ವಿಜಯನಗರ ಶೇ.86ರಷ್ಟು ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಪೂರ್ಣ: ಜಿಲ್ಲಾಧಿಕಾರಿ ದಿವಾಕರ

KannadaprabhaNewsNetwork |  
Published : Jun 01, 2025, 02:36 AM IST
29ಎಚ್‌ಪಿಟಿ5- ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್‌ ಸಿಂಗ್, ಜಿಪಂ ಸಿಇಒ ಅಕ್ರಂ ಅಲಿ ಷಾ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಚ್.ವಿ. ಮಂಜುನಾಥ ಮತ್ತಿತರರಿದ್ದರು. | Kannada Prabha

ಸಾರಾಂಶ

ಜಿಲ್ಲಾ ವ್ಯಾಪ್ತಿಯಲ್ಲಿ ಕೆಲವೆಡೆ ಉದ್ಯೋಗಕ್ಕಾಗಿ ಬೇರೆಡೆ ವಲಸೆ ಮತ್ತು ಇನ್ನಿತರ ಕಾರಣಗಳಿಂದ ಹೋಗಿರುವ ಕುಟುಂಬಗಳನ್ನು ಹೊರತು ಪಡಿಸಿ ಶೇ.86 ರಷ್ಟು ಸರ್ವೇ ಕಾರ್ಯ ಮುಗಿದಿದೆ.

ಕನ್ನಡಪ್ರಭ ವಾರ್ತೆ ಹೊಸಪೇಟೆ

ವಿಜಯನಗರ ಜಿಲ್ಲೆಯಲ್ಲಿ ಈಗಾಗಲೇ ನಡೆಯುತ್ತಿರುವ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಆಯಾ ನಗರ, ತಾಲೂಕು ಮತ್ತು ಗ್ರಾಮಗಳಿಂದ ಕೆಲಸಕ್ಕಾಗಿ ಬೇರೆಡೆ ವಲಸೆ ಹೋಗಿರುವ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಕುರಿತ ಸಮುದಾಯದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನ್ಯಾ. ಎಚ್.ಎನ್. ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಸುತ್ತಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ಕೆಲವೆಡೆ ಉದ್ಯೋಗಕ್ಕಾಗಿ ಬೇರೆಡೆ ವಲಸೆ ಮತ್ತು ಇನ್ನಿತರ ಕಾರಣಗಳಿಂದ ಹೋಗಿರುವ ಕುಟುಂಬಗಳನ್ನು ಹೊರತು ಪಡಿಸಿ ಶೇ.86 ರಷ್ಟು ಸರ್ವೇ ಕಾರ್ಯ ಮುಗಿದಿದೆ. ಇನ್ನೂ ಶೇ.14 ರಷ್ಟು ಮಾತ್ರ ಸಮೀಕ್ಷೆ ಬಾಕಿ ಇದೆ ಎಂದರು. ಜಿಲ್ಲೆಯಲ್ಲಿ 2011ರ ಜನಗಣತಿ ಪ್ರಕಾರ ಪರಿಶಿಷ್ಟ ಜಾತಿ ಜನಾಂಗದವರು 3,24,306 ಸಂಖ್ಯೆಯಲ್ಲಿ ಇದ್ದು. ಇದರ ಅನ್ವಯ ಜಿಲ್ಲೆಯಲ್ಲಿ 2025ಕ್ಕೆ ಸುಮಾರು 3,95,866 ಅಂದಾಜಿಸಲಾಗಿದೆ. ಈವರೆಗೆ 3,39,549 ಪರಿಶಿಷ್ಟ ಜಾತಿ ಜನಾಂಗದವರನ್ನು ಸರ್ವೇ ಮಾಡಲಾಗಿದೆ. ಮತ್ತು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯಲ್ಲಿ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರದಲ್ಲಿ ಮೇ 30 ರಿಂದ ಜೂ.1ರ ವರಗೆ ಮತ್ತು ಆನ್‌ಲೈನ್ ಮೂಲಕ ಸ್ವಯಂ ಘೋಷಣೆಗೆ ಜೂ.1 ರ ವರಗೆ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇದನ್ನು ಹೊರತುಪಡಿಸಿ ಜಿಲ್ಲೆಯಲ್ಲಿರುವ ವಲಸಿಗರು ಆದಷ್ಟು ಬೇಗ ಸಮೀಕ್ಷೆಯಲ್ಲಿ ಸ್ವಯಂಧೃಡೀಕರಿಸಿಕೊಳ್ಳಬೇಕು. ಸಮುದಾಯದ ಮುಖಂಡರು ಸಹಕರಿಸಬೇಕು. ಒಂದು ವೇಳೆ ವಲಸಿಗರು ಬರಲು ಸಾಧ್ಯವಾಗದಿದ್ದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್‌ ಸಿಂಗ್, ಜಿಪಂ ಸಿಇಒ ಅಕ್ರಂ ಅಲಿ ಷಾ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಚ್.ವಿ. ಮಂಜುನಾಥ, ಮುಖಂಡರಾದ ವೆಂಕಪ್ಪ,

ಸಣ್ಣಮಾರೆಪ್ಪ, ಮಲ್ಲೇಶಪ್ಪ, ಪಕ್ಕೀರಪ್ಪ ಬಾದಿಗಿ, ಡಿ.ಶೇಖರ್, ರಾಜಶೇಖರ್, ಹನುಮಂತಪ್ಪ, ಕರಿಯಪ್ಪ, ಭರತ್ ಕುಮಾರ್, ಮಹೇಶ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

PREV

Recommended Stories

ಕೂಡಲೇ ಹಳದಿ ಮಾರ್ಗ ಮೆಟ್ರೋ ಉದ್ಘಾಟನೆ ಮಾಡಿ : ತೇಜಸ್ವಿ ಆಗ್ರಹ
ಐದು ಸಾವಿರ ಕೋಟಿ ರು. ವೆಚ್ಚದ 5ನೇ ಹಂತದ ಕಾವೇರಿ ಯೋಜನೆಗೆ ಕೇವಲ 70 ಸಾವಿರ ಸಂಪರ್ಕ!