ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದ ಬಿಜೆಪಿ ಶಾಸಕರುಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಶವಗಳನ್ನು ಹೂತು ಹಾಕಿದ ಪ್ರಕರಣ ಕಪೋಲಕಲ್ಪಿತ ವಿಚಾರವಾಗಿದ್ದು, 17 ಕಡೆಗಳಲ್ಲಿ ಹೊಂಡ ತೋಡಿದರೂ ಸಾಕ್ಷಿ, ಪುರಾವೆ ಏನೂ ಸಿಗಲಿಲ್ಲ. ಇದರಿಂದಾಗಿ, ಪ್ರಕರಣದ ವ್ಯವಸ್ಥಿತ ಷಡ್ಯಂತ್ರದ ಹಿಂದೆ ಅಪಪ್ರಚಾರ ಹಾಗೂ ಶ್ರದ್ಧಾ ಭಂಗದ ಹುನ್ನಾರವೂ ಇದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ಸೋಮವಾರ ಸದನದಲ್ಲಿ ಈ ವಿಚಾರವಾಗಿ ಸರ್ಕಾರದ ಉತ್ತರ ಎದುರು ನೋಡುತ್ತಿದ್ದೇವೆ. ತನಿಖೆಗೆ ಯಾರ ವಿರೋಧ ಇಲ್ಲ, ಧರ್ಮಸ್ಥಳದ ವಿರುದ್ಧ ಅಪಪ್ರಚಾರ ವಿರುದ್ಧ ನಾವು ಬಂದಿದ್ದೇವೆ.
ನಿನ್ನೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಆದಾಗಲೂ ಅವರು ತನಿಖೆ ನಡೆಯಲಿ ಎಂದೇ ಹೇಳಿದ್ದರು. ಆದರೆ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಯುತ್ತಿರುವುದಕ್ಕೆ ನೊಂದುಕೊಂಡರು ಎಂದು ತಿಳಿಸಿದರು.ಈ ಪ್ರಕರಣದ ತನಿಖೆ ಸರಿಯಾದ ರೀತಿಯಲ್ಲಿ ನಡೆಯುತ್ತಿಲ್ಲ, ದೂರುದಾರ ಅನಾಮಿಕನನ್ನು ಮೊದಲು ತನಿಖೆಗೆ ಒಳಪಡಿಸಬೇಕಾಗಿತ್ತು. ಈ ಪ್ರಕರಣಗಳಿಗೆ ಸಂಬಂಧಿಸಿ ತೇಜೋವಧೆ ಮಾಡುತ್ತಿರುವ ಯೂಟ್ಯೂಬರ್ ವಿರುದ್ಧ ಸೋಮವಾರ ಸದನದಲ್ಲಿ ಹಕ್ಕುಚ್ಯುತಿ ಮಂಡಿಸುತ್ತೇನೆ ಎಂದು ವಿಶ್ವನಾಥ್ ತಿಳಿಸಿದರು.ಶಾಸಕ ಹರೀಶ್ ಪೂಂಜ, ಛಲವಾದಿ ನಾರಾಯಣಸ್ವಾಮಿ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಸಿ.ಟಿ. ರವಿ, ಶಾಸಕರಾದ ಭಾಗೀರಥಿ ಮುರುಳ್ಯ, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೋಳಿ, ಎಸ್.ಆರ್. ವಿಶ್ವನಾಥ್, ಧನಂಜಯ ಸರ್ಜಿ, ಕಿಶೋರ್ ಕುಮಾರ್ ಬೊಟ್ಯಾಡಿ, ಕೊರಣ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ರವಿಕುಮಾರ್, ಶ್ರೀವಾತ್ಸವ ಹಾಗೂ ಅಪಾರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.ಬಳಿಕ ಬಿ.ವೈ. ವಿಜಯೇಂದ್ರ ಅವರು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಕ್ಷೇತ್ರದ ಮುಂಭಾಗದಲ್ಲಿ ಭಿತ್ತಿಪತ್ರಗಳನ್ನು ಹಿಡಿದ ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಯ ಮುಖಂಡರು ‘ನಮ್ಮ ಧರ್ಮ, ನಮ್ಮ ಹಕ್ಕು’, ‘ಶಿಕ್ಷಿಸಿ ಶಿಕ್ಷಿಸಿ ಹಿಂದೂ ವಿರೋಧಗಳನ್ನು ಶಿಕ್ಷಿಸಿ’ ಎನ್ನುವ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದರು.ಸೋಮವಾರ ಅಧಿವೇಶನ ಇರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ದೇವಸ್ಥಾನ ಹಾಗೂ ವೀರೇಂದ್ರ ಹೆಗ್ಗಡೆ ಅವರ ಭೇಟಿ ಮುಗಿಸಿದ ಬಿಜೆಪಿ ಪ್ರಮುಖರು ತುರ್ತಾಗಿ ಬೆಂಗಳೂರಿಗೆ ಮರಳಿದರು.