ಮಡಿಕೇರಿ: ನಗರದ ಕೊಡಗು ವಿದ್ಯಾಲಯದಲ್ಲಿ ವಿದ್ಯಾರಂಭ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಲೆಯ ಪ್ರಾಂಶುಪಾಲರಾದ ಕೆ.ಎಸ್. ಸುಮಿತ್ರಾ ಮಾತನಾಡಿ, ವಿದ್ಯಾರ್ಥಿಗಳು ಅತ್ಯಧಿಕ ಮೊಬೈಲ್ ಫೋನ್ ಬಳಕೆ ಮಾಡದಂತೆ ಎಚ್ಚರ ವಹಿಸಿ ಎಂದು ತಿಳಿಸಿದರು. ಮೊಬೈಲ್ ಮಕ್ಕಳ ಶಾರೀರಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ತೊಂದರೆ ಉಂಟು ಮಾಡುತ್ತದೆ. ವಿದ್ಯಾರ್ಥಿಗಳು ಪುಸ್ತಕಪಠನ, ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಬೇಕು ಎಂದು ಅವರು ಕಿವಿಮಾತು ಹೇಳಿದರು.
ಶಾಲಾ ಶೈಕ್ಷಣಿಕ ಸಂಯೋಜಕಿ ಭಾರತಿ ಮಕ್ಕಳಿಗೆ ಅಕ್ಷರಭ್ಯಾಸ ಮಾಡಿದರು. ಕೊಡಗು ವಿದ್ಯಾಲಯ ಶಿಕ್ಷಕ ವೃಂದದವರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಶಿಕ್ಷಕಿ ಶೃತಿ ಬಿ. ಎಂ ಕಾರ್ಯಕ್ರಮ ವನ್ನು ನಿರೂಪಿಸಿ , ನಳಿನಿ ಕಿರಣ್ ವಂದಿಸಿದ ಕಾರ್ಯಕ್ರಮದಲ್ಲಿ ಪೋಷಕವೃಂದ , ಶಿಕ್ಷಕ ವೃಂದ ದವರು ಭಾಗವಹಿಸಿದ್ದರು.