ಕನ್ನಡಪ್ರಭ ವಾರ್ತೆ ಬೆಳಗಾವಿ
ಮಹಾನಗರ ಪಾಲಿಕೆ ಮಹಾಪೌರ ಶೋಭಾ ಸೋಮನಾಚೆ, ಉಪಮಹಾಪೌರ ರೇಶ್ಮಾ ಪಾಟೀಲ, ವಿಕಾಸಿತ ಭಾರತ ಸಂಕಲ್ಪ ಯಾತ್ರೆಯ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲಾ ಪ್ರಭಾರಿ ವಿನೋದ ಸೇಶನ್, ಜಿಲ್ಲಾ ಅಗ್ರಣಿ ಬ್ಯಾಂಕ್ ವ್ಯವಸ್ಥಾಪಕ ಪಿ. ಆರ್. ಕುಲಕರ್ಣಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ನಗರ ಪ್ರದೇಶದಲ್ಲಿಯೂ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ,ಪ್ರಧಾನಿ ನರೇಂದ್ರ ಮೋದಿಯವರು ಫಲಾನುಭವಿಗಳೊಂದಿಗೆ ನಡೆಸಿದ ವರ್ಚುವಲ್ ಸಂಲ್ದ ವೀಕ್ಷಿಸಿದರು.ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಸಮಗ್ರ ಅಭಿವೃದ್ಧಿಯ ಕನಸಿನ ಭಾರತ ನಿರ್ಮಾಣದ ಹಿನ್ನಲೆಯಲ್ಲಿ ಹಮ್ಮಿಕೊಂಡ ವಿಕಸಿತ ಭಾರತ ಸಂಕಲ್ಪ ಯಾತ್ರೆ ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಯಶಸ್ವಿಯಾಗಿ ಮುನ್ನಡೆದಿದೆ. ಪ್ರಸ್ತುತ ನಗರ ಪ್ರದೇಶಗಳಲ್ಲಿ ಮೋದಿ ಗ್ಯಾರಂಟಿ ಯೋಜನೆ ಜಾಗೃತಿಯ ವಾಹನ ಸಂಚರಿಸಿ ವಿವಿಧ ಯೋಜನೆಗಳ ತಿಳುವಳಿಕೆ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಶಾಸಕ ಅಭಯ ಪಾಟೀಲ ಮಾತನಾಡಿ, ಜನರಿಗೆ ಪ್ರಧಾನಿಯವರ ಯೋಜನೆಗಳು ಹಾಗೂ ಭವಿಷ್ಯ ನಿರ್ಮಾಣದ ಬಗ್ಗೆ ತಿಳಿಸಿಕೊಡುವ ಪ್ರಯತ್ನ ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.ಮಹಿಳಾ ಫಲಾನುಭವಿ ಅಲ್ಮನ್ ಗೋಕಾಕ ಮಾತನಾಡಿ, ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಿಂದ ತಮ್ಮ ವ್ಯಾಪಾರಕ್ಕೆ ಹೆಚ್ಚು ಅನುಕೂಲವಾಗಿದ್ದು, ಕುಟುಂಬದ ಆರ್ಥಿಕ ಸಮಸ್ಯೆಗಳು ನಿವಾರಣೆಯಾಗಿವೆ ಎಂದು ತಿಳಿಸಿದರು.
ಇನ್ನೊರ್ವ ಫಲಾನುಭವಿ ಪ್ರಸಾದ ರಾಮಚಂದ್ರ ಕಾವಳೇಕರ ಮಾತನಾಡಿ, ಫಾಸ್ಟ್ ಫುಡ್ ತಯಾರಿಕೆಗೆ ಪ್ರಧಾನಿ ಸ್ವ ನಿಧಿಯಿಂದ ಹಣಕಾಸಿನ ನೆರವು ಪಡೆದುಕೊಂಡಿದ್ದೇನೆ. ಈ ನೆರವು ಸ್ವಂತ ಉದ್ಯಮ ಬೆಳೆಯಲು ಹೆಚ್ಚು ಅನುಕೂಲವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.