ಕನ್ನಡಪ್ರಭ ವಾರ್ತೆ ಕೋಲಾರಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ತಾಲೂಕಿನಾದ್ಯಂತ ಗುರುವಾರ ಗ್ರಾಮ ಆಡಳಿತ ಸಿಬ್ಬಂದಿ ಕಪ್ಪು ಪಟ್ಟಿ ಧರಿಸಿ ಶಾಂತಿಯುತವಾಗಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು, ತಹಸೀಲ್ದಾರ್ ನಯನ ಮೂಲಕ ಕಂದಾಯ ಸಚಿವ ಕೃಷ್ಣಭೈರೇಗೌಡರಿಗೆ ಮನವಿ ಸಲ್ಲಿಸಿದರು. ನಗರದ ತಾಲ್ಲೂಕು ಕಚೇರಿ ಮುಂಬಾಗ ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕೆಲಸಗಳನ್ನು ಬದಿಗೊತ್ತಿ ಲೇಖನಿ ಸ್ಥಗಿತಗೊಳಿಸಿ ಮೌನ ಪ್ರತಿಭಟನೆಯಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿದರು. ಸಿಬ್ಬಂದಿಯ ವಿವಿಧ ಬೇಡಿಕೆ
ಕಂದಾಯ ಇಲಾಖೆಯ ೩ ವರ್ಷ ವರ್ಷ ಸೇವೆ ಪರಿಗಣಿಸಿ ಅಂತರ್ ಜಿಲ್ಲಾ ವರ್ಗಾವಣೆಗಾಗಿ ಕಂದಾಯ ಇಲಾಖೆಯಲ್ಲಿ ಹೊಸ ಮಾರ್ಗಸೂಚಿ ರಚಿಸಬೇಕು, ಬೆಳೆ ಸಮೀಕ್ಷೆ ಹಾಗೂ ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ/ತೋಟಗಾರಿಕೆ ಇಲಾಖೆಗಳು ನಿರ್ವಹಿಸುವಂತೆ ಮಾರ್ಗಸುಚಿ ಹೊರಡಿಸಿ ರಾಜ್ಯದ ಗ್ರಾಮ ಸಹಾಕರಿಗೆ ಸೇವಾಭದ್ರತೆ ಒದಗಿಸಬೇಕು ಎಂದು ಪ್ರತಿಭಟನೆ ನಡೆಸಿದರು. ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲ್ಲೂಕ ಅಧ್ಯಕ್ಷ ಆನಂದ್ ಕುಮಾರ್ ಉಪಾಧ್ಯಕ್ಷೆ ವೈಷ್ಣವಿ ಪ್ರದಾನ ಕಾರ್ಯದರ್ಶಿ ಮಂಜುನಾಥ್ ರೆಡ್ಡಿ, ಗ್ರಾಮ ಅಡಳಿತಾದಿಕಾರಿಗಳಾದ ಗಗನ್, ರಾಜೇಶ್, ಅರ್ಚನ ಇದ್ದರು.