ಕನ್ನಡಪ್ರಭ ವಾರ್ತೆ ವಿರಾಜಪೇಟೆ
ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಮಗ್ರ ಆಪ್ತ ಸಮಾಲೋಚನೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ಆಪ್ತ ಸಮಾಲೋಚಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಶ್ವಿತಾ ಬಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಏಡ್ಸ್ ನ ಇತಿಹಾಸ, ಅದರ ಹರಡುವಿಕೆಗೆ ಕಾರಣಗಳು, ಸರ್ಕಾರ ಅದನ್ನು ನಿಯಂತ್ರಿಸಲು ಕೈಗೊಳ್ಳುತ್ತಿರುವ ಕ್ರಮಗಳು, ಕಾಯಿದೆ, ಕಳಂಕ ತಾರತಮ್ಯದ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ. ಕೆ. ಸಿ. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಏಡ್ಸ್ ನಿಯಂತ್ರಿಸುವುದರಲ್ಲಿ ಯುವಜನತೆ ಪಾತ್ರದ ಬಗ್ಗೆ ತಿಳಿಸಿದರು. ಮತ್ತು ಆರೋಗ್ಯ ಜಾಗೃತಿ ಕ್ರಮದ ಬಗ್ಗೆ ಮಾಹಿತಿಯನ್ನು ನೀಡಿದರು. ಏಡ್ಸ್ ಜಾಗೃತಿ ಕುರಿತ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಡಾ. ಬಸವರಾಜು. ಕೆ, ರೆಡ್ ರಿಬ್ಬನ್ ಕ್ಲಬ್ ಸಂಚಾಲಕರಾದ ರುದ್ರ, ಬೋಧಕ ಮತ್ತು ಬೋಧಕೇತರರು ಉಪಸ್ಥಿತರಿದ್ದರು.