ಕನ್ನಡಪ್ರಭ ವಾರ್ತೆ ಕೋಲಾರ
ತಾಲೂಕಿನ ಅರಾಭಿಕೊತ್ತನೂರಿನಲ್ಲಿ ನೂತನ ಗ್ರಾಪಂ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಪಂ ಕಟ್ಟಡ ಜನರ ಸ್ವತ್ತು ತಮ್ಮ ಗ್ರಾಮಗಳಲ್ಲಿ ಯಾವುದೇ ಸಮಸ್ಯೆ ಇದ್ದರೂ ಪಂಚಾಯತಿ ಗಮನಕ್ಕೆ ತಂದು ಪರಿಹರಿಸಿಕೊಳ್ಳಬಹುದಾಗಿದೆ ಎಂದರು.
ಅಭಿವೃದ್ಧಿ ಕಾರ್ಯಕ್ಕೆ ಅನುದಾನಗ್ರಾಮಗಳು ಅಭಿವೃದ್ಧಿಯಾದರೆ ಮಾತ್ರವೇ ದೇಶವು ಅಭಿವೃದ್ಧಿಯಾಗುತ್ತದೆ, ಈ ನಿಟ್ಟಿನಲ್ಲಿ ಗ್ರಾಪಂನಲ್ಲಿ ಚುನಾಯಿತ ಪ್ರತಿನಿಧಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಅಭಿವೃದ್ಧಿಗೆ ಏನು ಬೇಕಾದರೂ ಕೇಳಿ ಅನುದಾನ ನೀಡಲು ಸಿದ್ದವಿದ್ದೇವೆ ಎಂದು ಹೇಳಿದರು.
₹100 ಕೋಟಿ ವೆಚ್ಚದಲ್ಲಿ ರಿಂಗ್‌ರಸ್ತೆ
ಗ್ರಾಮೀಣ ಪ್ರದೇಶಗಳಲ್ಲಿ ನಿಮ್ಮಗಳ ತೆರಿಗೆ ಹಣವನ್ನು ಅಭಿವೃದ್ಧಿಗಾಗಿಯೇ ಸರಕಾರಗಳು ಮತ್ತೆ ನಿಮಗೆ ವಾಪಸು ಕೊಡಬೇಕು ಎಂದು ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಈಗಾಗಲೇ ಕೋಲಾರ ನಗರದ ರಿಂಗ್ ರಸ್ತೆ ನಿರ್ಮಿಸಲು ಈಗಾಗಲೇ ೧೦೦ ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಗೆ ೧೦ ಕೋಟಿ ಸೇರಿದಂತೆ ತಾಲೂಕಿನ ಹೋಬಳಿ ಮಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.ಎಂಎಲ್ಸಿ ಇಂಚರ ಗೋವಿಂದರಾಜು, ಗ್ರಾಪಂ ಅಧ್ಯಕ್ಷೆ ರೇಣುಕಾಂಭ ಮುನಿರಾಜು, ಉಪಾಧ್ಯಕ್ಷ ನಾಗೇಂದ್ರ, ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು, ತಾಪಂ ಇಒ ಮುನಿಯಪ್ಪ, ಜಿ.ಪಂ ಮಾಜಿ ಅಧ್ಯಕ್ಷೆ ಚೌಡೇಶ್ವರಿ ರಾಮು, ಗ್ರಾಪಂ ಸದಸ್ಯರಾದ ನಂಜುಂಡಗೌಡ, ಗೋಪಾಲಕೃಷ್ಣ, ಪಿಲ್ಲಚ್ಚಪ್ಪ, ಪಿಡಿಒ ಶಾಲಿನಿ, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ವಕ್ಕಲೇರಿ ರಾಜಪ್ಪ, ವೈ.ಶಿವಕುಮಾರ್, ಖಾಜಿಕಲ್ಲಹಳ್ಳಿ ಮುನಿರಾಜು, ಅಂಬರೀಶ್, ಶ್ರೀಧರ್ ಇದ್ದರು.