ಸಿಂದೂರವೀರ ಗ್ರೂ.ಕ್ಯಾ. ಸಂದೀಪ್‌ ಶೆಟ್ಟಿಗೆ ವಿಶಿಷ್ಟ ಸೇವಾ ಪದಕ

KannadaprabhaNewsNetwork |  
Published : Jan 27, 2026, 04:00 AM IST
ಸಂದೀಪ್ | Kannada Prabha

ಸಾರಾಂಶ

ಪಾಕಿಸ್ತಾನದ ಉಗ್ರರಿಂದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ 2025 ರ ಮೇ ತಿಂಗಳಲ್ಲಿ ಭಾರತದ ಸೇನೆ, ನೌಕಾಪಡೆ ಮತ್ತು ವಾಯುಪಡೆ ಜಂಟಿಯಾಗಿ ನಡೆಸಿರುವ ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ಅಪ್ರತಿಮ ಸಾಹಸ ತೋರಿದ ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ಸಂದೀಪ್ ಶೆಟ್ಟಿ 77 ನೇ ಗಣರಾಜ್ಯೋತ್ಸವದ ಸಂದರ್ಭ ರಾಷ್ಟ್ರಪತಿಗಳು ನೀಡುವ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.

ಉಡುಪಿ: ಪಾಕಿಸ್ತಾನದ ಉಗ್ರರಿಂದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ 2025 ರ ಮೇ ತಿಂಗಳಲ್ಲಿ ಭಾರತದ ಸೇನೆ, ನೌಕಾಪಡೆ ಮತ್ತು ವಾಯುಪಡೆ ಜಂಟಿಯಾಗಿ ನಡೆಸಿರುವ ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ಅಪ್ರತಿಮ ಸಾಹಸ ತೋರಿದ ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ಸಂದೀಪ್ ಶೆಟ್ಟಿ 77 ನೇ ಗಣರಾಜ್ಯೋತ್ಸವದ ಸಂದರ್ಭ ರಾಷ್ಟ್ರಪತಿಗಳು ನೀಡುವ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಅವರು ಉಡುಪಿ ತಾಲೂಕಿನ ಕೊಂಡಾಡಿ ಗ್ರಾಮದ ಸದಾಶಿವ ಶೆಟ್ಟಿ ಕೊಂಡಾಡಿ-ದೇವಕಿ ಶೆಟ್ಟಿ ಶಾನಕಟ್ಟು ಅವರ ಪುತ್ರ.ಗ್ರೂಪ್ ಕ್ಯಾಪ್ಟನ್ ಸಂದೀಪ್ ಶೆಟ್ಟಿ 20 ವರ್ಷಗಳಿಂದ ವಾಯುಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, 2 ವರ್ಷಗಳಿಂದ ಕಾಶ್ಮೀರದ ಶ್ರೀನಗರದ ವಾಯುನೆಲೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದಾರೆ. ಆಪರೇಶನ್ ಸಿಂದೂರದಲ್ಲಿ ಅವರ ಅಸಾಧಾರಣ ರಾಷ್ಟ್ರಸೇವೆ, ಅಪ್ರತಿಮ ಧೈರ್ಯ, ದೇಶಕ್ಕಾಗಿ ಸಮರ್ಪಣಾ ಮನೋಭಾವ ಮತ್ತು ಸೇನೆಯ ಪರವಾಗಿ ಕರ್ತವ್ಯನಿಷ್ಠೆಗಾಗಿ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಗೆ ನೀಡಿ ಗೌರವಿಸಲಾಗುತ್ತಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರ್‌ಆರ್‌ ನಗರದ ಸುತ್ತ ಇಂದು ವಿದ್ಯುತ್‌ ವ್ಯತ್ಯಯ
ಬೆಂಗ್ಳೂರು-ಮುಂಬೈ ವಂದೇಭಾರತ್‌ ಸ್ಲೀಪರ್ ಸಿದ್ಧ!