ವಿಶ್ವಕರ್ಮರು ಇಡೀ ಜಗತ್ತಿನ ಸೃಷ್ಠಿಶಕ್ತಿಯ ಪ್ರತೀಕವಾಗಿರುವುದರಿಂದ ಎಲ್ಲರೂ ಅವರನ್ನು ಗೌರವಿಸಬೇಕೆಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.
ಸೋಮವಾರಪೇಟೆ : ವಿಶ್ವಕರ್ಮರು ಇಡೀ ಜಗತ್ತಿನ ಸೃಷ್ಠಿಶಕ್ತಿಯ ಪ್ರತೀಕವಾಗಿರುವುದರಿಂದ ಎಲ್ಲರೂ ಅವರನ್ನು ಗೌರವಿಸಬೇಕೆಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.
ಇಲ್ಲಿನ ವಿಶ್ವಕರ್ಮ ಸಮಾಜದ ವತಿಯಿಂದ ಪಟ್ಟಣದ ಮಹಿಳಾ ಸಮಾಜದಲ್ಲಿ ನಡೆದ ವಿಶ್ವಕರ್ಮ ಜಯಂತಿ ಹಾಗೂ ಧಾರ್ಮಿಕ ಸಭಾಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಯಕದ ಗೌರವ, ಕೌಶಲ್ಯದ ಮಹತ್ವ, ಸೃಜನಶೀಲತೆ ಹಾಗೂ ಸಮಾಜ ನಿರ್ಮಾಣದಲ್ಲಿ ಅವರ ಕೊಡುಗೆಯನ್ನು ನಾವು ಗೌರವಿಸಬೇಕೆಂದರು. ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಸಮುದಾಯದಲ್ಲಿ ಜ್ಞಾನ ಮತ್ತು ಪ್ರತಿಭೆಯನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕಾಗಿದೆ ಎಂದರು. ಸಮಾಜದ ಹಿರಿಯರಾದ ಎಸ್.ಬಿ. ಲೀಲಾರಾಮ್, ತಾಲ್ಲೂಕು ಘಟಕದ ಅಧ್ಯಕ್ಷ ಅಜಯ್ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.