೩ನೇ ದಿನಕ್ಕೆ ಕಾಲಿಟ್ಟ ಗ್ರಾಮಿಣ ಅಂಚೆ ನೌಕರರ ಪ್ರತಿಭಟನೆ

KannadaprabhaNewsNetwork |  
Published : Dec 15, 2023, 01:30 AM IST
೩ನೇ ದಿನಕ್ಕೆ ಕಾಲಿಟ್ಟ ಗ್ರಾಮಿಣ ಅಂಚೆ ನೌಕರರ ಪ್ರತಿಭಟನೆ | Kannada Prabha

ಸಾರಾಂಶ

ಗ್ರಾಮೀಣ ಅಂಚೆ ನೌಕರರನ್ನು ಕಾಯಂ ಮಾಡುವಂತೆ ಹಾಗೂ ಕಮಲೇಶನ್ ಕಮಿಟಿ ಶಿಫಾರಸು ಮಾಡಿರುವ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಗರದ ಸಿಟಿ ಬಸ್ ನಿಲ್ದಾಣ ಬಳಿ ಇರುವ ಮುಖ್ಯ ಅಂಚೆಕಚೇರಿ ಮುಂದೆ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ ೩ನೇ ದಿವಸಕ್ಕೆ ಕಾಲಿಟ್ಟಿದೆ. ಇದೆ ಸಂದರ್ಭದಲ್ಲಿ ಎ.ಐ.ಜಿ.ಡಿ.ಎಸ್.ಯು. ಸಂಘಟನೆಯ ಜಗದೀಶ್ ಮಾತನಾಡಿ, ಗ್ರಾಮೀಣ ಅಂಚೆ ನೌಕರರನ್ನು ಕಾಯಂ ಮಾಡುವಂತೆ ಹಾಗೂ ಕಮಲೇಶನ್ ಕಮಿಟಿ ಶಿಫಾರಸು ಮಾಡಿರುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರದ ವಿರುದ್ಧ ಹಾಸನದ ಪ್ರಧಾನ ಅಂಚೆಕಚೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಗ್ರಾಮೀಣ ಅಂಚೆ ನೌಕರರನ್ನು ಕಾಯಂ ಮಾಡುವಂತೆ ಹಾಗೂ ಕಮಲೇಶನ್ ಕಮಿಟಿ ಶಿಫಾರಸು ಮಾಡಿರುವ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಗರದ ಸಿಟಿ ಬಸ್ ನಿಲ್ದಾಣ ಬಳಿ ಇರುವ ಮುಖ್ಯ ಅಂಚೆಕಚೇರಿ ಮುಂದೆ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ ೩ನೇ ದಿವಸಕ್ಕೆ ಕಾಲಿಟ್ಟಿದೆ. ಇದೆ ಸಂದರ್ಭದಲ್ಲಿ ಎ.ಐ.ಜಿ.ಡಿ.ಎಸ್.ಯು. ಸಂಘಟನೆಯ ಜಗದೀಶ್ ಮಾತನಾಡಿ, ಗ್ರಾಮೀಣ ಅಂಚೆ ನೌಕರರನ್ನು ಕಾಯಂ ಮಾಡುವಂತೆ ಹಾಗೂ ಕಮಲೇಶನ್ ಕಮಿಟಿ ಶಿಫಾರಸು ಮಾಡಿರುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರದ ವಿರುದ್ಧ ಹಾಸನದ ಪ್ರಧಾನ ಅಂಚೆಕಚೇರಿಯ ಮುಂದೆ ವಿಭಾಗದ ನೂರಾರು ಗ್ರಾಮೀಣ ಅಂಚೆ ನೌಕರರು ಎ.ಐ.ಜಿ.ಡಿ.ಎಸ್.ಯು.ಹಾಗೂ ಎನ್.ಯು.ಜಿ.ಡಿ.ಎಸ್.ಸದಸ್ಯರಿಂದ ಪ್ರತಿಭಟನೆ ನಡೆಸಲಾಯಿತು. ಪ್ರಮುಖ ಬೇಡಿಕೆಗಳೆಂದರೇ ೮ ಗಂಟೆಗಳ ಕೆಲಸ ನೀಡುವುದು ಮತ್ತು ಪಿಂಚಣಿ ಸೇರಿದಂತೆ ಎಲ್ಲ ಸವಲತ್ತಗಳನ್ನು ಒದಗಿಸಬೇಕು. ಸೇವಾ ಹಿರಿತನದ ಆಧಾರದ ಮೇಲೆ ೧೨-೨೪-೩೬ ಸೇವೆ ಸಲ್ಲಿಸಿದ ಜಿಡಿಎಸ್ ನೌಕರರಿಗೆ ವಿಶೇಷ ಇಂಕ್ರೀಮೆಂಟ್ ನೀಡಲು ಗಮನವಹಿಸಬೇಕು ಎಂದರು.

ಅವೈಜ್ಞಾನಿಕ ಗುರಿ ನೀಡಿ ಮೇಳಗಳನ್ನು ನಡೆಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು. ಗುಂಪು ಇನ್ಸೂರೆನ್ಸ್ ಕವರೇಜಿ ರೂ ೫ ಲಕ್ಷದವರೆಗೆ ಹೆಚ್ಚಿಸಬೇಕು ಮತ್ತು ಅವೈಜ್ಞಾನಿಕ ಗುರಿ ಸಾಧಿಸದಿರುವ ಜಿಡಿಎಸ್ ನೌಕರರಿಗೆ ನೀಡುತ್ತಿರುವ ಕಿರುಕುಳವನ್ನು ನಿಲ್ಲಿಸುವಂತೆ ಒತ್ತಾಯಿಸಿದರು. ಜಿಡಿಎಸ್ ಗ್ರಾಚ್ಯುಟಿ ಹಣವನ್ನು ರೂ ೫ ಲಕ್ಷಗಳವರೆಗೆ ಹೆಚ್ಚಿಸಿ ೧೮೦ ದಿನಗಳ ರಜೆ ಉಳಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ಜಿಡಿಎಸ್ ಮತ್ತು ಅವರ ಕುಟುಂಬದ ಸದಸ್ಯರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕೆಂಬುದು ನಮ್ಮ ಬೇಡಿಕೆ ಆಗಿದೆ ಎಂದು ತಮ್ಮ ಆಗ್ರಹವಾಗಿದೆ ಎಂದು ಹೇಳಿದರು.

ಇದೆ ವೇಳೆ ಎ.ಐ.ಜಿ.ಡಿ.ಎಸ್.ಯು.ಸಂಘಟನೆಯ ಅಧ್ಯಕ್ಷರು. ಜಿ.ಬಿ. ಕಾಳಿಗೇಗೌಡ, ಕಾರ್ಯದರ್ಶಿ ಕೆ.ಜೆ. ಶಿವಾಜಿ, ಕಾರ್ಯಾಧ್ಯಕ್ಷರು ಹೆಚ್.ಇ. ಜಯಣ್ಣ, ಸಂಘಟನಾ ಕಾರ್ಯದರ್ಶಿ ದಿನೇಶ್, ಮಲ್ಲೇಶ್, ಸತೀಶ್, ವಾಸು, ವಿನೋದ್ ಕುಮಾರ್, ಮಧು, ಎನ್.ಯು.ಜಿ.ಡಿ.ಎಸ್.ಯು.ನ. ವಲಯ ಕಾರ್ಯದರ್ಶಿ, ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಸ್ಯೆ ಬಗೆಹರಿದ್ರೆ 6 ತಿಂಗಳಲ್ಲಿ 1 ಲಕ್ಷ ನೇಮಕಾತಿ : ಸಾರಿಗೆ ಸಚಿವ
ಸರ್ಕಾರದಿಂದ ಮಹತ್ವದ ನಿರ್ಧಾರ : ವಿಪತ್ತು ವೇಳೆ ಇಡೀ ಊರಿನ ರೈತರಿಗೆ ಪರಿಹಾರ