ಕನ್ನಡಪ್ರಭ ವಾರ್ತೆ ಹೊಸಪೇಟೆ
ಇಲ್ಲಿನ ಪತ್ರಿಕಾ ಭವನದಲ್ಲಿ ಸೋಮವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕಲುಬುರ್ಗಿಯಲ್ಲಿ ಕುರುಬ ಸಮಾಜದ ವತಿಯಿಂದ ಸ್ಥಾಪಿಸಲಾದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಂಚಿನ ಪ್ರತಿಮೆಯನ್ನು ಯಾವುದೇ ನೋಟೀಸು ನೀಡದೆ ಅಲ್ಲಿನ ಮಹಾನಗರ ಪಾಲಿಕೆ ಅಧಿಕಾರಿಗಳು ರಾತ್ರೋ ರಾತ್ರಿ ಪ್ರತಿಮೆಯನ್ನು ತೆರವುಗೊಳಿಸಿರುವುದನ್ನು ಕುರುಬರ ಸಂಘ ತೀವ್ರವಾಗಿ ಖಂಡಿಸುತ್ತದೆ. ಪ್ರತಿಮೆ ಪ್ರತಿಷ್ಠಾಪನೆ ಮಾಡಿ ಇನ್ನೇನು ಬೆಳಗ್ಗೆ ಅನಾವರಣವಾಗಬೇಕು ಎನ್ನುವಾಗ ಪ್ರತಿಮೆಯನ್ನು ತೆರವುಗೊಳಿಸಿದವರ ಹಿಂದಿನ ಉದ್ದೇಶ ಏನು ಎಂದು ಅವರು ಪ್ರಶ್ನಿಸಿದರು.ಮಾಜಿ ಸಿಎಂ ಸಿದ್ದರಾಮಯ್ಯನವರ ಪ್ರತಿಮೆಯನ್ನು ಕಲುಬುರ್ಗಿಯಲ್ಲಿ ಈ ಹಿಂದೆ ಇದ್ದ ಸ್ಥಳದಲ್ಲಿಯೇ ಮರು ಪ್ರತಿಷ್ಠಾಪನೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಸಲಾಗುತ್ತಿದೆ ಎಂದು ಅವರು ಹೇಳಿದರು.
ರಾಜ್ಯ ಕುರುಬ ಸಂಘದ ನಿರ್ದೇಶಕರಾದ ಕೆ.ಎಂ.ಹಾಲಪ್ಪ ಮಾತನಾಡಿ, ರಾಜ್ಯದ ಎಲ್ಲಾ ಸಮುದಾಯದ ಜನಮೆಚ್ಚಿದ ನಾಯಕ ಸಿದ್ದರಾಮಯ್ಯನವರ ಪ್ರತಿಮೆಯನ್ನು ಕಲುಬುರ್ಗಿ ಮಹಾನಗರ ಪಾಲಿಕೆ ತೆರವುಗೊಳಿಸಿರುವುದು ಸಿದ್ದರಾಮಯ್ಯನವರಿಗೆ ಮಾಡಿದ ಅವಮಾನವಾಗಿದೆ. ಇದನ್ನು ಕುರುಬರ ಸಂಘ ತೀವ್ರವಾಗಿ ಖಂಡಿಸುತ್ತದೆ. ಕಲುಬುರ್ಗಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಪ್ರತಿಮೆ ತೆರವುಗೊಳಿಸಿದ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತೆ ಅದೇ ಸ್ಥಳದಲ್ಲಿ ಪ್ರತಿಮೆ ಪ್ರತಿಷ್ಠಾಪಿಸಲು ಅವಕಾಶ ನೀಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರವಾದ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.
ಕುರುಬರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಜ್ಜಿಗಿ ನಾಗರಾಜ, ಕುರುಬರ ಸಂಘದ ಮುಖಂಡರಾದ ಕೆ. ಬಸವರಾಜ, ಗಂಟೆ ಸೋಮಶೇಖರ್, ಬಂದಿ ಪಂಪಾಪತಿ, ಜ್ಞಾನದೇವ, ಆರ್.ಆರ್. ತಾಯಪ್ಪ, ಮರಿ ರಾಮಣ್ಣ, ಕೆ.ಆರ್. ವೆಂಕಟೇಶ್ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.