
ಒಟ್ಟು 21 ಪರೀಕ್ಷಾ ಕೇಂದ್ರಗಳಲ್ಲಿ 6675 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರು । 2154 ಅಭ್ಯರ್ಥಿಗಳು ಗೈರು
ಜಿಲ್ಲೆಯ ನಾಲ್ಕು ತಾಲೂಕು ಕೇಂದ್ರಗಳಲ್ಲಿ ಗ್ರಾಮ ಆಡಳಿತಾಧಿಕಾರಿ ಹುದ್ದೆ ನೇಮಕಾತಿಗೆ ಭಾನುವಾರ ನಡೆದ ಸ್ಪರ್ಧಾತ್ಮಕ ಪರೀಕ್ಷೆ ಬಿಗಿ ಭದ್ರತೆ ನಡುವೆ ಸುಸೂತ್ರವಾಗಿ ನಡೆಯಿತು.ಚಿಕ್ಕಮಗಳೂರು ನಗರ, ತರೀಕೆರೆ, ಮೂಡಿಗೆರೆ ಹಾಗೂ ಕಡೂರು ತಾಲೂಕುಗಳಲ್ಲಿ ಒಟ್ಟು 21 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಈ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಒಟ್ಟು 8829 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಬೆಳಗಿನ ಅವಧಿಯ ಲ್ಲಿ ನಡೆದ ಸಾಮಾನ್ಯ ಜ್ಞಾನ ಪ್ರಶ್ನೆ ಪತ್ರಿಕೆ ಪರೀಕ್ಷೆಗೆ 6675 ಅಭ್ಯರ್ಥಿಗಳು ಹಾಜರಾಗಿದ್ದು, 2154 ಅಭ್ಯರ್ಥಿಗಳು ಗೈರಾಗಿದ್ದರು.ಮಧ್ಯಾಹ್ನದ ಅವಧಿಯಲ್ಲಿ ಸಾಮಾನ್ಯ ಕನ್ನಡ, ಇಂಗ್ಲಿಷ್ ಹಾಗೂ ಕಂಪ್ಯೂಟರ್ ಜ್ಞಾನದ ಪ್ರಶ್ನೆ ಪತ್ರಿಕೆ ಪರೀಕ್ಷೆಗೆ 6639 ಅಭ್ಯರ್ಥಿಗಳು ಹಾಜರಾಗಿದ್ದು, 2190 ಮಂದಿ ಪರೀಕ್ಷೆಗೆ ಗೈರಾಗಿದ್ದರು.
ಎರಡೂ ಅವಧಿ ಪರೀಕ್ಷೆಗಳಿಗೆ ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ಪರೀಕ್ಷೆ ಬರೆದರು.ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಅಥವಾ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿತ್ತು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಹಾಗೂ ಜಾಮರ್ ಅಳವಡಿಸಿ ಕಟ್ಟುನಿಟ್ಟಿನ ನಿಗಾ ವಹಿಸ ಲಾಗಿತ್ತು.ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪರೀಕ್ಷೆ ಸಂಪೂರ್ಣ ವ್ಯವಸ್ಥೆಯನ್ನು ಮೇಲ್ವಿಚಾರಣೆ ಮಾಡಲಾಗಿದ್ದು, ವಿವಿಧ ಪರೀಕ್ಷಾ ಕೇಂದ್ರ ಗಳಿಗೆ ಜಿಲ್ಲಾಧಿಕಾರಿ ನೇತೃತ್ವದ ಪ್ಲೇಯಿಂಗ್ ಸ್ಕ್ವಾಡ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಪರೀಕ್ಷಾ ಕೇಂದ್ರಗಳಲ್ಲಿನ ವ್ಯವಸ್ಥೆ, ಅಭ್ಯರ್ಥಿಗಳ ಹಾಜರಾತಿ ಹಾಗೂ ಭದ್ರತಾ ಕ್ರಮಗಳನ್ನು ತಂಡ ಪರಿಶೀಲಿಸಿತು.ಅಭ್ಯರ್ಥಿಗಳಿಗೆ ಯಾವುದೇ ರೀತಿ ತೊಂದರೆ ಉಂಟಾಗದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿತ್ತು. ಪರೀಕ್ಷೆ ಸಂದರ್ಭದಲ್ಲಿ ಗೊಂದಲ, ಆತಂಕ ಅಥವಾ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಮನ್ವಯದಿಂದ ಪರೀಕ್ಷೆ ಶಾಂತಿಯುತವಾಗಿ ನಡೆಸಲಾಯಿತು.ಗ್ರಾಮ ಆಡಳಿತಾಧಿಕಾರಿ ಹುದ್ದೆ ನೇಮಕಾತಿ ಪರೀಕ್ಷೆ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ನಾಲ್ಕು ತಾಲೂಕು ಕೇಂದ್ರಗಳ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಅಭ್ಯರ್ಥಿಗಳು ಹಾಗೂ ಪೋಷಕರಿಂದ ಚಟುವಟಿಕೆ ಕಂಡುಬಂತು. ಪರೀಕ್ಷೆ ಆರಂಭಕ್ಕೂ ಮುನ್ನ ಅಭ್ಯರ್ಥಿಗಳನ್ನು ನಿಗದಿತ ನಿಯಮಗಳಂತೆ ತಪಾಸಣೆ ನಡೆಸಿ ಪರೀಕ್ಷಾ ಕೊಠಡಿಗಳಿಗೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಯಿತು.... ಬಾಕ್ಸ್....ಬಸ್ ಗಾಗಿ ಪರದಾಡಿದ ಅಭ್ಯರ್ಥಿಗಳು
ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಜಿಲ್ಲೆಯ ನಾಲ್ಕು ತಾಲೂಕು ಕೇಂದ್ರದಲ್ಲಿ ಪರೀಕ್ಷೆ ಯಾವುದೇ ಗೊಂದಲ ಇಲ್ಲದೇ, ಬಿಗಿ ಭದ್ರತೆ ಯಲ್ಲಿ ಪರೀಕ್ಷೆ ಪೂರ್ಣಗೊಂಡಿದೆ.
ಉಪ ನಿರ್ದೇಶಕಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಚಿಕ್ಕಮಗಳೂರು