬ್ಬ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಪಿ.ಬಿ. ಹರೀಶ್ ರೈ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಉಚಿತ ಶೈಕ್ಷಣಿಕ ಸಮಾಲೋಚನೆಯಲ್ಲಿ ನೋಂದಾಯಿಸಿದ ವಿದ್ಯಾರ್ಥಿಗಳಿಗೆ ಬಹುಮಾನವಾಗಿ ನೀಡುವ ಟಿ. ಶರ್ಟ್ ನ್ನು ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅನಾವರಣ ಮಾಡಿದರು.ಕಾರ್ಯಕ್ರಮದಲ್ಲಿ ವಿದ್ವತ್ ಕಾಲೇಜು ಕಾರ್ಯದರ್ಶಿ ಪ್ರಜ್ವಲ್ ರೈ, ಟ್ರಸ್ಟಿಗಳಾದ ಎಂ.ಕೆ. ಕಾಶಿನಾಥ್, ಸುಚಿತ್ರಾ ಶೆಟ್ಟಿ, ರೇಶ್ಮಾ ಸುಭಾಶ್ಚಂದ್ರ ಶೆಟ್ಟಿ, ಆಡಳಿತಾಧಿಕಾರಿ ಅಶೋಕ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.ಶೈಕ್ಷಣಿಕ ನಿರ್ದೇಶಕ ಗಂಗಾಧರ ಮಂಡಗಳಲೆ ಸ್ವಾಗತಿಸಿದರು. ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರತಾಪ್ ಬಾಬು ಡಿ.ಎಂ. ಪ್ರಾಸ್ತಾವಿಸಿ ಮಾತನಾಡಿದರು. ಕಾಲೇಜು ಪ್ರಾಂಶುಪಾಲ ಹರೀಶ್ ಕೆ.ಆರ್. ವಂದಿಸಿದರು. ಬಾಲಕೃಷ್ಣ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು. ಅತಿಥಿಗಳ ಸಂದೇಶ ಪತ್ರವನ್ನು ಪಿಆರ್ ಒ ಚೈತ್ರೇಶ್ ಸಿ. ವಾಚಿಸಿದರು.ಪ್ರತಿಭಾ ಪುರಸ್ಕಾರವಾಗಿ ಲ್ಯಾಪ್ ಟಾಪ್, ಟ್ಯಾಬ್:ವಿದ್ವತ್ ಪ್ರತಿಭಾನ್ವೇಷಣೆ ಎಂಬ ಕಾರ್ಯಕ್ರಮದಡಿ ಕರ್ನಾಟಕ ರಾಜ್ಯದ ಎಲ್ಲೆಡೆಯಿಂದ ಆಗಮಿಸುವ 10ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪರೀಕ್ಷೆ’ ಬರೆಯುವ ಅವಕಾಶವನ್ನು ವಿದ್ವತ್ ಎಜುಕೇಶನ್ ಫೌಂಡೇಶನ್ ನೀಡಲಿದೆ. ಈ ಪರೀಕ್ಷೆಯಲ್ಲಿ ಅಗ್ರ ಕ್ರಮಾಂಕದಲ್ಲಿ ಗುರುತಿಸಿರುವ ವಿದ್ಯಾರ್ಥಿಗೆ ಲ್ಯಾಪ್ಟಾಪ್ ಮತ್ತು ಇತರ ಪ್ರತಿಭಾನ್ವಿತ 10 ವಿದ್ಯಾರ್ಥಿಗಳಿಗೆ ಟ್ಯಾಬ್ ನ್ನು ವಿಶೇಷ ಬಹುಮಾನವಾಗಿ ನೀಡಲಿದೆ ಹಾಗೂ ಟ್ಯಾಲೆಂಟ್ ಟೆಸ್ಟ್ ಅಥವಾ ಪ್ರತಿಭಾ ಪರೀಕ್ಷೆಯಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳಿಗೂ ಅವರ ಅಂಕ ಗಳಿಕೆಗನುಗುಣವಾಗಿ ಕಾಲೇಜು ಶುಲ್ಕದಲ್ಲಿ ವಿಶೇಷ ರಿಯಾಯಿತಿಯನ್ನು ಒದಗಿಸಲಾಗುತ್ತದೆ ಎಂದು ಸಂಸ್ಥೆ ಅಧ್ಯಕ್ಷ ಶುಭಾಶ್ಚಂದ್ರ ಶೆಟ್ಟಿ ತಿಳಿಸಿದರು.