ಸರ್ವಾಂಗೀಣ ಅಭಿವೃದ್ಧಿಯೇ ಮೊದಲ ಆದ್ಯತೆ: ಎ.ಎಸ್. ಪೊನ್ನಣ್ಣ

KannadaprabhaNewsNetwork |  
Published : Nov 08, 2026, 02:45 AM IST
ಕಕ್ಕಬೆ ಭಾಗದಲ್ಲಿ 3 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. | Kannada Prabha

ಸಾರಾಂಶ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆಯಾಗಿದ್ದು, ಕ್ಷೇತ್ರದ ಪ್ರತಿಯೊಂದು ಭಾಗಕ್ಕೂ ಅಗತ್ಯ ಮೂಲಸೌಕರ್ಯಗಳನ್ನು ತಲುಪಿಸಲು ಶ್ರಮಿಸಲಾಗುತ್ತಿದೆ ಎಂದು ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ತಿಳಿಸಿದರು. ಕಕ್ಕಬೆ ಭಾಗದಲ್ಲಿ 3 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿ ಅವರು ಮಾತನಾಡಿದರು.

ನಾಪೋಕ್ಲು: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆಯಾಗಿದ್ದು, ಕ್ಷೇತ್ರದ ಪ್ರತಿಯೊಂದು ಭಾಗಕ್ಕೂ ಅಗತ್ಯ ಮೂಲಸೌಕರ್ಯಗಳನ್ನು ತಲುಪಿಸಲು ಶ್ರಮಿಸಲಾಗುತ್ತಿದೆ ಎಂದು ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ತಿಳಿಸಿದರು.

ಕ್ಷೇತ್ರದ ಕಕ್ಕಬೆ ಭಾಗದಲ್ಲಿ 3 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿ ಅವರು ಮಾತನಾಡಿದರು.

ಸಾರ್ವಜನಿಕರ ಬಹುದಿನಗಳ ಬೇಡಿಕೆಯಂತೆ ರಸ್ತೆ, ಕುಡಿಯುವ ನೀರು ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಳಿಸಿ ಚಾಲನೆ ನೀಡಲಾಗಿದೆ. ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಶ್ರದ್ಧೆಯಿಂದ ಕೆಲಸ ನಿರ್ವಹಿಸಿ ದೀರ್ಘಕಾಲ ಬಾಳಿಕೆ ಬರುವಂತೆ ನಿರ್ಮಿಸಬೇಕು ಎಂದು ಸೂಚಿಸಿದರು.

ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸ್ಥಳೀಯ ನಾಗರಿಕರು ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕಕ್ಕಬೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಂಪನ್ ಅಯ್ಯಪ್ಪ, ಶೈಲಾ ಕುಟ್ಟಪ್ಪ, ಬಾಚಮಾಂಡ ರಾಜ ಪೂವಣ್ಣ, ಲವ ಚಿಣ್ಣಪ್ಪ, ಸೌಕತ್ ಅಲಿ, ಹರೀಶ್ ಮೊನ್ನಪ್ಪ, ಹ್ಯಾರೀಶ್, ಬೀನಾ ಪೂವಯ್ಯ, ಮಂಜು ದೇವಯ್ಯ, ಬಶೀರ್, ಶಾಫಿ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಗಿರೀಶ್, ಕಾರ್ಯಪಾಲಕ ಅಭಿಯಂತರ ಪ್ರಭು ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿ ಹೃದಯದ ಡಾ.ಚೆನ್ನಬಸವ ಶ್ರೀಗಳು: ತೋಂಟದಾರ್ಯ ಶ್ರೀ
ಶಿರಗುಪ್ಪಿ ಕಾರ್ಖಾನೆಯಿಂದ ₹4,000 ದರ ಘೋಷಣೆ