ಕಳೆದೊಂದು ತಿಂಗಳಿನಿಂದ ಎಲ್ಲೆಂದರಲ್ಲಿ ಮಧ್ಯರಾತ್ರಿ ಮನೆಗಳಿಗೆ ನುಗ್ಗಿ ದರೋಡೆ ಮಾಡುತ್ತಿದ್ದ ಅನ್ಯರಾಜ್ಯದ ಐದು ಮುಸುಕುಧಾರಿಗಳ ಗ್ಯಾಂಗ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಹೊರವಲಯದಲ್ಲಿ ಗುರುವಾರ ನಡೆದಿದೆ.
ವಿಜಯಪುರ: ಕಳೆದೊಂದು ತಿಂಗಳಿನಿಂದ ಎಲ್ಲೆಂದರಲ್ಲಿ ಮಧ್ಯರಾತ್ರಿ ಮನೆಗಳಿಗೆ ನುಗ್ಗಿ ದರೋಡೆ ಮಾಡುತ್ತಿದ್ದ ಅನ್ಯರಾಜ್ಯದ ಐದು ಮುಸುಕುಧಾರಿಗಳ ಗ್ಯಾಂಗ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಹೊರವಲಯದಲ್ಲಿ ಗುರುವಾರ ನಡೆದಿದೆ.
ದಾಳಿ ವೇಳೆ ಮಧ್ಯಪ್ರದೇಶದ ಮಹೇಶ ಎಂಬಾತನಿಗೆ ಗುಂಡೇಟು ತಗುಲಿದ್ದು, ಆತನನ್ನು ಪೊಲೀಸರು ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಳಿದ ನಾಲ್ವರು ಪರಾರಿಯಾಗಿದ್ದಾರೆ.
ಗುರುವಾರ ರಾತ್ರಿ ಬಡಾವಣೆಯೊಂದರಲ್ಲಿ ಐವರು ಮುಸುಕುಧಾರಿಗಳು ಕಳ್ಳತನಕ್ಕೆ ಬಂದಿದ್ದರು. ಈ ವೇಳೆ ಪೊಲೀಸರು ಅವರನ್ನು ಬೆನ್ನಟ್ಟಿದ್ದಾರೆ. ಆಗ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಓರ್ವ ದರೋಡೆಕೋರನ ಕಾಲಿಗೆ ಗುಂಡು ಹಾರಿಸಿದ್ದಾರೆ.