ಹಾಲು ಉತ್ಪಾದನೆಯಲ್ಲಿ ವಿಜಯಪುರ ಪಾಲು ಪ್ರಧಾನ

KannadaprabhaNewsNetwork |  
Published : Oct 10, 2025, 01:02 AM IST
ಪಾಟೀಲ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಕೊಲ್ಹಾರರಾಜ್ಯದ ಹಾಲು ಉತ್ಪಾದನೆಯಲ್ಲಿ ಮಹಿಳೆಯರ ಪರಿಶ್ರಮ ಅತ್ಯಂತ ಅನುಪಮವಾಗಿದೆ. ರಾಜ್ಯದಲ್ಲಿ 1.10 ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಇದರಲ್ಲಿ ವಿಜಯಪುರ ಜಿಲ್ಲೆಯ ಪಾಲು ಪ್ರಧಾನವಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಕನ್ನಡಪ್ರಭ ವಾರ್ತೆ ಕೊಲ್ಹಾರ

ರಾಜ್ಯದ ಹಾಲು ಉತ್ಪಾದನೆಯಲ್ಲಿ ಮಹಿಳೆಯರ ಪರಿಶ್ರಮ ಅತ್ಯಂತ ಅನುಪಮವಾಗಿದೆ. ರಾಜ್ಯದಲ್ಲಿ 1.10 ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಇದರಲ್ಲಿ ವಿಜಯಪುರ ಜಿಲ್ಲೆಯ ಪಾಲು ಪ್ರಧಾನವಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ತಾಲೂಕಿನ ಮಸೂತಿ ಗ್ರಾಮದಲ್ಲಿ ಗ್ರಾಪಂ, ವಿಜಯಪುರ ಮತ್ತು ಬಾಗಲಕೋಟ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನೂತನ ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘದ ಉದ್ಘಾಟನೆ, ಜ್ಞಾನದಾಸೋಹಿ ಲಿಂ. ಸಂಗನಬಸವ ಮಹಾಶಿವಯೋಗಿಗಳ ಮಹಾದ್ವಾರ ಭೂಮಿಪೂಜೆ ಹಾಗೂ ಸಮುದಾಯ ಭವನದ ನೂತನ ಕಟ್ಟಡ ಉದ್ಘಾಟನೆ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಆರ್ಥಿಕ ಅಭಿವೃದ್ಧಿಗೆ ಹಾಲು ಉತ್ಪಾದನೆಯಲ್ಲಿ ತೊಡಗುವ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೂ ಸಹಕಾರಿ ಆಗಲಿದೆ. ಹಾಲು ಉತ್ಪಾದನೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಂಡಲ್ಲಿ ಗ್ರಾಮದ ಕೀರ್ತಿ ಹೆಚ್ಚಲಿದೆ. ಈರುಳ್ಳಿ ಬೆಳೆಗೆ ಮಸೂತಿ ಭಾಗ ಅತ್ಯಂತ ಹೆಸರಾಗಿದ್ದು, ಸಕ್ರೀಯ ಹಾಗೂ ಪ್ರಗತಿಪರ ರೈತರು ಈ ಭಾಗದಲ್ಲಿ ಕೃಷಿಯಲ್ಲಿ ತೊಡಗಿದ್ದಾರೆ. ರೈತರ ಬೆಳೆಗೆ ಸೂಕ್ತ ದರ ಸಿಗುವಂತಾದರೆ ರೈತನ ಪರಿಶ್ರಮಕ್ಕೆ ಫಲ ಸಿಕ್ಕಂತಾಗುತ್ತದೆ ಎಂದರು.ಬಸವನಬಾಗೇವಾಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಮಸೂತಿ ಗ್ರಾಮದ ಅಭಿವೃದ್ಧಿಗೂ ಆದ್ಯತೆ ನೀಡಿದ ಸಂತೃಪ್ತಿ ನನಗಿದೆ. ಇದಲ್ಲದೇ ಗ್ರಾಮದ ಗಣೇಶಗುಡಿಯಿಂದ ವೀರಭದ್ರೇಶ್ವರ ದೇವಸ್ಥಾನದವರೆಗೆ ರಸ್ತೆ ಅಭಿವೃದ್ಧಿಗೆ ₹ 70 ಲಕ್ಷ ಹಾಗೂ ಜ್ಞಾನದಾಸೋಹಿ ಸಂಗನಬಸವ ಮಹಾಶಿವಯೋಗಿಗ ಮಹಾದ್ವಾರ ನಿರ್ಮಾಣಕ್ಕೆ ₹ 25 ಲಕ್ಷ ಅನುದಾನ ನೀಡುವುದಾಗಿ ಘೋಷಿಸಿದರು.ಜ್ಞಾನದಾಸೋಹಿ ಸಂಗನಬಸವ ಮಹಾಶಿವಯೋಗಿಗಳು ಕೈಗೊಂಡ ಆಧ್ಯಾತ್ಮಿಕ, ಧಾರ್ಮಿಕ ಕಾರ್ಯಗಳು ನಮ್ಮ ಪಾಲಿಗೆ ಪ್ರೇರಣಾದಾಯಕ. ಇದಲ್ಲದೇ ಗ್ರಾಮದಲ್ಲಿ ಸಮುದಾಯ ಭವನದ ನೂತನ ಕಟ್ಟಡ ಉದ್ಘಾಟನೆಯಾಗಿದ್ದು, ಸ್ಥಳೀಯವಾಗಿ ಕಾರ್ಯಕ್ರಮ ನಡೆಸಲು ಅನುಕೂಲವಾಗಲಿದೆ ಎಂದರು.ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಸಲ್ಲಿಸಿದ ಮಸೂತಿ ಗ್ರಾಮಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ಚಿಕಿತ್ಸಾಲಯ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಯರನಾಳ ಗುರುಸಂಗನಬಸವ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ಉಪಾಧ್ಯಕ್ಷೆ ಶೋಭಾ ಆಸಂಗಿ, ಗ್ರಾಪಂ ಅಧ್ಯಕ್ಷೆ ರೇಣುಕಾ ಹರಿಜನ, ಉಪಾಧ್ಯಕ್ಷೆ ಭಾರತಿ ಬರಗಿ, ವಿಜಯಪುರ-ಬಾಲಕೋಟೆ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ವೀರನಗೌಡ ಕರಿಗೌಡರ, ನಿರ್ದೇಶಕರಾದ ನಿಂಗನಗೌಡ ಪಾಟೀಲ, ಬಾಬು ಪಾತ್ರೋಟಿ, ವ್ಯವಸ್ಥಾಪಕ ನಿರ್ದೇಶಕ ಶಿವಶಂಕರಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಸಿ.ಪಿ.ಪಾಟೀಲ, ಮೋಹನಗೌಡ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV

Recommended Stories

ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!
ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ