ವಿದೇಶಿಗರನ್ನು ಸೆಳೆಯುತ್ತಿವೆ ವಿಜಯಪುರದ ಸ್ಮಾರಕಗಳು

KannadaprabhaNewsNetwork | Published : Sep 28, 2024 1:19 AM

ಸಾರಾಂಶ

ಈ ಭಾಗದ ಪ್ರವಾಸಿ ತಾಣಗಳು ದೇಶ, ವಿದೇಶದ ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಗೋಳಗುಮ್ಮಟದ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಆಚರಿಸುತ್ತಿರುವುದು ಹೆಮ್ಮೆಯ ವಿಷಯ. ಸ್ಮಾರಕಗಳ ರಕ್ಷಣೆಯ ಜೊತೆಗೆ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಈ ಭಾಗದ ಪ್ರವಾಸಿ ತಾಣಗಳು ದೇಶ, ವಿದೇಶದ ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಗೋಳಗುಮ್ಮಟದ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಆಚರಿಸುತ್ತಿರುವುದು ಹೆಮ್ಮೆಯ ವಿಷಯ. ಸ್ಮಾರಕಗಳ ರಕ್ಷಣೆಯ ಜೊತೆಗೆ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ, ಸಿಕ್ಯಾಬ್ ಇನ್ಸ್‌ಟ್ಯೂಷನ್ ಹಾಗೂ ಹೋಟೆಲ್ ಅಸೋಸಿಯೇಶನ್ ಸಹಯೋಗದಲ್ಲಿ ಶುಕ್ರವಾರ ಗೋಳಗುಮ್ಮಟ ಆವರಣದಲ್ಲಿ ಪ್ರವಾಸೋದ್ಯಮ ಮತ್ತು ಶಾಂತಿ ಘೋಷವಾಕ್ಯದಡಿಯಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅವರು ಮಾತನಾಡಿದರು. ಇತಿಹಾಸದ ಹಾಗೂ ಸ್ಮಾರಕಗಳ ಬಗ್ಗೆ ಅಧ್ಯಯನ ಮಾಡಿ ಅವುಗಳ ಮಹ್ವತವನ್ನು ಅರಿಯಬೇಕು. ನಮ್ಮ ರಾಜ್ಯದಲ್ಲಿ ಹಲವಾರು ಸ್ಮಾರಕ, ಪ್ರವಾಸಿ ಸ್ಥಳಗಳ ಮಹತ್ವ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.ಮುಸ್ತಾಕ್ ಮಹ್ಮದ್ ಇನಾಮದಾರ ಉಪನ್ಯಾಸ ನೀಡಿದರು. ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವರ್ಷದ ಉತ್ತಮ ಪ್ರವಾಸಿ ಮಾರ್ಗದರ್ಶಕ ಎಂದು ಜಹಾಂಗೀರ್, ಪ್ರವಾಸಿ ಮಿತ್ರ ಎಂದು ಡಿ.ಜೆ ಪತ್ತಾರ ಹಾಗೂ ಚಿತ್ರಕಲಾ ಸ್ಪರ್ಧೆ ಭಾಷಣ ಸ್ಪರ್ಧೆ, ರಸಪ್ರಶ್ನೆ, ಸ್ತಬ್ಧಚಿತ್ರ, ಕಿರುಚಿತ್ರ, ಸಾಕ್ಷ್ಯಚಿತ್ರ ಪೋಟೋಗ್ರಾಫಿ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಮಾಣಪತ್ರ ಹಾಗೂ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ವಿಜಯಪುರದ ಐತಿಹಾಸಿಕ ಪ್ರವಾಸಿ ತಾಣಗಳ ಭಾವಚಿತ್ರಗಳ ಪ್ರದರ್ಶನ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಬೆಳಕು ಚೆಲ್ಲುತ್ತಿರುವ ಕಂಟೆಂಟ್ ಕ್ರಿಯೇಟರ್ಸ್‌ರನ್ನು ಸನ್ಮಾನಿಸಲಾಯಿತು.ಈ ವೇಳೆ ಮೇಯರ ಮಹೇಜಬಿನ್ ಹೊರ್ತಿ, ಉಪಮೇಯರ್ ದಿನೇಶ ಹಳ್ಳಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೊಟೆಲ್‌ ಅಸೋಸಿಯೇಶನ್ ಅಧ್ಯಕ್ಷ ವಿಜಯಕುಮಾರ ಡೋಣಿ, ಮಹೇಶ ಕ್ಯಾತನೂರ, ಆರತಿ ಪಾಟೀಲ, ಡಿ.ಪಿ.ಜಾಧವ ಸೇರಿದಂತೆ ಎಎಸ್‌ಐ ಸಿಬ್ಬಂದಿ, ಟೂರಿಸ್ಟ್ ಗೈಡ್, ಬಂಗಾರಮ್ಮ ಸಜ್ಜನ ಕಾಲೇಜು, ಸಿಕ್ಯಾಬ್ ಇನ್ಸ್‌ಟ್ಯೂಷನ್ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share this article