ದೇಗುಲದ ಸ್ವಚ್ಛತೆಯಿಂದ ಗ್ರಾಮಗಳು ಸುಭಿಕ್ಷೆ: ಶರತ್ ಕುಮಾರ್ ಶೆಟ್ಟಿ

KannadaprabhaNewsNetwork |  
Published : Sep 24, 2024, 01:47 AM IST
ದೇಗುಲ23 | Kannada Prabha

ಸಾರಾಂಶ

ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ನೇತೃತ್ವದಲ್ಲಿ ವಿವಿಧ ಸಂಘಘಗಳ ಸಹಯೋಗದಲ್ಲಿ ೨೨೫ನೇ ಭಾನುವಾರದ ಪರಿಸರಸ್ನೇಹಿ ಆಭಿಯಾನದಂಗವಾಗಿ ನೆಹರು ಯುವ ಕೇಂದ್ರದ ಸ್ವಚ್ಛತಾ ಹೀ ಸೇವಾ ಯೋಜನೆಯಡಿ ಕೋಟತಟ್ಟು ಹಾಡಿ ಶ್ರೀ ವಿಷ್ಣುಮೂರ್ತಿ ದೇಗುಲದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕೋಟ

ದೇಗುಲಗಳ ಸ್ವಚ್ಛತೆಯಿಂದ ಮನಶುದ್ಧಿಯಾಗುತ್ತದೆ, ಗ್ರಾಮಗಳು ಸುಭಿಕ್ಷೆಗೊಳ್ಳುತ್ತದೆ ಎಂದು ಕೋಟದ ಸಹಕಾರಿ ವ್ಯವಸಾಯಕ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ನುಡಿದರು.

ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ನೇತೃತ್ವದಲ್ಲಿ ವಿವಿಧ ಸಂಘಘಗಳ ಸಹಯೋಗದಲ್ಲಿ ೨೨೫ನೇ ಭಾನುವಾರದ ಪರಿಸರಸ್ನೇಹಿ ಆಭಿಯಾನದಂಗವಾಗಿ ನೆಹರು ಯುವ ಕೇಂದ್ರದ ಸ್ವಚ್ಛತಾ ಹೀ ಸೇವಾ ಯೋಜನೆಯಡಿ ಕೋಟತಟ್ಟು ಹಾಡಿ ಶ್ರೀ ವಿಷ್ಣುಮೂರ್ತಿ ದೇಗುಲದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಪ್ರಸ್ತುತ ಹಾಡಿ ವಿಷ್ಣು ದೇಗುಲ ಪುರಾತನ ಹಿನ್ನಲ್ಲೆಯುಳ್ಳದ್ದು, ಇದರ ಬಗ್ಗೆ ಪಂಚವರ್ಣ ಸಂಸ್ಥೆ ನಿರಂತರ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿರುವುದು ಪರಿಸರದ ಬಗ್ಗೆ ಅವರಿಗಿರುವ ಕಾಳಜಿಯನ್ನು ಎತ್ತಿ ತೋರಿಸುತ್ತದೆ, ಈ ದಿಸೆಯಲ್ಲಿ ಪ್ರತಿಯೊಬ್ಬರು ತಮ್ಮೂರಿನ ಪರಿಸರ ಹಾಗೂ ದೇಗುಲಗಳ ಬಗ್ಗೆ ವಿಶೇಷ ಕಾಳಜಿ ಇರಲಿ ಎಂದು ಹಾರೈಸಿದರು.ಇದೇ ವೇಳೆ ಅಭಿಯಾನದಲ್ಲಿ ಸ್ವಚ್ಛತೆಯ ಬಗ್ಗೆ ಪ್ರತಿಜ್ಞಾ ವಿಧಿಯನ್ನು ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್ ಬೋಧಿಸಿದರು. ಕಾರ್ಯಕ್ರಮದ ನಂತರ ಸ್ವಯಂ ಸೇವಕರೆಲ್ಲ ಜೊತೆಗೂಡಿ ಗೋವಿಂದನ ನಾಮ ಕೀರ್ತನೆ ಮಾಡಿದರು.ಮುಖ್ಯ ಅತಿಥಿಗಳಾಗಿ ಸಾಸ್ತಾನದ ಗೋಳಿಬೆಟ್ಟು ಶಾಲಾ ಮುಖ್ಯ ಶಿಕ್ಷಕ ಮಹೇಶ್ ಮೊಗವೀರ, ದೇಗುಲದ ಮುಖ್ಯಸ್ಥರಾದ ಮಹೇಶ್ ಬಾಯರಿ, ಸುರೇಶ್ ಬಾಯರಿ, ಸುಜಾತ ಬಾಯರಿ , ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಹಂದಟ್ಟು ಮಹಿಳಾ ಬಳಗದ ಸ್ಥಾಪಾಕಾಧ್ಯಕ್ಷೆ ಪುಷ್ಭಾ ಕೆ. ಹಂದಟ್ಟು, ಕಾರ್ಯದರ್ಶಿ ವಸಂತಿ ಹಂದಟ್ಟು, ಮಣೂರು ಫ್ರೆಂಡ್ಸ್‌ನ ದಿನೇಶ್ ಆಚಾರ್, ಜೆಸಿಐ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!