ದೊಡ್ಡಬಳ್ಳಾಪುರ: ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಆವರಣದಲ್ಲಿದ್ದ ನಟ ದಿವಂಗತ ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಿರುವ ಘಟನೆ ಖಂಡಿಸಿ ಇಲ್ಲಿನ ಸಿದ್ದಲಿಂಗಯ್ಯ ವೃತ್ತದಲ್ಲಿರುವ ಡಾ. ವಿಷ್ಣುವರ್ಧನ್ ಅವರ ಪುತ್ಥಳಿ ಬಳಿ ಮೌನಚರಣೆ ಮಾಡಲಾಯಿತು.
ರಾಜ್ಯ ಸಂಘಟನಾ ಕಾರ್ಯದರ್ಶಿ ಅಗ್ನಿ ವೆಂಕಟೇಶ್, ತಾಲೂಕು ಅಧ್ಯಕ್ಷ ಶಶಿಧರ್, ಗ್ರಾಪಂ ಮಾಜಿ ಅಧ್ಯಕ್ಷ ಟಿ.ಜಿ. ಮಂಜುನಾಥ್ ಮತ್ತಿತರರು ಮಾತನಾಡಿದರು. ಬಳಿಕ ಡಾ.ವಿಷ್ಣುವರ್ಧನ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.
ತಾಲೂಕು ವಿಷ್ಣುಸೇನಾ ಸಮಿತಿಯ ಅಧ್ಯಕ್ಷ ಗಂಗರಾಜ್, ಕಾರ್ಯದರ್ಶಿ ಶಿವಕುಮಾರ್, ನಾರಾಯಣಪ್ಪ, ರಾಜು, ವೈರ್ ಶಿವು, ಗುರುಪ್ರಸಾದ್, ಮಂಜುನಾಥ್ ನಿಜಗಲ್, ಶಿವಕುಮಾರ್, ಮಹದೇವ್,ತರುಣ್ ಸರ್ಜಾ, ಉಮೇಶ್ ಮತ್ತಿತರರು ಭಾಗವಹಿಸಿದ್ದರು.ಫೋಟೋ-9ಕೆಡಿಬಿಪಿ1- ಬೆಂಗಳೂರಿನಲ್ಲಿ ವಿಷ್ಣುವರ್ಧನ್ ಸಮಾಧಿ ನೆಲಸಮ ಖಂಡಿಸಿ, ದೊಡ್ಡಬಳ್ಳಾಪುರದ ಡಾ.ವಿಷ್ಣುವರ್ಧನ್ ಪುತ್ಥಳಿ ಮುಂದೆ ಅಭಿಮಾನಿಗಳು ಮೌನಾಚರಣೆ ನಡೆಸಿದರು.