ಕಲಾವಿದರಿಗೆ ಪಿ.ಆರ್.ಟಿ ಕಲಾ ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Sep 21, 2024, 01:50 AM IST
12 | Kannada Prabha

ಸಾರಾಂಶ

ಪ್ರತಿಷ್ಠಾನ ಸಲ್ಲಿಸಿರುವ ವಿವಿಧ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಕನ್ನಡಪ್ರಭ ವಾರ್ತೆ ಮೈಸೂರುಕಲಾವಿದ ಪಿ.ಆರ್. ತಿಪ್ಪೇಸ್ವಾಮಿ ಜನ್ಮ ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ನಾಡಿನ ವಿವಿಧ ಕಲಾವಿದರಿಗೆ ಪಿ.ಆರ್.ಟಿ ಕಲಾ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.ವಿಜಯನಗರ 2ನೇ ಹಂತದಲ್ಲಿರುವ ಶ್ರೀ ಕಲಾನಿಕೇತನ ಸ್ಕೂಲ್ ಆಫ್ ಆರ್ಟ್ ನಲ್ಲಿ ಪಿ.ಆರ್. ತಿಪ್ಪೇಸ್ವಾಮಿ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶುಕ್ರವಾರ ಆಯೋಜಿಸಿದ್ದ ಸಮಾರೋಪ ಸಮಾರಂಭದಲ್ಲಿ ಹಿರಿಯ, ಕಿರಿಯ ಕಲಾವಿದರು ಹಾಗೂ ಕಲಾಪೋಷಕರಿಗೆ ಪ್ರಶಸ್ತಿ ನೀಡಿ ಅಭಿನಂದಿದರು.ಕಲಾವಿದರಾದ ಬೆಂಗಳೂರಿನ ಕೆ.ವಿ. ಸುಬ್ರಮಹ್ಮಣ್ಯಂ, ಎ.ಜೆ. ಕಮಲಾಕ್ಷಿ, ಮೈಸೂರಿನ ಆರ್.ಜೆ. ಸಿಂಗ್, ರಾಘವೇಂದ್ರಮೂರ್ತಿ, ಕಲಬುರ್ಗಿಯ ಡಾ.ಜಿ.ಎಸ್. ಖಂಡೇರಾವ್, ದಿಲೀಪ್ ಕುಮಾರ್ ಕಾಳೆ, ಡಾ.ಪಿ. ಪರಶುರಾಮ್, ಧಾರವಾಡದ ಎಂ.ಆರ್. ಬಾಳಿಕಾಯಿ, ಸಂಡೂರಿನ ಡಾ.ವಿ.ಟಿ. ಕಾಳೆ, ಗದಗದ ಡಾ.ಡಿ.ಎ. ಉಪಾಧ್ಯ, ಮೂಡಿಗೆರೆಯ ಅಶೋಕ್, ಚಿಕ್ಕಮಗಳೂರಿನ ಮಧು ಶಿಲ್ಪ ಅಚಾರ್ಯ, ಸಿ. ಕಣ್ಮೇಶ್, ಎಂ.ಎಸ್. ಲಿಂಗರಾಜು, ಮಂಗಳೂರಿನ ಸೈಯದ್ ಆಸಿಪ್ ಅಲಿ, ತುಮಕೂರಿನ ಎಸ್.ಎಚ್. ನಾಗರಾಜು, ಹಂಪಿಯ ಡಾ. ಮೋಹನ್ ಪಾಂಚಾಳ್, ಹಿರಿಯೂರಿನ ಜೆ. ನರಸಿಂಹರಾಜು ಅವರಿಗೆ ಪಿ.ಆರ್.ಟಿ ಕಲಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇದೇ ವೇಳೆ ಜನ್ಮ ಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಬಹುಮಾನ ವಿತರಿಸಿದರು.ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ.ಸ. ಕುಮಾರ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ಎಂ.ಸಿ. ರಮೇಶ್, ಪಿ.ಆರ್. ತಿಪ್ಪೇಸ್ವಾಮಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ ಕದಂಬ, ಸಂಚಾಲಕ ರುದ್ರಣ್ಣ ಹರ್ತಿಕೋಟೆ, ಕಾರ್ಯದರ್ಶಿ ಕೆ.ಸಿ. ಮಹದೇವಶೆಟ್ಟಿ ಮೊದಲಾದವರು ಇದ್ದರು. ----ಬಾಕ್ಸ್... ಪಿ.ಆರ್. ತಿಪ್ಪೇಸ್ವಾಮಿ ಅಧ್ಯಯನ ಪೀಠ ಪುನಶ್ಚೇತನ- ಸಿಎಂ ಸಿದ್ದರಾಮಯ್ಯಮೈಸೂರು ವಿವಿ ಪಿ.ಆರ್. ತಿಪ್ಪೇಸ್ವಾಮಿ ಅಧ್ಯಯನ ಪೀಠ ಪುನಶ್ಚೇತನಗೊಳಿಸುವುದು ಸೇರಿದಂತೆ ಪಿ.ಆರ್. ತಿಪ್ಪೇಸ್ವಾಮಿ ಪ್ರತಿಷ್ಠಾನ ಸಲ್ಲಿಸಿರುವ ವಿವಿಧ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.ಚಿತ್ರಕಲಾವಿದ, ಜಾನಪದ ಜಂಗಮ, ಲೇಖಕ ಪಿ.ಆರ್. ತಿಪ್ಪೇಸ್ವಾಮಿ ಅವರು ಈ ನಾಡು ಕಂಡ ಅಪರೂಪದ ವ್ಯಕ್ತಿ. ಹತ್ತು ಹಲವು ಕ್ಷೇತ್ರಗಳಲ್ಲಿ ಅವರ ಕೊಡುಗೆ ಅಪಾರ. ಅವರ ಹೆಸರನ್ನು ಮುಂದಿನ ಪೀಳಿಗೆಗೆ ಉಳಿಸುವ ಸಲುವಾಗಿ, ತಾವು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ವಿವಿಯಲ್ಲಿ ತಿಪ್ಪೇಸ್ವಾಮಿ ಅಧ್ಯಯನ ಪೀಠ ಅನುಷ್ಠಾನಗೊಳಿಸಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಕೆಲಸ ಮಾಡುತ್ತಿಲ್ಲ. ದಯವಿಟ್ಟು ಅದನ್ನು ಪುನಶ್ಚತನಗೊಳಿಸಲು ಕುಲಪತಿಗೆ ಸೂಚಿಸಬೇಕು ಎಂದು ಮನವಿ ಮಾಡಲಾಯಿತು. ಮೈಸೂರು ವಿವಿ ಜಾನಪದ ವಸ್ತು ಸಂಗ್ರಹಾಲಯ ಪಿ.ಆರ್. ತಿಪ್ಪೇಸ್ವಾಮಿ ಅವರ ಶ್ರಮದ ಫಲ. ದಯವಿಟ್ಟು ವಸ್ತು ಸಂಗ್ರಹಾಲಯಕ್ಕೆ ತಿಪ್ಪೇಸ್ವಾಮಿ ಅವರ ಹೆಸರನ್ನು ನಾಮಕರಣ ಮಾಡಲು ಕ್ರಮ ಕೈಗೊಳ್ಳಬೇಕು, ಬೆಂಗಳೂರಿನ ಚಿತ್ರಕಲಾ ಪರಿಷತ್ ಸಮೀಪದ ರಸ್ತೆ ಅಥವಾ ವೃತ್ತಕ್ಕೆ ಪಿ.ಆರ್. ತಿಪ್ಪೇಸ್ವಾಮಿ ಅವರ ಹೆಸರಿಡಲು ಬಿಬಿಎಂಪಿಗೆ ಸೂಚಿಸಬೇಕು ಎಂದು ಕೋರಿದರು.ಪಿ.ಆರ್. ತಿಪ್ಪೇಸ್ವಾಮಿ ಅವರ ಕಲಾಕೃತಿಗಳನ್ನು ಡಿಜಿಟಲೀಕರಣ ಮಾಡಿಸಲು ಸರ್ಕಾರದಿಂದ ಹೆಚ್ಚಿನ ಧನ ಸಹಾಯ ನೀಡಬೇಕು, ಪ್ರತಿಷ್ಠಾನದ ಕಾರ್ಯ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ ನಿವೇಶನವೊಂದನ್ನು ಮಂಜೂರು ಮಾಡಬೇಕು, ಕಲಾವಿದರ ಮಾಸಾಶನದ ಜೊತೆಗೆ ಆರೋಗ್ಯ ವಿಮೆ ಕೊಡಬೇಕು ಎಂದು ಮನವಿ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ