ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಶ್ರೀಜಗಜ್ಯೋತಿ ಬಸವೇಶ್ವರಸ್ವಾಮಿ ಸಂಘದಿಂದ ಶ್ರೀಕೂಡಲಸಂಗ ದೇವಾಲಯದ ಆವರಣದಲ್ಲಿ ನಡೆದ ಶ್ರೀಬಸವೇಶ್ವರರ ಜಯಂತಿ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಮೇಲು ಕೀಳೆಂಬ ಭಾವವನ್ನು ತೊರೆದು ಎಲ್ಲರೂ ಒಂದೇ ಎಂಬ ಐಕ್ಯಮಂತ್ರವನ್ನು ಜಗತ್ತಿಗೆ ವಚನಗಳ ಮೂಲಕ ಸಾರಿ ಹೇಳಿದ ಬಸವಣ್ಣರ ಸಾಮಾಜಿಕ ಕ್ರಾಂತಿಯನ್ನು ಪ್ರತಿಯೊಬ್ಬರೂ ಅರಿತು ಬಾಳಬೇಕು. ಅವರ ಹೋರಾಟವನ್ನು ಅರಿತರೆ ಮಹಿಳೆಯರು ಸ್ವಾಭಿಮಾನದ ಬದುಕು ಕಂಡುಕೊಂಡು ಸಾಮರಸ್ಯದಿಂದ ಬದುಕಲು ಸಾಧ್ಯವಾಗುತ್ತದೆ ಎಂದರು.ದಿವ್ಯ ಸಾನಿಧ್ಯ ವಹಿಸಿದ್ದ ಕುದೇರು ಮಠದ ಇಮ್ಮಡಿ ಗುರುಲಿಂಗ ಸ್ವಾಮೀಜಿ ಮಾತನಾಡಿ, ಸತ್ಯ ಪ್ರತಿಪಾದನೆ ಮಾಡುವ ಮೂಲಕ ಜಗತ್ತಿಗೆ ಬೆಳಕಾದ ಬಸವಾದಿ ಶಿವಶರಣರು ಹಾಕಿಕೊಟ್ಟ ಮೌಲ್ಯಯುತ ಜೀವನ ಪಥವನ್ನು ಪ್ರತಿಯೊಬ್ಬರೂ ಅನುಸರಿಸಿದರೆ ಸಮಾಜದ ಉದ್ಧಾರ ಸಾಧ್ಯ ಎಂದರು.
ಈ ವೇಳೆ ತಾಲೂಕು ವೀರಶೈವ ಮಹಾಸಭಾದ ಅಧ್ಯಕ್ಷ ನಾಗರಾಜು, ಬಸವೇಶ್ವರ ಸಂಘದ ಅಧ್ಯಕ್ಷ ಜಗದೀಶ್, ದೀಪು, ಉಪಾಧ್ಯಕ್ಷ ಮಲ್ಲುಸ್ವಾಮಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್, ಶಿವಶಂಕರ್, ಪರಶಿವ ಮೂರ್ತಿ, ಶಿವಕುಮಾರ್, ಜಯಸ್ವಾಮಿ, ನಂಜುಂಡಸ್ವಾಮಿ, ಮಹದೇವಪ್ಪ, ನಂದೀಶ್, ನಿಂಗಪ್ಪ , ನಂಜುಂಡಸ್ವಾಮಿ ವಿಶ್ವನಾಥ್ , ಸೋಮಶೇಖರ್ , ಶೆಟ್ಟಹಳ್ಳಿ ಸುರೇಶ್ ಸೇರಿದಂತೆ ಇತರರು ಇದ್ದರು.