ಕನ್ನಡಪ್ರಭ ವಾರ್ತೆ ಶಿವಮೊಗ್ಗ
ವಿಜಯ ಸೌಹಾರ್ದ ಬ್ಯಾಂಕ್‌ನ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ನಮ್ಮ ಸಮೂಹ ಸಂಸ್ಥೆಯ ಶಾಖೆಗಳು ಕಾರ್ಯ ನಿರ್ವಹಿಸುತ್ತಿದ್ದು, ವಿಶಾಲ ಸೌಹಾರ್ದ ಬ್ಯಾಂಕ್ 25 ಶಾಖೆಗಳು ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಹೇಳಿದರು.
19 ವರ್ಷಗಳ ಹಿಂದೆ ಸ್ಥಾಪಿತವಾದ ನಮ್ಮ ಸೌಹಾರ್ದ ಬ್ಯಾಂಕ್ 48 ಸಾವಿರ ಕೋಟಿ ವಹಿವಾಟನ್ನು ನಡೆಸುತ್ತಿದೆ, ಕಳೆದ ವರ್ಷ 46 ಸಾವಿರ ಕೋಟಿ ವಹಿವಾಟು ನಡೆಸಿತ್ತು. ವರ್ಷದಿಂದ ವರ್ಷಕ್ಕೆ ನಮ್ಮ ವಹಿವಾಟು ಏರಿಕೆಯ ಹಾದಿಯಲ್ಲಿಯೇ ಸಾಗುತ್ತಿದೆ. ಕಳೆದ ವರ್ಷ 60 ಕೋಟಿ ಲಾಭವನ್ನು ಗಳಿಸಿದೆ. ಎನ್‌ಪಿಎ ಶೇ.1 ಕ್ಕಿಂತ ಕಡಿಮೆ ಇದೆ ಎಂದು ತಿಳಿಸಿದರು.ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇರುವಂತಹ ಎಲ್ಲಾ ಸೌಲಭ್ಯಗಳು ನಮ್ಮ ಬ್ಯಾಂಕಿನಲ್ಲೇ ಲಭ್ಯವಿದೆ. ಆದರೆ, ಗ್ರಾಹಕರಿಗೆ ಯಾವುದೇ ಸೇವಾಶುಲ್ಕ ವಿಧಿಸುವುದಿಲ್ಲ. ಜನಸ್ನೇಹಿಯಾಗಿ ನಮ್ಮ ಬ್ಯಾಂಕ್ ಇಲ್ಲಿಯವರೆಗೂ ಹಾಗೂ ಮುಂದೆಯೂ ಸಹ ಕಾರ್ಯ ನಿರ್ವಹಿಸಿಕೊಂಡು ಹೋಗಲಿದೆ. ಕರ್ನಾಟಕದಲ್ಲೇ ನಮ್ಮ ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ಕರ್ನಾಟಕದಲ್ಲೇ ಪ್ರಥಮ ಸ್ಥಾನ ಪಡೆದ ಪ್ರತಿಷ್ಟಿತ ಸಹಕಾರಿ ಸಂಸ್ಥೆಯಾಗಿದೆ. ಮುಂದಿನ ದಿನಗಳಲ್ಲಿ 125 ಶಾಖೆಗಳನ್ನು ತೆರೆಯುವ ಗುರಿ ಹಾಕಿಕೊಳ್ಳಲಾಗಿದ್ದು, ಪ್ರಾರಂಭದಲ್ಲಿ 400 ಸದಸ್ಯರಿಂದ 10 ಲಕ್ಷ ರು. ಬಂಡವಾಳದಿಂದ ಪ್ರಾರಂಭವಾಗಿ ಪ್ರಸ್ತುತ 2 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದ್ದು, 21.60 ಕೋಟಿ ರು. ಶೇರು ಬಂಡವಾಳ ಹೊಂದಿದೆ. ಪ್ರತಿವರ್ಷ ಸದಸ್ಯರಿಗೆ ಶೇ.೨೫ರಷ್ಟು ಲಾಭಾಂಶ ಹಂಚಿಕೆ ಮಾಡಿದ ಕರ್ನಾಟಕದ ಏಕೈಕ ಸಹಕಾರಿ ಸಂಘವಾಗಿದೆ. ಪ್ರದಾನ ಕಚೇರಿ ಸಹಿತ ಎಲ್ಲಾ ಶಾಖೆಗಳು ಗಣಕೀಕೃತಗೊಂಡು ಕೋರ್ ಬ್ಯಾಂಕಿಂಗ್ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಸಂಸದ ಬಿ.ವೈ.ರಾಘವೇಂದ್ರ ಜ್ಯೋತಿ ಬೆಳಗಿಸಿ ಸಂಸ್ಥೆಗೆ ಚಾಲನೆ ನೀಡಿದರು. ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸೇರಿದಂತೆ ಅನೇಕ ಗಣ್ಯರು ಶುಭ ಹಾರೈಸಿದರು. ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್, ಎಸ್.ದತ್ತಾತ್ರಿ, ವಡ್ನಾಳ್ ರಾಜಣ್ಣ, ಓಂಕಾರಪ್ಪ, ಬಿಜೆಪಿ ಮಾಧ್ಯಮ ಪ್ರಮುಖ್ ಎಸ್. ಚಂದ್ರಶೇಖರ್ , ಹಲವರಿದ್ದರು.
ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿಎಸ್‌ವೈ ಅಭಿಮಾನೋತ್ಸವಕ್ಕೆ ಭರದ ಸಿದ್ಧತೆ ನಡೆದಿದ್ದು, 10ಲಕ್ಷಕ್ಕೂ ಹೆಚ್ಚು ಬಿಎಸ್‌ವೈ ಅಭಿಮಾನಿಗಳು ಭಾಗವಹಿಸಲಿದ್ದಾರೆ. ನಾವು ಕೂಡ ಕಳೆದ ಕೆಲವು ದಿನಗಳಿಂದ ಈ ಸಮಾವೇಶದ ಸಿದ್ಧತೆಯಲ್ಲಿ ಪಾಲ್ಗೊಂಡಿದ್ದೇವೆ. ಕರ್ನಾಟಕ ರಾಜ್ಯದ ಐತಿಹಾಸಿಕ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿದ ಬಿಎಸ್‌ವೈ ಅಭಿಮಾನೋತ್ಸವಕ್ಕೆ ರಾಜ್ಯದ ಎಲ್ಲೆಡೆಯಿಂದ ಜನಸಾಗರ ಹರಿದುಬರಲಿದೆ. ದಾವಣಗೆರೆ ಮತ್ತು ಪಂಚರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರದಲ್ಲಿರುವ ಪಕ್ಷವೇ ಜಯಗಳಿಸುತ್ತದೆ. ಪಂಚರಾಜ್ಯಗಳ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ, ಪುದುಚೆರಿ ಮತ್ತು ಅಸ್ಸಾಂನಲ್ಲಿ ಬಿಜೆಪಿ ಅಧಿಕಾರ ಗಳಿಸಿದೆ. ತನ್ನ ಓಟ್ ಷೇರನ್ನು ಹೆಚ್ಚಳ ಮಾಡಿಕೊಂಡಿದೆ. ಅದೇ ರೀತಿ ಕೇರಳ ಮತ್ತು ತಮಿಳುನಾಡಿನಲ್ಲೂ ಉತ್ತಮ ಸಾಧನೆ ತೋರಿದೆ. ಪಕ್ಷ ಸಂಘಟಿತವಾಗಿದ್ದು, ತನ್ನ ಬಲವನ್ನು ಹೆಚ್ಚಿಸಿ ಕೊಳ್ಳುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತೆ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದರು.