ವಿಶ್ವಮಟ್ಟದ ಶ್ರೇಷ್ಠ ವಾಸ್ತುಶಿಲ್ಪಗಳ ತಾಣ ವಿಜಯಪುರ

KannadaprabhaNewsNetwork |  
Published : Nov 18, 2026, 03:00 AM IST
ಇಬ್ರಾಹಿಂ ರೋಜಾ ಅಂಗಳದಲ್ಲಿ ಧರೆಗಿಳಿದ ಕಲಾ ವೈಭವದ ಕಲಾಧಾರಾ | Kannada Prabha

ಸಾರಾಂಶ

ವಿಶ್ವಮಟ್ಟದ ಶ್ರೇಷ್ಠ ವಾಸ್ತುಶಿಲ್ಪದ ತಾಣವಾಗಿರುವ ವಿಜಯಪುರ ಜಿಲ್ಲೆಗೆ ವಿದೇಶಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ. ಇಂಜಿನಿಯರಿಂಗ್ ಅದ್ಭುತವಾಗಿರುವ ಗೋಳಗುಮ್ಮಟ, ತಾಜ್‌ಮಹಲ್ ನಿರ್ಮಾಣಕ್ಕೆ ಸ್ಫೂರ್ತಿಯಾಗಿರುವ ನಗರದಲ್ಲಿರುವ ಇಬ್ರಾಹಿಂ ರೋಜಾ, ಬಾರಾಕಮಾನ್ ಸೇರಿದಂತೆ ಹಲವು ಸ್ಮಾರಕಗಳು ವಿಶ್ವಮಟ್ಟದಲ್ಲಿ ಗಮನ ಸೆಳೆಯುವಂತಹ ಶ್ರೇಷ್ಠತೆಯನ್ನು ಹೊಂದಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ವಿಶ್ವಮಟ್ಟದ ಶ್ರೇಷ್ಠ ವಾಸ್ತುಶಿಲ್ಪದ ತಾಣವಾಗಿರುವ ವಿಜಯಪುರ ಜಿಲ್ಲೆಗೆ ವಿದೇಶಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ. ಇಂಜಿನಿಯರಿಂಗ್ ಅದ್ಭುತವಾಗಿರುವ ಗೋಳಗುಮ್ಮಟ, ತಾಜ್‌ಮಹಲ್ ನಿರ್ಮಾಣಕ್ಕೆ ಸ್ಫೂರ್ತಿಯಾಗಿರುವ ನಗರದಲ್ಲಿರುವ ಇಬ್ರಾಹಿಂ ರೋಜಾ, ಬಾರಾಕಮಾನ್ ಸೇರಿದಂತೆ ಹಲವು ಸ್ಮಾರಕಗಳು ವಿಶ್ವಮಟ್ಟದಲ್ಲಿ ಗಮನ ಸೆಳೆಯುವಂತಹ ಶ್ರೇಷ್ಠತೆಯನ್ನು ಹೊಂದಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.ವಿಜಯಪುರದ ಕಲೆ, ವಾಸ್ತುಶಿಲ್ಪ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ವಿಶ್ವಮಟ್ಟದಲ್ಲಿ ಪರಿಚಯಿಸುವ ಉದ್ದೇಶದಿಂದ ರಾಜ್ಯಸಭಾ ಸದಸ್ಯೆ ಡಾ.ಸುಧಾಮೂರ್ತಿ ಅವರ ಪರಿಕಲ್ಪನೆಯಲ್ಲಿ ರೂಪುಗೊಂಡಿರುವ ಕಲಾಧಾರಾ ಸಾಂಸ್ಕೃತಿಕ ಉತ್ಸವ ಎರಡನೇ ವರ್ಷವೂ ವೈಭವಯುತವಾಗಿ ನಡೆಯಿತು. ಕಳೆದ ವರ್ಷ ಗೋಳಗುಮ್ಮಟದ ಆವರಣದಲ್ಲಿ ನಡೆದಿದ್ದ ಉತ್ಸವ ಈ ಬಾರಿ ಐತಿಹಾಸಿಕ ಇಬ್ರಾಹಿಂ ರೋಜಾ ಅಂಗಳದಲ್ಲಿ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ ಮಾತನಾಡಿದರು. ಕಲಾಧಾರಾ ಉತ್ಸವವು ಇಂದು ನವರಸಪುರ ಉತ್ಸವವನ್ನು ನೆನಪಿಸಿದೆ. ಮುಂಬರುವ ದಿನಗಳಲ್ಲಿ ಕಲಾಧಾರಾ ತಂಡದ ಸಲಹೆಗಳನ್ನು ಸಹ ಪಡೆದುಕೊಳ್ಳಲಾಗುವುದು. ಆದಿಲ್ ಷಾಹಿ ಅರಸರ ಕಾಲದ ಸಮಗ್ರ ಸಾಹಿತ್ಯವನ್ನು ಕನ್ನಡಕ್ಕೆ ಭಾಷಾಂತರ ಮಾಡಲಾಗಿದೆ. ಈ ಸಾಹಿತ್ಯವನ್ನು ಉತ್ತರ ಭಾರತಕ್ಕೂ ತಲುಪಿಸುವ ಉದ್ದೇಶದಿಂದ ಪರ್ಷಿಯನ್ ಭಾಷೆಯಲ್ಲಿರುವ ಸಾಹಿತ್ಯವನ್ನು ಉರ್ದು ಭಾಷೆಗೂ ಅನುವಾದಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.ಜಿಲ್ಲಾಧಿಕಾರಿ ಡಾ.ಆನಂದ.ಕೆ ಮಾತನಾಡಿ, ವಿಜಯಪುರ ನಗರದಲ್ಲಿ 250ಕ್ಕೂ ಹೆಚ್ಚು ಸ್ಮಾರಕಗಳಿದ್ದು, ಅವುಗಳಲ್ಲಿ 82 ಸ್ಮಾರಕಗಳು ಸಂರಕ್ಷಿತ ಸ್ಮಾರಕಗಳ ಪಟ್ಟಿಯಲ್ಲಿವೆ. ಈ ಎಲ್ಲ ಸ್ಮಾರಕಗಳ ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಸ್ಥಳೀಯ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯವಾಗಿದೆ ಎಂದು ಹೇಳಿದರು. ಸಾಂಸ್ಕೃತಿಕ ವೈಭವ

ಕಲಾಧಾರಾ ಉತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಸುಕನ್ಯಾ ರಾಮಗೋಪಾಲ ಅವರು ಘಟ ವಾದನದ ಮೂಲಕ ಸಂಗೀತ ರಸದೌತಣ ನೀಡಿದರು. ವಾಣಿ ಮಂಜುನಾಥ ಕೊಳಲು ವಾದನ ನಡೆಸಿದರೆ, ರಂಜನಿ ವೆಂಕಟೇಶ ಮೃದಂಗ ಹಾಗೂ ರತ್ನಶ್ರೀ ಅಯ್ಯರ್‌ ತಬಲಾ ಸಾಥ್ ನೀಡಿದರು. ನಂತರ ಡಾ.ಸಂಜಯ ಶಾಂತಾರಾಮ ಮತ್ತು ತಂಡದ ನೃತ್ಯ ಕಲಾವಿದರು ಕುಚಿಪುಡಿ ನೃತ್ಯ ಪ್ರದರ್ಶಿಸಿ ಕಲಾರಸಿಕರನ್ನು ರಂಜಿಸಿದರು.ಖ್ಯಾತ ಇತಿಹಾಸ ತಜ್ಞರು ಹಾಗೂ ಪುರಾತತ್ವ ಇಲಾಖೆ ನಿವೃತ್ತ ನಿರ್ದೇಶಕ ಪದ್ಮಶ್ರೀ ಪುರಸ್ಕೃತ ಡಾ.ಕೆ.ಮೊಹಮ್ಮದ್, ಪುರಾತತ್ವ ಇಲಾಖೆಯ ಅಧೀಕ್ಷಕ ರಮೇಶ ಮೂಲಿಮನಿ, ಎಸ್‌ಪಿ ಲಕ್ಷ್ಮಣ ನಿಂಬರಗಿ, ಉಪವಿಭಾಗಾಧಿಕಾರಿ ಜುಫಿಷಾನ್ ಹಕ್, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಅರವಿಂದ ಹೂಗಾರ, ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಿ
ಸಹಕಾರಿ ಸಂಘಗಳು ಆರ್ಥಿಕಾಭಿವೃದ್ಧಿಗೆ ಪೂರಕವಾಗಿರಲಿ