)
ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸೌಜನ್ಯಾ ಬಸವರಾಜ ಕಂದಕೂರ 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ. ರಾಜ್ಯದಲ್ಲಿ ಒಟ್ಟು 7 ಮಕ್ಕಳು ಟಾಪರ್ ಆಗಿದ್ದು, ಈ ಪೈಕಿ ಸೌಜನ್ಯ ಕೂಡ ಒಬ್ಬಳಾಗಿದ್ದಾಳೆ. ಈ ಮೂಲಕ ರಾಜ್ಯ ಹಾಗೂ ಮತ್ತು ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೆಶಕ ವೀರಯ್ಯ ಸಾಲಿಮಠ ತಿಳಿಸಿದ್ದಾರೆ.
ನಾಗರಬೆಟ್ಟದ ಪಾಟೀಲ ಕನ್ನಡ ಮಾಧ್ಯಮ ಪ್ರೌಢಶಾಲೆಯ ನೇಹಾ ಗುರಡ್ಡಿ 624 ಅಂಕ ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದರೆ, ನಾಗರಬೆಟ್ಟದ ಎಸ್‌ಡಿಕೆ ಪ್ರೌಢಶಾಲೆಯ ಪೂಜಾ ಲಮಾಣಿ ಕನ್ನಡ ಮಾಧ್ಯಮದಲ್ಲಿ ಶೇ.99.84 ಅಂಕ ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.ಆಕ್ಸಫರ್ಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಜ್ಯೋತ್ಸ್ನಾ ಪಾಟೀಲ ಶೇ.99.68 ಅಂಕ ಪಡೆದು ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ. ಇವರೊಟ್ಟಿಗೆ ಮುದ್ದೇಬಿಹಾಳ ತಾಲೂಕಿನ ಮೈಲೇಶ್ವರ ಗ್ರಾಮದ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಗಂಗಮ್ಮ ಕೋಳೂರ ಶೇ.99.68 ಹಾಗೂ ಜಿಲ್ಲೆಯ ಬೇಳೂರು ಕ್ರಾಸ್ ಜೆಎಸ್‌ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸುಪರ್ಣಿಕಾ ಪಾಟೀಲ ಶೇ. 99.68 ಅಂಕ ಪಡೆದು ಜಿಲ್ಲೆಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಡಿಡಿಪಿಐ ವೀರಯ್ಯ ಸಾಲಿಮಠ ತಿಳಿಸಿದ್ದಾರೆ.