ಮಹಿಳೆಯರ ಮೇಲೆ ದೌರ್ಜನ್ಯ ಸಲ್ಲದು

KannadaprabhaNewsNetwork |  
Published : Mar 22, 2025, 02:03 AM IST
21ಎಚ್ಎಸ್ಎನ್19 : ದೇಶಭಕ್ತರ ಬಳಗ ಬೇಲೂರು ಮತ್ತು ಸ್ಪಂದನ ಸಿರಿ ವೇಧಿಕೆ  ಸಂಯುಕ್ತಾಶ್ರಯದಲ್ಲಿ.. ಮಹಿಳಾ ದಿನಾಚರಣೆಯ ಅಂಗವಾಗಿ  ಕೋಟೆ ಪ್ರೈಮರಿ ಸ್ಕೂಲಿನಲ್ಲಿ. ನಡೆದ ಅಹಲ್ಯಾಬಾಯಿ ಹೋಳ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. | Kannada Prabha

ಸಾರಾಂಶ

ನಮಗೆ ತಾಯಿಯಾಗಿ, ತಂಗಿಯಾಗಿ, ಗೆಳತಿಯಾಗಿ ಹೆಣ್ಣು ಬೇಕು. ಆದರೆ ಅದೇ ಹೆಣ್ಣು ಮಗುವನ್ನು ಸ್ವೀಕರಿಸಲು ಮನಸ್ಸು ಒಪ್ಪದೇ ಹೆಣ್ಣು ಭ್ರೂಣ ಹತ್ಯೆಯನ್ನು ಮಾಡುತ್ತಿರುವುದು ಅವರ ಮೇಲೆ ಎಸಗುತ್ತಿರುವ ಪ್ರಮುಖ ದೌರ್ಜನ್ಯವಾಗಿದೆ. ಹೆಣ್ಣು ಇಂದು ಬರೀ ಅಡುಗೆ ಮನೆಗೆ ಸೀಮಿತವಾಗಿರದೆ ಬಾಹ್ಯಾಕಾಶಯಾನ ಮಾಡುತ್ತಿರುವುದು ಸಮಾಜದಲ್ಲಿ ಕಂಡು ಬರುತ್ತಿರುವ ಅತ್ಯುತ್ತಮ ಬೆಳವಣಿಗೆಯಾಗಿದೆ ಎಂದು ದೇಶಭಕ್ತಬಳಗದ ಅಧ್ಯಕ್ಷ ಡಾ. ಸಂತೋಷ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೇಲೂರು

ಮಹಿಳೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಬಹಳ ವೇಗವಾಗಿ ಮುನ್ನುಗ್ಗುತ್ತಿದ್ದರೂ ಸ್ತ್ರೀಯರ ಶೋಷಣೆ ಎಲ್ಲಾ ರಂಗದಲ್ಲೂ ಮುಂದುವರಿಯುತ್ತಿರುವುದು ಅತ್ಯಂತ ಆತಂಕದ ಸಂಗತಿಯಾಗಿದೆ ಎಂದು ದೇಶಭಕ್ತಬಳಗದ ಅಧ್ಯಕ್ಷ ಡಾ. ಸಂತೋಷ್ ಹೇಳಿದರು.

ದೇಶಭಕ್ತರ ಬಳಗ ಮತ್ತು ಸ್ಪಂದನ ಸಿರಿ ವೇದಿಕೆ ಸಂಯುಕ್ತಾಶ್ರಯದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಕೋಟೆ ಪ್ರೈಮರಿ ಸ್ಕೂಲಿನಲ್ಲಿ ನಡೆದ ಅಹಲ್ಯಾಬಾಯಿ ಹೋಳ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ನಮಗೆ ತಾಯಿಯಾಗಿ, ತಂಗಿಯಾಗಿ, ಗೆಳತಿಯಾಗಿ ಹೆಣ್ಣು ಬೇಕು. ಆದರೆ ಅದೇ ಹೆಣ್ಣು ಮಗುವನ್ನು ಸ್ವೀಕರಿಸಲು ಮನಸ್ಸು ಒಪ್ಪದೇ ಹೆಣ್ಣು ಭ್ರೂಣ ಹತ್ಯೆಯನ್ನು ಮಾಡುತ್ತಿರುವುದು ಅವರ ಮೇಲೆ ಎಸಗುತ್ತಿರುವ ಪ್ರಮುಖ ದೌರ್ಜನ್ಯವಾಗಿದೆ. ಹೆಣ್ಣು ಇಂದು ಬರೀ ಅಡುಗೆ ಮನೆಗೆ ಸೀಮಿತವಾಗಿರದೆ ಬಾಹ್ಯಾಕಾಶಯಾನ ಮಾಡುತ್ತಿರುವುದು ಸಮಾಜದಲ್ಲಿ ಕಂಡು ಬರುತ್ತಿರುವ ಅತ್ಯುತ್ತಮ ಬೆಳವಣಿಗೆಯಾಗಿದೆ. ಅಹಲ್ಯಬಾಯಿ ಹೋಳ್ಕರ್ ನಮ್ಮ ಭಾರತೀಯ ಸಂಸ್ಕೃತಿಯನ್ನು ರಕ್ಷಿಸುವಲ್ಲಿ ಧೀರ ನಿಲುವು ತಾಳಿ ಕಾಶಿ ಮುಂತಾದ ದೇವಾಲಯಗಳ ಪುನರುತ್ಥಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ಕಾರ್ಯದರ್ಶಿ ಮಹೇಶ್ ಮಾತನಾಡಿ, ಶಿಂಧೆ ಮನೆತನದಲ್ಲಿ ಹುಟ್ಟಿದ ಅಹಲ್ಯಾಬಾಯಿ ಹೋಳ್ಕರ್ ತನ್ನ ಬೇಜವಾಬ್ದಾರಿ ಪತಿಯಿಂದಾಗಿ ಹಲವಾರು ಸಂಕಷ್ಟಕ್ಕೊಳಗಾದರೂ ರಾಜ್ಯಭಾರವನ್ನು ತನ್ನ ಕೈಗೆತ್ತಿಕೊಂಡು ಭಾರತೀಯ ಸಂಸ್ಕೃತಿಯನ್ನು ರಕ್ಷಿಸುವಲ್ಲಿ ಮಹತ್ತರವಾದ ದೇಣಿಗೆ ಮತ್ತು ಕಾಣಿಕೆಯನ್ನು ಇತ್ತು ಓರ್ವ ಧೀಮಂತ ಮಹಿಳೆಯಾಗಿದ್ದರು. ಅವರ ಹೆಸರಿನ ಪ್ರಶಸ್ತಿಯನ್ನು ಬೇಲೂರು ಸ್ಪಂದನ ಸಿರಿ ವೇದಿಕೆಯ ಜಿಲ್ಲಾಧ್ಯಕ್ಷರಾದ ಆಶಾಕಿರಣ ಇವರ ಸಾಹಿತ್ಯ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿರುವ ಬಹುಮುಖ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸುವುದು ನಮಗೆ ಅತ್ಯಂತ ಸಂತೋಷದಾಯಕ ವಿಚಾರವಾಗಿರುತ್ತದೆ ಎಂದು ತಿಳಿಸಿದರು.

ಸ್ಪಂದನ ಸಿರಿ ವೇದಿಕೆಯ ಜಿಲ್ಲಾಧ್ಯಕ್ಷೆ ಆಶಾಕಿರಣ್ ಮಾತನಾಡಿ, ಈಗಿನ ಮಕ್ಕಳಲ್ಲಿ ಸಂಸ್ಕಾರದ ಕೊರತೆಯಿದ್ದು ಪೋಷಕರು ಮಕ್ಕಳಲ್ಲಿ ಸಂಸ್ಕಾರವನ್ನು ಬೆಳೆಸುವುದರ ಕಡೆಗೆ ಗಮನಹರಿಸಬೇಕು. ಹಾಗೆ ಪೋಷಕರು ತಮ್ಮ ಮಕ್ಕಳು ಹೆಚ್ಚು ಅಂಕ ಗಳಿಸಬೇಕು ಎಂಬ ಆಸೆಯ ಜೊತೆಗೆ ತಮ್ಮ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಬೆಳೆಸಬೇಕು ಎಂಬುದರ ಕಡೆ ಗಮನ ಹರಿಸಬೇಕು ಎಂದು ತಿಳಿಸಿದರು.

ಕೋಟೆ ಪ್ರೈಮರಿ ಸ್ಕೂಲಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಶಕುಂತಲಾ ಇವರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ವತಿಯಿಂದ ಅವರನ್ನು ಸನ್ಮಾಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!