ವಿಧಾನ ಪರಿಷತ್ತಿನ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ.23ರಂದು ಚುನಾವಣೆ ನಡೆಯಲಿದ್ದು, ಕ್ಷೇತ್ರದಾದ್ಯಂತ ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ನಗರದಲ್ಲಿ ನೀತಿ ಸಂಹಿತೆ ಪಾಲನೆಯಲ್ಲಿ ಅಧಿಕಾರಿಗಳು ತಾರತಮ್ಯ ಮಾಡುತ್ತಿರುವುದು ಕಂಡುಬಂದಿದೆ.
ರಾಣಿಬೆನ್ನೂರು: ವಿಧಾನ ಪರಿಷತ್ತಿನ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ.23ರಂದು ಚುನಾವಣೆ ನಡೆಯಲಿದ್ದು, ಕ್ಷೇತ್ರದಾದ್ಯಂತ ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ನಗರದಲ್ಲಿ ನೀತಿ ಸಂಹಿತೆ ಪಾಲನೆಯಲ್ಲಿ ಅಧಿಕಾರಿಗಳು ತಾರತಮ್ಯ ಮಾಡುತ್ತಿರುವುದು ಕಂಡುಬಂದಿದೆ.
ನಗರದ ತಹಸೀಲ್ದಾರ್ ಕಚೇರಿ ಎದುರು ಶಿವಶಕ್ತಿ ಯುದ್ಧ ಟ್ಯಾಂಕರ್ ಸ್ಥಾಪಿಸಲಾಗಿದ್ದು ಅದರಲ್ಲಿ ಶಾಸಕ ಪ್ರಕಾಶ ಕೋಳಿವಾಡ ಅವರ ಹೆಸರು ಹಾಗೂ ಉದ್ಘಾಟನೆಯ ಶಿಲಾನ್ಯಾಸಕ್ಕೆ ಸಂಬಂಧಿಸಿದ ವಿವರಗಳಿವೆ. ಇದಲ್ಲದೆ ನಗರದ ಬಸ್ ನಿಲ್ದಾಣದ ಎದುರಿನ ನಗರಸಭೆ ವ್ಯಾಪ್ತಿಯಲ್ಲಿ ಮುಂದಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ಎಲ್ಇಡಿ ಜಾಹೀರಾತು ಪರದೆಯಲ್ಲಿ ವಿಡಿಯೋ ಪ್ರಸಾರವಾಗುತ್ತಿದೆ. ಇದಕ್ಕೆ ವ್ಯತಿರಿಕ್ತವಾಗಿ ಮಾಜಿ ಶಾಸಕ ಅರುಣಕುಮಾರ ಪೂಜಾರ ಅವರ ಅವಧಿಯಲ್ಲಿ ನಗರದ ಕೆಇಬಿ ವಿನಾಯಕ ದೇವಸ್ಥಾನದ ಬಳಿಯ ಕಾರು ನಿಲುಗಡೆ ಸ್ಥಳದಲ್ಲಿ ನಿರ್ಮಿಸಲಾದ ಮೇಲ್ಛಾವಣಿಯಲ್ಲಿ ಆಗಿನ ಶಾಸಕ ಅರುಣಕುಮಾರ ಪೂಜಾರ ಹಾಗೂ ಬಿಜೆಪಿ ನಾಯಕರ ಭಾವಚಿತ್ರಗಳನ್ನು ಅಳವಡಿಸಲಾಗಿತ್ತು. ಅವುಗಳನ್ನು ಮರೆಮಾಚಿದ್ದಾರೆ. ಆದರೆ ಶಾಸಕ ಪ್ರಕಾಶ ಕೋಳಿವಾಡ ಅವರ ಭಾವಚಿತ್ರವಿರುವ ಸ್ಥಳದಲ್ಲಿ ಇದೇ ಕ್ರಮ ಕೈಗೊಳ್ಳದಿರುವುದು ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಪ್ರಶ್ನೆ ಮೂಡಿಸಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.
ಇದೇ ರೀತಿ ನಗರದ ವಿವಿಧ ಸರ್ಕಾರಿ ಕಚೇರಿಗಳ ವ್ಯಾಪ್ತಿಯಲ್ಲಿಯೂ ನೀತಿ ಸಂಹಿತೆ ಪಾಲನೆಯಲ್ಲಿ ಲೋಪಗಳಾಗಿವೆ ಎಂಬ ದೂರುಗಳು ಕೇಳಿಬರುತ್ತಿವೆ. ಕಳೆದ ತಿಂಗಳಿನಿಂದಲೇ ನೀತಿ ಸಂಹಿತೆ ಜಾರಿಯಲ್ಲಿದ್ದರೂ, ಸಂಬಂಧಪಟ್ಟ ಚುನಾವಣಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.