ಕನ್ನಡಪ್ರಭ ವಾರ್ತೆ ಕುದೂರು ಕುದೂರು ಗ್ರಾಮಪಂಚಾಯಿತಿಯಲ್ಲಿ ಅಧಿಕಾರಿಗಳು ಹಾಗೂ ಬಿಲ್ ಕಲೆಕ್ಟರ್‌ಗಳು ಹಣ ದುರ್ಬಳಕೆ ಹಾಗೂ ಅಕ್ರಮ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಎಸ್ ಎಲ್ ಆರ್ ಶೀಟ್ ಫ್ಯಾಕ್ಟರಿಗೆ ಕಾನೂನು ಬಾಹಿರವಾಗಿ ಎನ್‌ಒಸಿ ನೀಡಲಾಗಿದೆ. ಗ್ರಾಮಠಾಣಾ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ನೀಡಿದ್ದಾರೆ ಎಂದು ದೂರಿದರು.ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ತಾಪಂ ಇಒ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಪರಿಶೀಲಿಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ ನಂತರ ಸದಸ್ಯರು ಮತ್ತು ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.