ಮಂಡ್ಯ ಬಿಜೆಪಿಗ ಕೆಸಿಎನ್‌ ಮನವೊಲಿಸಿದ ವಿಜಯೇಂದ್ರ

KannadaprabhaNewsNetwork |  
Published : Mar 27, 2024, 01:02 AM ISTUpdated : Mar 27, 2024, 01:13 PM IST
BY Vijayendra

ಸಾರಾಂಶ

ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕರ ಜತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಭೆ ನಡೆಸಿ ಮುಖಂಡರಲ್ಲಿನ ಭಿನ್ನಮತ ಶಮನಗೊಳಿಸಿದರು. ಜೆಡಿಎಸ್‌ ಜತೆಗಿನ ಮೈತ್ರಿಯಿಂದ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಮನವೊಲಿಸಿ ಪಕ್ಷಕ್ಕಾಗಿ ದುಡಿಯುವಂತೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕರ ಜತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಭೆ ನಡೆಸಿ ಮುಖಂಡರಲ್ಲಿನ ಭಿನ್ನಮತ ಶಮನಗೊಳಿಸಿದರು.

ಜೆಡಿಎಸ್‌ ಜತೆಗಿನ ಮೈತ್ರಿಯಿಂದ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಮನವೊಲಿಸಿ ಪಕ್ಷಕ್ಕಾಗಿ ದುಡಿಯುವಂತೆ ಸೂಚಿಸಿದರು.

ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣಗೌಡ ಅವರು, ನನಗೆ ಕಾಂಗ್ರೆಸ್ ಪಕ್ಷ ಆಹ್ವಾನಿಸಿದ್ದು ನಿಜ. ಆದರೆ, ನಾನು ಬಿಜೆಪಿ ತೊರೆಯುವುದಿಲ್ಲ. 

ನಾನು ಯಾವಾಗಲೂ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಜೊತೆಗೆ ಇದ್ದೇನೆ. ಮುಂದೆಯೂ ಅವರೊಂದಿಗೆ ಇರುತ್ತೇನೆ ಎಂದರು.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಿತ್ರ ಪಕ್ಷವಾಗಿರುವ ಜೆಡಿಎಸ್ ಬೆಂಬಲಿಸುವುದಕ್ಕೆ ತುಂಬಾ ನೋವಾಗುತ್ತದೆ. ಕಳೆದ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರು ಬಹಳ ಕಷ್ಟಪಟ್ಟು ಚುನಾವಣೆ ನಡೆಸಿದ್ದಾರೆ. 

ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಬೇಕು ಎಂಬುದು ನಮ್ಮ ಗುರಿ. ಹೀಗಾಗಿ, ಈಗ ಮೈತ್ರಿಕೂಟದ ಅಭ್ಯರ್ಥಿಯನ್ನು ಬೆಂಬಲಿಸುವ ಹಂತದಲ್ಲಿ ಬಂದು ನಿಂತಿದ್ದೇವೆ ಎಂದರು.

ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ವಿಜಯೇಂದ್ರ ಅವರು ನಮಗೆ ಸೂಚನೆ ಕೊಟ್ಟಿದ್ದಾರೆ. ಇದನ್ನು ಕಾರ್ಯಕರ್ತರ ಸಭೆ ನಡೆಸಿ ತಿಳಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.

PREV

Recommended Stories

ಇಂದಿನಿಂದ ಪ್ರೊ ಕಬಡ್ಡಿ ಲೀಗ್‌ ಶುರು : 12ನೇ ಆವೃತ್ತಿ । 12 ತಂಡ, ಒಟ್ಟು 117 ಪಂದ್ಯ
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’