ಸುಳ್ಳು ಜಾತಿನಿಂದನೆ ಪ್ರಕರಣ ಕೈ ಬಿಡುವಂತೆ ಗ್ರಾಮಸ್ಥರಿಂದ ಠಾಣೆ ಎದುರು ಪ್ರತಿಭಟನೆ

KannadaprabhaNewsNetwork |  
Published : Dec 16, 2024, 12:45 AM IST
15ಕೆಎಂಎನ್ ಡಿ28 | Kannada Prabha

ಸಾರಾಂಶ

ಪೊಲೀಸರು ಮಂಜುನಾಥ್ ನೀಡಿರುವ ಸುಳ್ಳು ಜಾತಿ ನಿಂದನೆ ಪ್ರಕರಣ ಕೈಬಿಡಬೇಕು. ಸ್ಥಳಕ್ಕೆ ಡಿವೈಎಸ್ಪಿ ಆಗಮಿಸಿ ಪರಿಶೀಲನೆ ನಡೆಸಬೇಕು, ಅಲ್ಲಿವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟುಹಿಡಿದರು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸುಳ್ಳು ಜಾತಿ ನಿಂದನೆ ಪ್ರಕರಣವನ್ನು ಕೈ ಬಿಡುವಂತೆ ಆಗ್ರಹಿಸಿ ಸೆಣಬ ಗ್ರಾಮದ ಸವರ್ಣೀಯರು, ಗ್ರಾಮಸ್ಥರು ಪಟ್ಟಣದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ದಲಿತ ಹೋರಾಟಗಾರ್ತಿ ಜಯಲಕ್ಷ್ಮೀ ನೇತೃತ್ವದಲ್ಲಿ ಗ್ರಾಮದ ಸರ್ವಣೀಯರು, ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಸಣಬ ಗ್ರಾಮದ ದಲಿತ ಯುವಕ ಮಂಜುನಾಥ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಸುಳ್ಳು ಜಾತಿ ನಿಂದನೆ ಪ್ರಕರಣವನ್ನು ಪೊಲೀಸರು ಕೈಬಿಡುವಂತೆ ಒತ್ತಾಯಿಸಿದರು.

ಗ್ರಾಮದಲ್ಲಿ ಕಬ್ಬು ಕಟಾವು ಮಾಡಲು ಹೊರಗಡೆಯಿಂದ ಬಂದಿರುವ ಕಾರ್ಮಿಕರು ಗ್ರಾಮದಲ್ಲಿ ಮೋಟರ್‌ವೊಂದನ್ನು ಕಳ್ಳತನ ಮಾಡಿ ಸಿಕ್ಕಿಬಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಶುಕ್ರವಾರ ರಾತ್ರಿ ಗ್ರಾಮದಲ್ಲಿ ನ್ಯಾಯ ಪಂಚಾಯಿತಿ ನಡೆಸುತ್ತಿದ್ದ ಸ್ಥಳಕ್ಕೆ ಆಟೋ ಮೂಲಕ ಆಗಮಿಸಿದ ದಲಿತ ಯುವಕ ಮಂಜುನಾಥ್ ಏಕಾಏಕಿ ಗ್ರಾಮದ ಯಮಾನರು, ಯುವಕರಿಗೆ ಬಾಯಿಗೆ ಬಂದಂತೆ ಅಶ್ಲೀಲ ಪದಗಳಿಂದ ಬೈಯಲು ಆರಂಭಿಸಿದ್ದಾನೆ.

ಈ ವೇಳೆ ಗ್ರಾಮದ ಯುವಕರು ಹಾಗೂ ಮಂಜುನಾಥ್ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಬಳಿಕ ಗ್ರಾಮದ ಯಜಮಾನರು ಇಬ್ಬರನ್ನು ಸಮಾಧಾನ ಮಾಡಿ ಕಳುಸಿದ್ದಾರೆ. ಆದರೆ, ದಲಿತ ಯುವಕ ಮಂಜುನಾಥ್ ಪೊಲೀಸ್ ಠಾಣೆಗೆ ತೆರಳಿ ಗ್ರಾಮದ ಯಜಮಾನರು, ಕೆಲವು ಯುವಕರ ಮೇಲೆ ಜಾತಿ ನಿಂದನೆ ಪ್ರಕರಣದಡಿ ಸುಳ್ಳು ದೂರು ನೀಡಿದ್ದಾರೆ. ಪೊಲೀಸರು ಸಹ ಪರಿಶೀಲಿಸದೆ ಪ್ರಕರಣ ದಾಖಲಿಸಿದ್ದಾರೆ ಎಂದು ಕಿಡಿಕಾರಿದರು.

ಪೊಲೀಸರು ಮಂಜುನಾಥ್ ನೀಡಿರುವ ಸುಳ್ಳು ಜಾತಿ ನಿಂದನೆ ಪ್ರಕರಣ ಕೈಬಿಡಬೇಕು. ಸ್ಥಳಕ್ಕೆ ಡಿವೈಎಸ್ಪಿ ಆಗಮಿಸಿ ಪರಿಶೀಲನೆ ನಡೆಸಬೇಕು, ಅಲ್ಲಿವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟುಹಿಡಿದರು.

ಬಳಿಕ ಸರ್ಕಲ್ ಇನ್ಸ್‌ಪೆಕ್ಟರ್ ವಿವೇಕಾನಂದ ಅವರು ಡಿವೈಎಸ್ಪಿ ಜತೆ ಚರ್ಚಿಸಿ ಬಳಿಕ ಸೋಮವಾರ ಗ್ರಾಮಕ್ಕೆ ಬಂದು ಪರಿಶೀಲನೆ ನಡೆಸಲಿದ್ದಾರೆ. ಅಲ್ಲಿವರೆಗೆ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು. ಡಿವೈಎಸ್‌ಪಿ ಗ್ರಾಮಕ್ಕೆ ಬಂದು ಪರಿಶೀಲನೆ ನಡೆಸದಿದ್ದರೆ ಮಂಗಳವಾರ ಇಡೀ ಗ್ರಾಮವೇ ಪೊಲೀಸ್ ಠಾಣೆಗೆ ಬಂದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿ ಬಳಿಕ ಪ್ರತಿಭಟನೆ ವಾಪಸ್ಸುಪಡೆದರು.

ಪ್ರತಿಭಟನೆಯಲ್ಲಿ ದಲಿತ ಹೋರಾಟಗಾರ್ತಿ, ಗ್ರಾಪಂ ಸದಸ್ಯೆ ಜಯಲಕ್ಷ್ಮೀ, ದಲಿತ ಮುಖಂಡರಾದ ಜವರಾಯಿ, ಜಯರಾಮು, ಮುಖಂಡರಾದ ಸಣ್ಣಪಾಪೇಗೌಡ, ಜವರೇಗೌಡ, ಬೆಟ್ಟೇಗೌಡ ಸೇರಿದಂತೆ ಅನೇಕ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಕನಿಷ್ಠ ಆದಾಯ ಮಿತಿ 3 ಲಕ್ಷ ರು.ಗೆ ಏರಿಕೆ: ಮುನಿಯಪ್ಪ
ಏ.1ರಿಂದ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ