ವಿರಾಜಪೇಟೆ: ಎಂಪ್ಲಯೇಬಿಲೀಟಿ ಸ್ಕಿಲ್ಸ್‌ ರಾಜ್ಯ ಮಟ್ಟದ ಕಾರ್ಯಾಗಾರ

KannadaprabhaNewsNetwork | Published : Nov 27, 2024 1:00 AM

ಸಾರಾಂಶ

ಕಾಲೇಜು ಶಿಕ್ಷಣ ಇಲಾಖೆ ಆಶ್ರಯದಲ್ಲಿ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಧಾನ ಮಂತ್ರಿ ಉಚ್ಛತ ಶಿಕ್ಷಣ ಅಭಿಯಾನದಡಿ ಸೋಮವಾರ ಎಂಪ್ಲಯೇಬಿಲೀಟಿ ಸ್ಕೀಲ್ಸ್ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರ ನಡೆಯಿತು.

ಕನ್ನಡಪ್ರಭ ವಾರ್ತೆ ವಿರಾಜಪೇಟೆ

ಉದ್ಯೋಗ ಪಡೆಯಲು ಅಂಕದ ಜೊತೆಗೆ ಮೌಲ್ಯಾಧಾರಿತ ಕೌಶಲ್ಯ ಕೂಡ ಅಗತ್ಯವಾಗಿದ್ದು, ಉದ್ಯೋಗ ಅವಕಾಶಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಕೌಶಲ್ಯ ತುಂಬಾ ಮುಖ್ಯ. ಕಲಿಯುವ ಮನೋಭಾವನೆಯನ್ನು ವಿದ್ಯಾರ್ಥಿಗಳು ಬೆಳಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಹೇಳಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆ ಆಶ್ರಯದಲ್ಲಿ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಧಾನ ಮಂತ್ರಿ ಉಚ್ಛತ ಶಿಕ್ಷಣ ಅಭಿಯಾನದಡಿ ಸೋಮವಾರ ಎಂಪ್ಲಯೇಬಿಲೀಟಿ ಸ್ಕೀಲ್ಸ್ ಕುರಿತು ಆಯೋಜಿಸಿದ್ದ ರಾಜ್ಯ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಜಿಲ್ಲಾ ಉದ್ಯೋಗಾಧಿಕಾರಿ ಮತ್ತು ಕೌಶಲ್ಯ ಅಧಿಕಾರಿ ರೇಖಾ ಗಣಪತಿ ಮಾತನಾಡಿ, ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರ ಕೂಡ ಕೌಶಲ್ಯ ಅಭಿವೃದ್ಧಿ ಇಲಾಖೆಯನ್ನು ಆರಂಭಿಸಿ ಅನೇಕ ವೃತ್ತಿಪರ ಶಿಕ್ಷಣವನ್ನು ನೀಡುತ್ತಿದೆ. ವಿದ್ಯಾರ್ಥಿಗಳು ಕೌಶಲ್ಯ ವೃತ್ತಿಪರ ತರಬೇತಿಗೆ ಹೆಸರು ನೊಂದಾಯಿಸುವಂತೆ ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ದಯಾನಂದ ಕೆ.ಸಿ. ಮಾತನಾಡಿ, ವಿದ್ಯಾರ್ಥಿಗಳು ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಉದ್ಯೋಗ ಅವಕಾಶಗಳನ್ನು ಪಡೆಯಬೇಕಾದರೆ ಕಠಿಣ ಶ್ರಮದ ಜೊತೆಗೆ ಹಲವಾರು ಉದ್ಯೋಗಕ್ಕೆ ಸಂಬಂಧಿಸಿದ ಕೌಶಲ್ಯಗಳು ಅತ್ಯಗತ್ಯ ಎಂದರು.

ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿ ಆರ್. ಕೆ ಬಾಲಚಂದ್ರ, ಕಾರ್ಯಾಗಾರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರಿಗೆ ಸ್ಫರ್ಧಾತ್ಮಕ ಪರೀಕ್ಷೆಗಳನ್ನು ಹೇಗ ಎದುರಿಸುವುದು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬರಬಹುದಾದ ಸಾಮಾನ್ಯ ಪ್ರಶ್ನೆಗಳ ಮಾದರಿ ಮತ್ತು ಬಹಳ ಸುಲಭವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಬೇಕಾದ ಹಲವಾರು ಕೌಶಲ್ಯಗಳ ಕುರಿತು ಮಾತನಾಡಿದರು.

ಕಾಲೇಜಿನ ಅಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಪಿ.ಎಂ.ಉಷಾ ಯೋಜನೆ ಸಂಚಾಲಕ ಡಾ. ಬಸವರಾಜು ಕೆ. ಇದ್ದರು.

ಕಾರ್ಯಾಗಾರದ ಸಂಚಾಲಕ ರಘುರಾಜ್‌ ಆರ್.ಸ್ವಾಗತಿಸಿದರು. ವಾಣಿಜ್ಯಶಾಸ್ತ್ರದ ಮುಖ್ಯಸ್ಥ ದಮಯಂತಿ ವಂದಿಸಿದರು. ಕಾಲೇಜಿನ ನಿರ್ವಾಹಣಾ ವಿಭಾಗದ ಉಪನ್ಯಾಸಕಿ ಧನ್ಯ ನಿರೂಪಿಸಿದರು. 200ಕ್ಕೂ ಹೆಚ್ಚು ಪ್ರಾಧ್ಯಾಪಕರುಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Share this article