ಕೆಲಸ ಸ್ಥಗಿತಗೊಳಿಸಿ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

KannadaprabhaNewsNetwork |  
Published : Feb 12, 2025, 12:30 AM IST
೧೧ವೈಎಲ್‌ಬಿ೧:ಯಲಬುರ್ಗಾದ ತಹಸ್ಹೀಲ್ ಕಛೇರಿ ಮುಂದೆ ಮಂಗಳವಾರ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗೆಗಾಗಿ ಒತ್ತಾಯಿಸಿ ಮಂಗಳವಾರ ೨ನೇ ಹಂತದ ಅನಿರ್ಧಿಷ್ಟಾವಧಿಯ ಮುಷ್ಕರ ನಿಮಿತ್ಯ ಗ್ರಾಮ ಆಡಳಿತ ಅಧಿಕಾರಿಗಳು ಕೆಲಸ ಸ್ಥಗಿತಗೊಳಿಸಿ ತಾಲೂಕು ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಪಟ್ಟಣದ ತಹಸೀಲ್ದಾರ ಕಛೇರಿ ಮುಂದೆ ತಾಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಯಲಬುರ್ಗಾ

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ೨ನೇ ಹಂತದ ಅನಿರ್ದಿಷ್ಟಾವಧಿಯ ಮುಷ್ಕರದ ಹಿನ್ನೆಲೆ ಪಟ್ಟಣದ ತಹಸೀಲ್ದಾರ ಕಛೇರಿ ಮುಂದೆ ತಾಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕಾಧ್ಯಕ್ಷ ಮಂಜುನಾಥ ಮೇಟಿ ಹಾಗೂ ಜಿಲ್ಲಾ ಕಾರ್ಯದರ್ಶಿ ಬಸನಗೌಡ ರಾಮಶೆಟ್ಟಿ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಾನಾ ಯೋಜನೆಗಳನ್ನು ಸಕಾಲಕ್ಕೆ ಅನುಷ್ಠಾನಗೊಳಿಸಿ ಜನರ ಮನೆಬಾಗಿಲಿಗೆ ತಲುಪಿಸುವಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ೯೫೦೦ ಅಧಿಕ ಸಂಖ್ಯೆಯಲ್ಲಿ ನಾವುಗಳು ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಸರ್ಕಾರದ ೨೦ಕ್ಕೂ ಮೊಬೈಲ್ ಆ್ಯಪ್ ಮೂಲಕ ಜನರಿಗೆ ಸೇವೆ ಒದಗಿಸಲಾಗುತ್ತಿದೆ. ಅಲ್ಲದೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪ್ರಿಯ ಕಾರ್ಯಕ್ರಮಗಳನ್ನು ಸಮರ್ಪಕ ಜಾರಿಗೆ ತಂದು ಅವುಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡುತಿದ್ದೇವೆ ಎಂದರು.

ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರದಿಂದ ಕನಿಷ್ಠ ಕಟ್ಟಡ ಸೌಲಭ್ಯ, ಮೊಬೈಲ್, ಲ್ಯಾಪ್‌ಟಾಪ್, ಅಗತ್ಯ ಮೂಲಭೂತ ಸೌಕರ್ಯ ಒದಗಿಸಿಲ್ಲ. ಹೀಗಾಗಿ ರಾಜ್ಯದಲ್ಲಿ ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಕಳೆದ ವರ್ಷ ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಅಂತರ್‌ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಬೇಕು, ಅಧಿಕಾರಿಗಳಿಗೆ ರಜಾ ಅವಧಿ ವಿತರಿಸಬೇಕು, ಯಾವುದೇ ರೀತಿಯಾದ ಸ್ಪಂದನೆ ಸರ್ಕಾರದಿಂದ ಇದುವರೆಗೊ ಬಂದಿಲ್ಲ, ಕೂಡಲೇ ನಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕೆಲಸವನ್ನು ರಾಜ್ಯ ಸರ್ಕಾರ ತಕ್ಷಣ ಮಾಡಬೇಕು ಇಲ್ಲಿದಿದ್ದರೆ ಮುಷ್ಕರ. ಮುಂದುವರಿಸಲಾಗುವುದೆಂದು ಎಚ್ಚರಿಕೆ ನೀಡಿದರು.

ಕಂದಾಯ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಶಾಸ್ತ್ರಿಮಠ ಮಾತನಾಡಿದರು.

ಬೆಂಬಲ:ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ, ಕಂದಾಯ, ಸರ್ವೆ ಇಲಾಖೆಯವರು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ಈ ವೇಳೆ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಸಿದ್ದಲಿಂಗಪ್ಪ ಶ್ಯಾಗೋಟಿ, ರಾಜ್ಯ ಪರಿಷತ್ ಸದಸ್ಯ ಶಿವಪುತ್ರಪ್ಪ ತಿಪ್ಪನಾಳ, ವಿಎ ಸಂಘದ ಪದಾಧಿಕಾರಿಗಳಾದ ದೇವರಾಜ ರೆಡ್ಡಿ, ಕುಮಾರ್ ಪರಸಾಪುರ, ಶಿವಶರಣಪ್ಪ ಗೌಡ, ದುರ್ಗಪ್ಪ ಹೊಸಮನಿ, ಜಯಶ್ರೀ, ಜಯಲಕ್ಷ್ಮಿ ಬಿ.ಸಿ. ರತ್ನಾ, ಕರಿಯಪ್ಪ, ಶಂಭು, ರಾಜಶೇಖರ ಹಿರೇಮಠ, ಎನ್‌ಜಿಓ ನಿರ್ದೇಶಕರಾದ ಶೃತಿ ಮೂಕಾಪೂರ, ಶಿವಕುಮಾರ ಐನಕ್ಕಿ, ನೌಕರರಾದ ಹಸನ್ ಸಾಬ್, ಹನುಮಗೌಡ ಮಾಲಿ ಪಾಟೀಲ್, ಶ್ರೀನಿವಾಸ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!