ಖಾಲಿ ಹುದ್ದೆ ಭರ್ತಿ ಹೋರಾಟದ ಬ್ಯಾನರ್‌ನಲ್ಲಿ ವಿಜಯೇಂದ್ರ ಚಿತ್ರ ಮಾಯ

KannadaprabhaNewsNetwork |  
Published : Feb 26, 2026, 02:15 AM IST
ಬಿಜೆಪಿ ಪ್ರತಿಭಟನಾರ್ಥ ಹಾಕಲಾಗಿದ್ದ ಬ್ಯಾನರ್‌ಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಭಾವಚಿತ್ರ ಇಲ್ಲದಿರುವುದು. | Kannada Prabha

ಸಾರಾಂಶ

ಖಾಲಿ ಹುದ್ದೆ ಭರ್ತಿ ಹೋರಾಟ ಪಕ್ಷದ ಅಧಿಕೃತವಾದ ದೊಡ್ಡ ಹೋರಾಟ ಇದಾಗಿತ್ತು. ಇಂತಹ ಹೋರಾಟದಲ್ಲಿ ಉದ್ದೇಶಪೂರ್ವಕವಾಗಿಯೇ ಶಾಸಕ ಅರವಿಂದ ಬೆಲ್ಲದ ಅವರು ರಾಜ್ಯಾಧ್ಯಕ್ಷರ ಭಾವಚಿತ್ರ ಕೈ ಬಿಟ್ಟಿದ್ದಾರೆ ಎಂದು ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧಾರವಾಡ:

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಮಂಗಳವಾರ ಬಿಜೆಪಿ ನಡೆಸಿದ ಪ್ರತಿಭಟನಾರ್ಥ ಹಾಕಲಾಗಿದ್ದ ಯಾವ ಬ್ಯಾನರ್‌ಗಳಲ್ಲೂ ಪಕ್ಷದ ರಾಜ್ಯಾಧ್ಯಕ್ಷರ ಭಾವಚಿತ್ರ ಇಲ್ಲದಿರುವುದು ತೀವ್ರ ಅಚ್ಚರಿ ಮೂಡಿಸಿದೆ.

ಉದ್ಯೋಗಾರ್ಥಿಗಳ ಪರವಾಗಿ ಬಿಜೆಪಿಯಿಂದಲೇ ಹೋರಾಟಕ್ಕೆ ಕರೆ ನೀಡಲಾಗಿತ್ತು. ಶ್ರೀನಗರ ವೃತ್ತದಿಂದ ಜಯನಗರ ಮಾರ್ಗವಾಗಿ ಮಿಚಗಿನ್‌ ಕಾಂಪೌಂಡ್‌ ವರೆಗೂ ಸುಮಾರು 40ಕ್ಕೂ ಹೆಚ್ಚು ಕಡೆಗಳಲ್ಲಿ ಬ್ಯಾನರ್‌ ಅಳವಡಿಸಲಾಗಿತ್ತು. ಬ್ಯಾನರ್‌ಗಳಲ್ಲಿ ಮೇಲುಗಡೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ ಶಾ, ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್‌. ಅಶೋಕ, ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಭಾವಚಿತ್ರಗಳಿವೆ. ಹಾಗೆಯೇ, ಕೆಳ ಭಾಗದಲ್ಲಿ ಎಡಗಡೆ ಶಾಸಕ ಅರವಿಂದ ಬೆಲ್ಲದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾವಚಿತ್ರಗಳನ್ನು ದೊಡ್ಡ ಅಳತೆಯಲ್ಲಿವೆ. ಆದರೆ, ಈ ಯಾವ ಬ್ಯಾನರ್‌ಗಳಲ್ಲೂ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಭಾವಚಿತ್ರ ಇಲ್ಲದಿರುವುದು ಅವರ ಅಭಿಮಾನಿಗಳನ್ನು ಇದೀಗ ಕೆರಳಿಸಿದೆ.

ಪಕ್ಷದ ಅಧಿಕೃತವಾದ ದೊಡ್ಡ ಹೋರಾಟ ಇದಾಗಿತ್ತು. ಇಂತಹ ಹೋರಾಟದಲ್ಲಿ ಉದ್ದೇಶಪೂರ್ವಕವಾಗಿಯೇ ಶಾಸಕ ಅರವಿಂದ ಬೆಲ್ಲದ ಅವರು ರಾಜ್ಯಾಧ್ಯಕ್ಷರ ಭಾವಚಿತ್ರ ಕೈ ಬಿಟ್ಟಿದ್ದಾರೆ. ಉದ್ಯೋಗಾರ್ಥಿಗಳ ಹೋರಾಟದಲ್ಲಿ ಭಾಗವಹಿಸಲು ಹೋಗಿ ಮುಖಭಂಗ ಅನುಭವಿಸಿದ್ದಲ್ಲದೇ, ಇದೀಗ ರಾಜ್ಯಾಧ್ಯಕ್ಷರ ಭಾವಚಿತ್ರ ಕೈ ಬಿಟ್ಟಿರುವುದಕ್ಕೆ ಪಕ್ಷಕ್ಕೆ ಆದ ದೊಡ್ಡ ಹಿನ್ನಡೆ ಎಂದು ಬಿ.ವೈ. ವಿಜಯೇಂದ್ರ ಅವರ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಂಪ್ಲಿ ಸಮಗ್ರ ಅಭಿವೃದ್ಧಿಗೆ ಸಿದ್ದು ಬಜೆಟ್‌ನಲ್ಲಿ ಹಣ ಕೊಡೋದು ಎಷ್ಟು?
ನುಗ್ಗೆ ಕೃಷಿಗೆ ಪ್ರತಿ ಹಂತದಲ್ಲೂ ಶುದ್ಧತೆ, ಗುಣಮಟ್ಟಕ್ಕೆ ಆದ್ಯತೆ ನೀಡಿ: ನುಗ್ಗೆ ಕೃಷಿಕ ಬ್ಯಾಲಿಹಾಳ ಬಸಯ್ಯ ಹಿರೇಮಠ