ಕನ್ನಡಪ್ರಭ ವಾರ್ತೆ ವಿಜಯಪುರ
ಫೀಲ್ಡ್‌ಗಿಳಿದ ಆಡಳಿತ ವರ್ಗ:
ಪಾಲಿಕೆ ಆಡಳಿತ ವರ್ಗವೇ ನಗರದ ವಿವಿಧ ಬಡಾವಣೆಗಳಲ್ಲಿ ನಾಗಠಾಣ ಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ, ಮಹಾನಗರ ಪಾಲಿಕೆ ಮಹಾಪೌರರಾದ ಮಹೇಜಬಿನ ಹೊರ್ತಿ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ವಿವಿಧ ಅಧಿಕಾರಿಗಳನ್ನು ಒಳಗೊಂಡ ತಂಡವೇ ನಗರದ ವಿವಿಧೆಡೆ ಭೇಟಿ ನೀಡಿ ಬಡಾವಣೆಗಳಲ್ಲಿನ ಸ್ವಚ್ಛತೆ ಕುರಿತು ಪರಿಶೀಲನೆ ನಡೆಸಿತು.ಮನೆಮನೆಗೆ ತೆರಳಿ ಲಾರ್ವಾ ಉತ್ಪತ್ತಿಯಾಗುವ ಕುರಿತು ಜಾಗೃತಿ ಕಾರ್ಯ ಮೂಡಿಸಲಾಗಿದೆ. ಡೆಂಘೀ ಕುರಿತು ಭಿತ್ತಿಪತ್ರ ಹಂಚಿಕೆ ಮಾಡಲಾಗಿದೆ. ಜ್ವರ, ತಲೆನೋವಿನಿಂದ ಬಳಲುತ್ತಿರುವವರು ಕಂಡುಬಂದಲ್ಲಿ ಅಂತಹವರ ರಕ್ತದ ಮಾದರಿ ಸಂಗ್ರಹ ಕಾರ್ಯ ನಡೆದಿದೆ. ಮನೆಗಳಲ್ಲಿ ನೀರು ಸಂಗ್ರಹ ಮಾಡಿರುವ ಟ್ಯಾಂಕ್ ಹಾಗೂ ಬ್ಯಾರಲ್‌ಗಳಲ್ಲಿ ಲಾರ್ವಾ ನಾಶಕ್ಕೆ ಔಷಧ ಹಾಕುವ ಕೆಲಸ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಿಬ್ಬಂದಿ ಬಳಸಿಕೊಂಡು ಉತ್ತಮ ಮೂಡಿಸುವ ಕಾರ್ಯ ನಡೆದಿದೆ.
-------------
ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗಿದ್ದು ಕೆಲವೇ ದಿನಗಳಲ್ಲಿ 700ಕ್ಕಿಂತ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಶುದ್ಧ ನೀರು ಇರುವ ಸಣ್ಣಪುಟ್ಟ ಸ್ಥಳದಲ್ಲೇ ಡೆಂಘೀ ಜ್ವರ ತರುವ ಈಡೀಸ್ ಸೊಳ್ಳೆ ಉತ್ಪತ್ತಿಯಾಗುತ್ತವೆ. ಹಾಗಾಗಿ ತೆಂಗಿನ ಚಿಪ್ಪು, ಸಂಗ್ರಹಿಸಿಟ್ಟ ನೀರಿನ ತೊಟ್ಟಿ, ಡ್ರಮ್‌ಗಳು, ಖಾಲಿ ಪ್ಲಾಸ್ಟಿಕ್ ಬಾಟಲಿಗಳು, ಟೈರ್ ಟ್ಯೂಬ್‌ಗಳು, ನೀರು ನಿಲ್ಲಲು ಅವಕಾಶ ಇರುವ ತಾಣಗಳೆ ಈಡೀಸ್ ಸೊಳ್ಳೆಗಳ ಉಗಮ ತಾಣವಾಗಿದೆ. ಆದ್ದರಿಂದ ಮನೆಯೊಳಗೆ ಹಾಗೂ ಹೊರಗೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು ಎಂದು 32ನೇ ವಾರ್ಡ್ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ.
ಡೆಂಘೀ ಹಾವಳಿ ಹೆಚ್ಚಾಗಿದ್ದು, ಬಡಾವಣೆಗಳಲ್ಲಿನ ಜನರು ಸಾಂಕ್ರಾಮಿಕ ರೋಗಗಳಿಗೆ ಹೆದರುವಂತಾಗಿತ್ತು. ಆದರೆ ಕನ್ನಡಪ್ರಭ ವರದಿ ಪ್ರಕಟವಾದ ಬಳಿಕ ಅಧಿಕಾರಿಗಳು ಹಾಗೂ ಸಿಬ್ಬಂದಿ ನೀರು ನಿಲ್ಲುವ ಪ್ರದೇಶಗಳು ಹಾಗೂ ಕೊಳಚೆ ಪ್ರದೇಶಗಳಿಗೆ ಭೇಟಿ ನೀಡಿ, ಕ್ರಮ ಕೈಗೊಂಡಿದ್ದು ಸಂತಸ ತಂದಿದೆ.