ಬಿಸಿಲು ಮಾರಮ್ಮ ದೇವಾಲಯಕ್ಕೆ ಬರಲು ನಿಖಿಲ್‌ಗೆ ಗ್ರಾಮಸ್ಥರ ಮನವಿ

KannadaprabhaNewsNetwork |  
Published : Nov 20, 2026, 01:15 AM IST
19ಕೆಆರ್ ಎಂಎನ್ 5.ಜೆಪಿಜಿಹಾರೋಹಳ್ಳಿ ತಾಲೂಕು ದೊಡ್ಡಕುರುಬರಹಳ್ಳಿ ಗ್ರಾಮಸ್ಥರು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾದರು. | Kannada Prabha

ಸಾರಾಂಶ

ದೊಡ್ಡಕುರಬರಹಳ್ಳಿ ಗ್ರಾಮದ ಶ್ರೀ ಬಿಸಿಲು ಮಾರಮ್ಮ ದೇವಿಯ ನೂತನ ದೇವಾಲಯ ಉದ್ಘಾಟನೆ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೆ ದೇವಾಲಯ ಪ್ರವೇಶ ನಿರಾಕರಣೆ ಹಿನ್ನೆಲೆಯಲ್ಲಿ, ಗ್ರಾಮದ ನೂರಾರು ಗ್ರಾಮಸ್ಥರು ನಿಖಿಲ್ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿ ಭೇಟಿಯಾದರು.

ರಾಮನಗರ: ಹಾರೋಹಳ್ಳಿ ತಾಲೂಕು ದೊಡ್ಡಕುರಬರಹಳ್ಳಿಯ ಶ್ರೀ ಬಿಸಿಲು ಮಾರಮ್ಮನ ದೇವಾಲಯಕ್ಕೆ ಬರುವಂತೆ

ಗ್ರಾಮಸ್ಥರು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಮಾಡಿದರು.

ಬೆಂಗಳೂರಿನ ಜೆ.ಪಿ ನಗರದ ನಿವಾಸಕ್ಕೆ ಆಗಮಿಸಿದ ದೊಡ್ಡ ಕುರುಬರಹಳ್ಳಿ ಗ್ರಾಮದ ನೂರಾರು ಮಹಿಳೆಯರು, ಗ್ರಾಮಸ್ಥರು ಹಾಗೂ ಮುಖಂಡರು ನಿಖಿಲ್ ಕುಮಾರಸ್ವಾಮಿ ಮತ್ತು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ದೇಗುಲಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದರು. ದೊಡ್ಡಕುರಬರಹಳ್ಳಿ ಗ್ರಾಮದ ಶ್ರೀ ಬಿಸಿಲು ಮಾರಮ್ಮ ದೇವಿಯ ನೂತನ ದೇವಾಲಯ ಉದ್ಘಾಟನೆ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೆ ದೇವಾಲಯ ಪ್ರವೇಶ ನಿರಾಕರಣೆ ಹಿನ್ನೆಲೆಯಲ್ಲಿ, ಗ್ರಾಮದ ನೂರಾರು ಗ್ರಾಮಸ್ಥರು ನಿಖಿಲ್ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿ ಭೇಟಿಯಾದರು. ದೇವಸ್ಥಾನಕ್ಕೆ ಆಗಮಿಸಿ ತಾಯಿಯ ದರ್ಶನ ಪಡೆಯುವಂತೆ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು. ದೊಡ್ಡಕುರಬರಹಳ್ಳಿ ಜನತೆಯ ನಂಬಿಕೆ, ಪ್ರೀತಿಗೆ ನಾನು ಚಿರಋಣಿ. ನಂಬಿಕೆಗೆ ಮೋಸ ಮಾಡಲ್ಲ. ಎರಡು- ಮೂರು ದಿನಗಳಲ್ಲಿ ಗ್ರಾಮಕ್ಕೆ ಭೇಟಿ ನೀಡಿ, ತಾಯಿಯ ದರ್ಶನ ಪಡೆಯುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಭರವಸೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನ ನೆಚ್ಚದೇ ಊರ ಕೆರೆ ಸ್ಚಚ್ಛ ಮಾಡಿಕೊಂಡ ಗ್ರಾಮಸ್ಥರು
ಪಂಚತಂತ್ರ ಕಥೆಗಳ ಮೌಲ್ಯ ಮಕ್ಕಳ ಮನಃಪರಿವರ್ತನೆಗೆ ಸಹಕಾರಿ: ವಿವೇಕಾನಂದಗೌಡ ಪಾಟೀಲ