ಕನ್ನಡಪ್ರಭ ವಾರ್ತೆ, ಚಾಮರಾಜನಗರ
ಅಲ್ಲದೆ ಗೋ ಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ನಿಷೇಧ ಕಾಯ್ದೆಯನ್ನು ಯಥಾಸ್ಥಿತಿ ಮುಂದುವರಿಸುವಂತೆ ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯವು ೨೦೨೬-೨೭ನೇ ಸಾಲಿನಲ್ಲಿ ಕೇವಲ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ ೬೦ ದಿನಗಳ ಸೇನಾ ತರಬೇತಿ ನೀಡಲು ಅಲ್ಪಾವಧಿ ಟೆಂಡರ್ ಕರೆದಿರುವುದು ಅತ್ಯಂತ ಆಘಾತಕಾರಿ ಮತ್ತು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.ಕೇವಲ ಒಂದು ನಿರ್ದಿಷ್ಟ ಧಾರ್ಮಿಕ ಗುಂಪಿಗೆ ಮಾತ್ರ ರಕ್ಷಣಾ ಸಂಬಂಧಿತ ತರಬೇತಿ ನೀಡುವುದು ಮತ್ತು ಹಿಂದೂ ಸೇರಿದಂತೆ ಇತರೆ ಸಮುದಾಯಗಳ ಅರ್ಹ ಬಡ ವಿದ್ಯಾರ್ಥಿಗಳನ್ನು ಇದರಿಂದ ಹೊರಗಿಡುವುದು ಭಾರತೀಯ ಸಂವಿಧಾನದ ವಿಧಿ ೧೪ (ಸಮಾನತೆಯ ಹಕ್ಕು) ಹಾಗೂ ವಿಧಿ ೧೫(೧) ಸ್ಪಷ್ಟ ಉಲ್ಲಂಘನೆಯಾಗಿದೆ ಎಂದಿದ್ದಾರೆ.
ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಸತೀಶ್, ಜಿಲ್ಲಾ ಕಾರ್ಯದರ್ಶಿ ಮಧು, ಜಿಲ್ಲಾ ಸಹ ಕಾರ್ಯದರ್ಶಿಗಳಾದ ಶ್ರೀನಿವಾಸ್, ಬಜರಂಗದಳ ಜಿಲ್ಲಾ ಸಂಯೋಜಕ ರಮೇಶ್, ಜಿಲ್ಲಾ ಸಾಮರಸ್ಯ ಪ್ರಮುಖ್ ಮಂಜುನಾಥ್. ಜಿಲ್ಲಾ ಗೋರಕ್ಷಾ ಪ್ರಮುಖ ಶಂಕರ್, ನಗರ ಸಹ ಸಂಯೋಜಕ ಶಿವು ಅಭಿ, ರವಿ ಉಪಸ್ಥಿತರಿದ್ದರು.