23ರಂದು ಸವಣೂರು ಸೀತಾರಾಮ ರೈ ವಿವಾಹ ವಾರ್ಷಿಕೊತ್ಸವ 50ರ ಸಂಭ್ರಮ

KannadaprabhaNewsNetwork |  
Published : May 22, 2026, 03:00 AM IST
ಫೋಟೋ: ೨೦ಪಿಟಿಆರ್-ಸವಣೂರುಸವಣೂರು ಕೆ. ಸೀತಾರಾಮ ರೈ ಮತ್ತು ಕಸ್ತೂರಿಕಲಾ ರೈ ದಂಪತಿ  | Kannada Prabha

ಸಾರಾಂಶ

ಸವಣೂರು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಸ್ಥಾಪಕ, ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ, ಸವಣೂರಿನ ಶಿಲ್ಪಿ ಎಂದೇ ಹೆಸರಾಗಿರುವ ಉದ್ಯಮಿ ಸವಣೂರು ಕೆ. ಸೀತಾರಾಮ ರೈ ಮತ್ತು ಕಸ್ತೂರಿಕಲಾ ಎಸ್ ರೈ ವಿವಾಹದ 50ನೇ ವಾರ್ಷಿಕೊತ್ಸವ ಕಾರ್ಯಕ್ರಮ 23ರಂದು ಅಪರಾಹ್ನ 3 ಗಂಟೆಗೆ ಸವಣೂರು ರಶ್ಮಿ ನಿವಾಸದಲ್ಲಿ ನಡೆಯಲಿದೆ.

ಪುತ್ತೂರು: ಸವಣೂರು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಸ್ಥಾಪಕ, ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ, ಸವಣೂರಿನ ಶಿಲ್ಪಿ ಎಂದೇ ಹೆಸರಾಗಿರುವ ಉದ್ಯಮಿ ಸವಣೂರು ಕೆ. ಸೀತಾರಾಮ ರೈ ಮತ್ತು ಕಸ್ತೂರಿಕಲಾ ಎಸ್ ರೈ ವಿವಾಹದ 50ನೇ ವಾರ್ಷಿಕೊತ್ಸವ ಕಾರ್ಯಕ್ರಮ 23ರಂದು ಅಪರಾಹ್ನ 3 ಗಂಟೆಗೆ ಸವಣೂರು ರಶ್ಮಿ ನಿವಾಸದಲ್ಲಿ ನಡೆಯಲಿದೆ. 22ರಂದು ಪೂರ್ವಾಹ್ನ ಮಾಲೆಂಗಲ್ಲು ವಿಜಯಕುಮಾರ್ ತಂತ್ರಿಗಳ ನೇತೃತ್ವದಲ್ಲಿ ಶಿವಕುಮಾರ್ ಭಟ್ ಎಡಮಂಗಲ ಮಾರ್ಗದರ್ಶನದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆಯಲಿದೆ. ವೇದಮೂರ್ತಿ ಶ್ರೀವತ್ಸ ಕೆದಿಲಾಯ ಮತ್ತು ಸುಳ್ಯ ಅರಂಬೂರು ಕಂಚಿ ಕಾಮಕೋಟಿ ವೇದ ವಿದ್ಯಾಲಯದ ವೆಂಕಟೇಶ ಶಾಸ್ತ್ರಿ ಉಪಸ್ಥಿತರಿರುವರು.

23ರಂದು ನಡೆಯಲಿರುವ ಸೀತಾ ಕಸ್ತೂರಿ ಕಲ್ಯಾಣ 50ರ ಸಂಭ್ರಮ ಸಭಾ ಕಾರ್ಯಕ್ರಮದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮಂಗಳೂರು ಲಕ್ಷ್ಮೀ ಮೆಮೋರಿಯಲ್ ಎಜ್ಯುಕೇಶನ್ ಟ್ರಸ್ಟ್ ನ ಸಂಸ್ಥಾಪಕ ಡಾ. ಎ.ಜೆ. ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸನ್ಮಾನ ಕಾರ್ಯಕ್ರಮ ನಡೆಸಲಿದ್ದಾರೆ. ಕೊಂಬೆಟ್ಟು ಸರ್ಕಾರಿ ಪದವಿಪೂರ್ವ ಕಾಲೇಜ್‌ನ ಉಪನ್ಯಾಸಕ ಕಾವ್ಯ ಶೆಟ್ಟಿ ಅಭಿನಂದನಾ ನುಡಿಗಳನ್ನು ಆಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉಪಸ್ಥಿತರಿರುವರು.

ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸಂಸ್ಥಾಪಕ, ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ, ಕಂಬಳ ಉದ್ಘೋಷಕ ಹಾಗೂ ತೀರ್ಪುಗಾರ ಎಡ್ತೂರು ರಾಜೀವ ಶೆಟ್ಟಿ ಮತ್ತು ಕನ್ನಡ ಚಲನಚಿತ್ರ ನಿರ್ಮಾಪಕ ರವಿ ರೈ ಕಳಸ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು.

ಅಪರಾಹ್ನ 3ರಿಂದ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ‘ಸಂಗೀತ ಗಾನ ಸಂಭ್ರಮ’ ನಡೆಯಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಕುಂಠಿತ
ಈರಣ್ಣ ಮೆಳ್ಳಿಗೇರಿ ತಂಡಕ್ಕೆ ಪ್ರಿಮಿಯರ್ ಲೀಗ್, ನಗದು ₹೨ ಲಕ್ಷ ಬಹುಮಾನ