ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿನಯ ತಿಮ್ಮಾಪುರ ಅಭಿಮಾನಿ ಬಳಗ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಚನ್ನು ಅಂಬಿ ಅವರು, ಜ.27ರಂದು ಬೆಳಗ್ಗೆ ಮುಧೋಳದ ನಗರದ ವಿವಿಧ ದೇವಸ್ಥಾನಗಳಲ್ಲಿ ಪೂಜಾ ಕಾರ್ಯಕ್ರಮ ಆಯೋಜಿಸಿದೆ. ಉಚಿತ ಆರೋಗ್ಯ ತಪಾಸಣೆ ಶಿಬಿರ, ಕ್ವಿಜ್ ಸ್ಪರ್ಧೆ, ರಕ್ತದಾನ ಶಿಬಿರ, ಹೆಲ್ಮೆಟ್ ವಿತರಣೆ ಮಾಡಲಾಗುವುದು ಎಂದು ಹೇಳಿದರು.
28ರಂದು ಬೆಳಗ್ಗೆ 10.30ಕ್ಕೆ ಮುಧೋಳದ ದಾನಮ್ಮದೇವಿ ಕಲ್ಯಾಣ ಮಂಟಪದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಸುಮಾರು 100ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿವೆ. 10 ಸಾವಿರಕ್ಕೂ ಅಧಿಕ ಉದ್ಯೋಗ ಅವಕಾಶಗಳು ಸಿಗಲಿವೆ. ಜಿಲ್ಲೆಯ ಉದ್ಯೋಗಾಂಕ್ಷಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.ದಾನಮ್ಮದೇವಿ ದೇವಸ್ಥಾನದಲ್ಲಿ ಜ.27ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಆರೋಗ್ಯ ಶಿಬಿರ ನಡೆಯಲಿದ್ದು, ನುರಿತ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ವಿನಯ ತಿಮ್ಮಾಪುರ ಅವರ 31ನೇ ಜನ್ಮದಿನವನ್ನು ವಿಶೇಷವಾಗಿ ಆಚರಿಸಲು ಅಭಿಮಾನಿ ಬಳಗ ತೀರ್ಮಾನಿಸಿದೆ ಎಂದು ತಿಳಿಸಿದರು.