ಪರಿಶಿಷ್ಟ ಮೇಲೆ ದೌರ್ಜ್ಯನ್ಯ: ತ್ವರಿತ ಕ್ರಮ ಕೈಗೊಳ್ಳಿ

KannadaprabhaNewsNetwork |  
Published : Jul 11, 2025, 11:48 PM IST
೧೧ಕೆಎಲ್‌ಆರ್-೪ಕೋಲಾರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಎಸ್.ಸಿ-ಎಸ್.ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾತನಾಡುತ್ತಿರುವುದು. | Kannada Prabha

ಸಾರಾಂಶ

.ಅನುಸೂಚಿತ ಜಾತಿ, ಪಂಗಡಗಳ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಆಯಾ ತಾಲೂಕು ವ್ಯಾಪ್ತಿಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಸಮಿತಿ ಸದಸ್ಯರನ್ನು ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಪ.ಜಾತಿ ಹಾಗೂ ಪ.ಪಂಗಡಗಳ ಕುಂದು ಕೊರತೆಗಳ ಸಭೆಗೆ ಆಹ್ವಾನಿಸಿ

ಕನ್ನಡಪ್ರಭ ವಾರ್ತೆ ಕೋಲಾರಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಇಂತಹ ಮಹತ್ತರ ಸಭೆಗೆ ಸಮರ್ಪಕ ಮಾಹಿತಿ ಒದಗಿಸದಿದ್ದಲ್ಲಿ ಸಂಬಂಧಿಸಿದ ಅಧಿಕಾರಿ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ವರ್ಗದ (ದೌರ್ಜನ್ಯ ತಡೆ) ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಸಭೆಗೆ ಮುಖಂಡರನ್ನು ಆಹ್ವಾನಿಸಿ

ಅನುಸೂಚಿತ ಜಾತಿ, ಪಂಗಡಗಳ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಆಯಾ ತಾಲೂಕು ವ್ಯಾಪ್ತಿಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಸಮಿತಿ ಸದಸ್ಯರನ್ನು ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಪ.ಜಾತಿ ಹಾಗೂ ಪ.ಪಂಗಡಗಳ ಕುಂದು ಕೊರತೆಗಳ ಸಭೆಗೆ ಆಹ್ವಾನಿಸಿ ಇದರಿಂದ ಸ್ಥಳೀಯವಾಗಿ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.ಎಸ್‌ಸಿಪಿ ಹಾಗೂ ಟಿಎಸ್‌ಪಿ ಅನುದಾನದಲ್ಲಿ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನಗಳ ನಿರ್ವಹಣೆ ಗ್ರಾಪಂ ಮಟ್ಟದಲ್ಲಿ ನಿರ್ವಹಣಾ ಸಮಿತಿಯ ಮೂಲಕ ಸಮರ್ಪಕವಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ದೌರ್ಜನ್ಯದ ವಿರುದ್ಧ ಕ್ರಮ

ಕೋಲಾರ ಎಸ್‌ಪಿ ಡಾ.ಬಿ.ನಿಖಿಲ್ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಜನರ ಮೇಲೆ ಹಲ್ಲೆ, ದೌರ್ಜನ್ಯಗಳು ನಡೆದರೆ ತಕ್ಷಣವೇ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಹಾಗೂ ಪ್ರತಿ ಪೊಲೀಸ್ ಠಾಣೆಯಲ್ಲಿಯೂ ಕುಂದು ಕೊರತೆ ಸಭೆ ನಡೆಸಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಿದರು. ಸುಗಟೂರಿನ ವಿದ್ಯಾರ್ಥಿನಿಲಯಗಳಲ್ಲಿ ವಾರಾಂತ್ಯಗಳಲ್ಲಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿಲಯಪಾಲಕರಿಗೆ ನೋಟಿಸ್ ಜಾರಿ ಮಾಡಲಾಗುವುದು. ಎಂದು ಸಂಬಂಧಪಟ್ಟ ಅಧಿಕಾರಿ ತಿಳಿಸಿದರು. ವಿವಿಧ ಇಲಾಖೆಯಲ್ಲಿ ಜಾರಿ ಇರುವ ಎಸ್‌ಸಿಪಿ, ಟಿ.ಎಸ್.ಪಿ ಯೋಜನೆಗಳ ಕುರಿತು ಹೆಚ್ಚು ಅರಿವು ಮುಡಿಸಬೇಕು ಎಂದು ಸಮಿತಿ ಸದಸ್ಯರು ಒತ್ತಾಯಿಸಿದರು.

ಕೋಚಿಂಗ್ ಸೆಂಟರ್‌ಗೆ ಸ್ಥಳ

ಪರಿಶಿಷ್ಟ ಜಾತಿ, ವರ್ಗದ ವಿದ್ಯಾರ್ಥಿಗಳಿಗೆ ಐಎಎಸ್, ಐಪಿಎಸ್ ಕೋಚಿಂಗ್ ಸೆಂಟರ್ ಪ್ರಾರಂಭಿಸಲು ಸ್ಥಳ ಗುರುತಿಸಿಕೊಡಲು ಸದಸ್ಯರು ಕೋರಿದರು. ಇದಕ್ಕಾಗಿ ಹೊಳಲಿ ಗ್ರಾಮದಲ್ಲಿ ೯ ಎಕರೆ ಜಾಗ ಗುರುತಿಸಲಾಗಿದ್ದು, ತಂತಿ ಬೇಲಿ ಹಾಕಲಾಗಿದೆ ಎಂದು ಸಂಬಂಧಿತ ಅಧಿಕಾರಿಗಳು ಸಭೆಗೆ ತಿಳಿಸಿದರು.

ಸದಸ್ಯ ಎಂ.ಮಂಜುನಾಥ್ ಮಾತನಾಡಿ, ಕಸಬಾ ತಾಲ್ಲೂಕಿನ ಅಣ್ಣಿಹಳ್ಳಿ ಗ್ರಾಪಂ ಗ್ರಾಮವೊಂದರಲ್ಲಿ ಪರಿಶಿ? ಜಾತಿ ಕಾಲೋನಿಯಲ್ಲಿ ರಸ್ತೆಗೆ ಅಡ್ಡಲಾಗಿ ಕಸ ಸಂಗ್ರಹಣೆ ಆಗುತ್ತಿದ್ದು, ಅದರಿಂದ ಉಂಟಾಗುವ ದುರ್ವಾಸನೆಯಿಂದಾಗಿ ಓಡಾಡಲು ಸಾಧ್ಯವಾಗುತ್ತಿಲ್ಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಕ್ಷಣವೇ ಕ್ರಮವಹಿಸಿ ಆ ಜಾಗದಲ್ಲಿ ಪೈಪ್‌ಲೈನ್ ಅಳವಡಿಸಲು ಕ್ರಮ ಕೈಗೊಂಡು ಅನುಪಾಲನಾ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ತಿಳಿಸಿದರು.

ಆ್ಯಂಬುಲೆನ್ಸ್‌ ಕೊರತೆ

ಗಡಿ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ತಕ್ಷಣವೇ ಕ್ರಮ ವಹಿಸಬೇಕು. ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಆ್ಯಂಬುಲೆನ್ಸ್‌ ಕೊರತೆ ಇದೆ ಎಂದು ಸದಸ್ಯರು ದೂರಿದರು ಅದಕ್ಕೆ, ತಕ್ಷಣವೇ ಸ್ಪಂದಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಜಿಲ್ಲಾಧಿಕಾರಿ ತಾಕೀತು ಮಾಡಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸನ್, ಅನುಸೂಚಿತ ಜಾತಿ, ಅನುಸೂಚಿತ ಪಂಗಡ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆ ನಿರ್ವಹಿಸಿದರು. ಸಭೆಯಲ್ಲಿ ಜಿಪಂ ಸಿಇಓ ಡಾ.ಪ್ರವೀಣ್ ಪಿ.ಬಾಗೇವಾಡಿ, ಕೆಜಿಎಫ್ ಎಸ್‌ಪಿ ಶಾಂತರಾಜು, ಎಡಿಸಿ ಮಂಗಳ, ಉಪವಿಭಾಗಾಧಿಕಾರಿ ಡಾ.ಮೈತ್ರಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಜಾಗೊಳಿಸಿದ್ದ ಗುತ್ತಿಗೆ ಕಾರ್ಮಿಕರನ್ನು ಪುನಃ ಕೆಲಸಕ್ಕೆ ತೆಗೆದುಕೊಳ್ಳುವ ಕುರಿತು ಒಪ್ಪಂದ
ಸರ್ಕಾರಿ ಭೂಮಿ ಒತ್ತುವರಿ ಶೀಘ್ರದಲ್ಲೇ ತೆರವು: ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ