ಕನ್ನಡಪ್ರಭ ವಾರ್ತೆ ದಾವಣಗೆರೆ
ತಾಲೂಕಿನ ಆನಗೋಡು ಗ್ರಾಮದ ಶ್ರೀವಾಲ್ಮೀಕಿ ಸಮುದಾಯ ಭವನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ತಾಲೂಕು ಆಡಳಿತದ ವತಿಯಿಂದ ‘ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಪರಿಸರ ಜಾಗೃತಿ ಸಮಾವೇಶ ಹಾಗೂ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ನಗರ, ಪಟ್ಟಣಗಳು ಸ್ವಚ್ಛ ನಗರಿ ಎಂದು ಹೆಸರು ಪಡೆಯಲು ಪೌರ ಕಾರ್ಮಿಕರೇ ಕಾರಣವಾಗಿದ್ದಾರೆ. ಅದೇ ರೀತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪೌರ ಕಾರ್ಮಿಕರನ್ನು ನೇಮಿಸಿಕೊಂಡರೆ ಗ್ರಾಮೀಣ ಪ್ರದೇಶಗಳು ಕೂಡ ಸ್ವಚ್ಛ ಗ್ರಾಮಗಳಾಗಿರಲು ಸಾಧ್ಯ. ಈ ನಿಟ್ಟಿನಲ್ಲಿ ಗ್ರಾಮಾಡಳಿತಗಳು ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು.ಮಾಲಿನ್ಯವು ಗಾಳಿ, ನೀರು ಮತ್ತು ಮಣ್ಣಿನಲ್ಲಿ ಹಾನಿಕಾರಕ ವಸ್ತುಗಳ ಸೇರ್ಪಡೆಯಿಂದ ಪರಿಸರ ಮತ್ತು ಮಾನವ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಪರಿಸರ ಸಂರಕ್ಷಣೆಯು ಗಿಡ ಮರಗಳನ್ನು ಬೆಳೆಸುವುದು, ತ್ಯಾಜ್ಯ ನಿರ್ವಹಣೆ ಮತ್ತು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಮೂಲಕ ನೈಸರ್ಗಿಕ ಸಂಪನ್ಮೂಲಗಳನ್ನು ಕಾಪಾಡುವ ಮತ್ತು ಸುಸ್ಥಿರ ಜೀವನವನ್ನು ಉತ್ತೇಜಿಸುವುದು ಅತ್ಯಗತ್ಯವಾಗಿದೆ ಎಂದು ಸಲಹೆ ನೀಡಿದರು.
ತಹಸೀಲ್ದಾರ್ ಡಾ.ಎಂ.ಜಿ.ಅಶ್ವಥ, ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ವಿಶಾಲಕ್ಷಿ, ಪ್ರಾಧ್ಯಾಪಕ ಡಾ.ಎಸ್.ಶಿಶುಪಾಲ, ಉಪ ವೈಜ್ಞಾನಿಕ ಅಧಿಕಾರಿ ಡಾ.ಎಲ್.ಮಂಜುನಾಥ್, ಜಿಲ್ಲಾ ಪರಿಸರ ಅಧಿಕಾರಿ ರಾಜಶೇಖರ ಪುರಾಣಿಕ್, ಗ್ರಾಮಸ್ಥರು ಹಾಜರಿದ್ದರು.
ಕೆ.ಎಸ್.ಬಸವಂತಪ್ಪ ಶಾಸಕ.