ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಭೀಮಣ್ಣ ಟಿ. ನಾಯ್ಕ ಅವರು, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ಗ್ರಾಮೀಣ ಭಾಗದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಗ್ಯಾರಂಟಿ ಸಮಿತಿಗಳು ಪ್ರಮುಖ ಪಾತ್ರ ವಹಿಸಲಿವೆ ಎಂದರು.
ಶಿರಸಿ: ತಾಲೂಕಿನಾದ್ಯಂತ ಸರ್ಕಾರದ ಜನಕಲ್ಯಾಣ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ತಲುಪುವಂತೆ ಮಾಡಲು ಸರ್ಕಾರದ ನಿರ್ದೇಶನದಂತೆ ‘ಗ್ರಾಮ ಪಂಚಾಯಿತಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ’ ರಚನೆ ಹಾಗೂ ‘ಭಾರತ್ ಜೋಡೋ ಸಂಘ’ ಸ್ಥಾಪನೆ ಕುರಿತು ಶಾಸಕ ಭೀಮಣ್ಣ ನಾಯ್ಕ ಅವರ ಅಧ್ಯಕ್ಷತೆಯಲ್ಲಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲಾಯಿತು.ತಾಲೂಕಿನ ವಾನಳ್ಳಿ, ಜಡ್ಡಿಗದ್ದೆ, ಹುಲೇಕಲ್, ಸೋಂದಾ, ಸಾಲ್ಕಣಿ, ಮೇಲಿನ ಓಣಿಕೇರಿ, ಶಿವಳ್ಳಿ(ಹೆಗಡೆಕಟ್ಟಾ), ಹುಣಸೆಕೊಪ್ಪ, ಸದಾಶಿವಳ್ಳಿ ಹಾಗೂ ಬೈರುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಭೆಗಳು ಜರುಗಿದವು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಭೀಮಣ್ಣ ಟಿ. ನಾಯ್ಕ ಅವರು, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ಗ್ರಾಮೀಣ ಭಾಗದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಗ್ಯಾರಂಟಿ ಸಮಿತಿಗಳು ಪ್ರಮುಖ ಪಾತ್ರ ವಹಿಸಲಿವೆ ಎಂದರು.
ಸಾಮಾಜಿಕ ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಮೂಡಿಸುವ ''''''''ಭಾರತ್ ಜೋಡೋ ಸಂಘ''''''''ಗಳ ಉದ್ದೇಶ ಮತ್ತು ಅವುಗಳ ಕಾರ್ಯವೈಖರಿಯ ಬಗ್ಗೆ ಸ್ಥಳೀಯ ಗ್ರಾಮಸ್ಥರಿಗೆ ವಿಸ್ತೃತ ಮಾಹಿತಿ ನೀಡಿದರು.ಸಭೆಯ ನಂತರ ಶಾಸಕರು ಸ್ಥಳೀಯ ಗ್ರಾಮಸ್ಥರನ್ನು ನೇರವಾಗಿ ಭೇಟಿಯಾಗಿ ಅವರ ಕುಂದುಕೊರತೆಗಳನ್ನು ಆಲಿಸಿ, ಮನವಿ ಹಾಗೂ ಅಹವಾಲುಗಳನ್ನು ಸ್ವೀಕರಿಸಿದರು. ಮೂಲ ಸೌಕರ್ಯ, ಕುಡಿಯುವ ನೀರು, ರಸ್ತೆ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಸೂಕ್ತ ಪರಿಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಹೆದ್ದಾರಿ ದಾಟುತ್ತಿದ್ದ ಕಡವೆಗೆ ವಾಹನ ಡಿಕ್ಕಿ: ಸ್ಥಳೀಯರಿಂದ ರಕ್ಷಣೆ
ಅಂಕೋಲಾ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಕಡವೆಯನ್ನು ಸ್ಥಳೀಯರು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 53ರ ಸುಂಕಸಾಳ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.ಸುಂಕಸಾಳ ಬಳಿ ಹೆದ್ದಾರಿ ದಾಟುತ್ತಿದ್ದ ಕಡವೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಡವೆಯ ಕುತ್ತಿಗೆ, ಕಾಲು ಹಾಗೂ ಬೆನ್ನಿನ ಭಾಗಕ್ಕೆ ಗಾಯಗಳಾಗಿದ್ದು, ಹೆದ್ದಾರಿ ಬದಿಯಲ್ಲಿ ನರಳುತ್ತ ಬಿದ್ದಿತ್ತು. ಇದನ್ನು ಗಮನಿಸಿದ ಸುಂಕಸಾಳದ ಸಂದೀಪ ನಾಯ್ಕ, ಪ್ರವೀಣ ನಾಯ್ಕ ಹಾಗೂ ಸಂಭ್ರಮ ನಾಯ್ಕ ಅವರು ತಕ್ಷಣ ಕಡವೆಯನ್ನು ರಕ್ಷಿಸಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಮಾಹಿತಿ ತಿಳಿದು ರಾಮನಗುಳಿ ವಲಯ ಅರಣ್ಯಾಧಿಕಾರಿ ದೀಪಕ ನಾಯ್ಕ, ಫಾರೆಸ್ಟರ್ ಸಂತೋಷ, ಬೀಟ್ ಫಾರೆಸ್ಟರ್ ಪ್ರಭುದೇವ ಹಾಗೂ ವೀಕ್ಷಕರಾದ ಮಂಜು ಮತ್ತು ಹರೀಶ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬಳಿಕ ಗಾಯಗೊಂಡ ಕಡವೆಯನ್ನು ಸುರಕ್ಷಿತವಾಗಿ ಕರೆದೊಯ್ದು ರಾಮನಗುಳಿ ವಲಯ ವಿಶ್ರಾಂತಿಗೃಹದಲ್ಲಿ ಇರಿಸಲಾಗಿದೆ.
ಪಶು ಆಸ್ಪತ್ರೆಯ ವೈದ್ಯಾಧಿಕಾರಿ ರಾಮನಾಥ ಭಟ್ಟ ಅವರು ಗಾಯಗೊಂಡ ಕಡವೆಗೆ ಚಿಕಿತ್ಸೆ ನೀಡಿದ್ದಾರೆ. ಸದ್ಯ ಅರಣ್ಯ ಇಲಾಖೆ ಸಿಬ್ಬಂದಿ ಅದರ ಆರೈಕೆ ಮಾಡುತ್ತಿದ್ದಾರೆ. ಕಡವೆ ಸಂಪೂರ್ಣ ಚೇತರಿಸಿಕೊಂಡ ಬಳಿಕ ಮತ್ತೆ ಅರಣ್ಯಕ್ಕೆ ಬಿಡಲಾಗುವುದು. ಗಾಯಗೊಂಡ ಕಡವೆಗೆ ಸಮಯಕ್ಕೆ ನೆರವಾದ ಸ್ಥಳೀಯ ನಾಗರಿಕರ ಕೊಡುಗೆ ಅಭಿನಂದನೀಯ ಎಂದು ರಾಮನಗುಳಿ ವಲಯ ಅರಣ್ಯಾಧಿಕಾರಿ ದೀಪಕ ನಾಯ್ಕ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.