ಸುಮಲತಾ ಜೊತೆ ಶೀಘ್ರ ಭೇಟಿ: ಬಿವೈ ವಿಜಯೇಂದ್ರ

KannadaprabhaNewsNetwork |  
Published : Mar 27, 2024, 01:06 AM ISTUpdated : Mar 27, 2024, 01:09 PM IST
BY Vijayendra

ಸಾರಾಂಶ

ಟಿಕೆಟ್ ಕೈತಪ್ಪಿರುವ ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಶೀಘ್ರ ಅವರನ್ನು ಭೇಟಿ ಮಾಡುತ್ತೇನೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಟಿಕೆಟ್ ಕೈತಪ್ಪಿರುವ ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಶೀಘ್ರ ಅವರನ್ನು ಭೇಟಿ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮಂಗಳವಾರ ನಗರದಲ್ಲಿ ಮಂಡ್ಯ ಜಿಲ್ಲೆಯ ಬಿಜೆಪಿ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಬಾರಿ ಹೇಳಿದ್ದೇನೆ. 

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಎರಡು ಪಕ್ಷಗಳು ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು. 28 ಕ್ಷೇತ್ರಗಳನ್ನು ಗೆಲ್ಲಬೇಕು ಎಂಬ ಗುರಿಯನ್ನು ಇಟ್ಟುಕೊಂಡು ಹೊರಟಿದ್ದೇವೆ. 

ಈ ಹಿನ್ನೆಲೆಯಲ್ಲಿ ಮಂಡ್ಯ ಲೋಕಸಭೆಯಲ್ಲಿ ಎಲ್ಲವನ್ನೂ ಬದಿಗೊತ್ತಿ ಜೆಡಿಎಸ್‌ಗೆ ಬೆಂಬಲ ನೀಡಿ ಗೆಲ್ಲಿಸಬೇಕು ಎಂಬ ತೀರ್ಮಾನ ಮಾಡಿದ್ದೇವೆ ಎಂದರು.

ಮಂಡ್ಯದಲ್ಲಿ ನಾರಾಯಣಗೌಡ ಅವರು ಬಿಜೆಪಿಗೆ ಬಂದು ಚುನಾವಣೆಯಲ್ಲಿ ಗೆದ್ದು ಸಚಿವರಾಗಿ ಕೆಲಸ ಮಾಡಿದ್ದಾರೆ. ಬಿಜೆಪಿಯ ತಳಮಟ್ಟದಲ್ಲಿ ದೊಡ್ಡ ಪಡೆಯೇ ಇದೆ ಎಂದು ಇದೇ ವೇಳೆ ತಿಳಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಜಯೇಂದ್ರ, ಹಾಲಿ ಸಂಸದೆ ಸುಮಲತಾ ಅಂಬರೀಶ್ ವಿಚಾರದಲ್ಲಿ ಪಕ್ಷದ ವರಿಷ್ಠರು ತುಂಬಾ ಗೌರವ ಇಟ್ಟುಕೊಂಡಿದ್ದಾರೆ. 

ಅವರನ್ನು ಭೇಟಿ ಮಾಡುತ್ತೇನೆ. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುವುದು ಜವಾಬ್ದಾರಿ. ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು.

PREV

Recommended Stories

ನೀಲಿ ಮೊಟ್ಟೆ ಇಟ್ಟ ಚನ್ನಗಿರಿಯ ನಾಟಿ ಕೋಳಿ: ಸ್ಥಳೀಯರಲ್ಲಿ ತೀವ್ರ ಕುತೂಹಲ
ಸಿಗಂದೂರಿನಲ್ಲಿ ವಾಟರ್ ಏರೋಡ್ರೋಮ್: ವಿಮಾನ ಟೇಕಾಫ್‌, ಲ್ಯಾಂಡಿಂಗ್‌! ಪ್ರವಾಸೋದ್ಯಮಕ್ಕೆ ಹೊಸ ಹೆಜ್ಜೆ?